32 C
Mysore
Monday, March 30, 2020
Home All News ಲಾಕ್‌ಡೌನ್ ಆದೇಶ ಉಲ್ಲಂಘಿಸಿದ್ರೆ ಕ್ರಿಮಿನಲ್ ಕೇಸ್…ಪೊಲೀಸ್ ಕಮೀಷನರ್ ಖಡಕ್ ವಾರ್ನಿಂಗ್…

ಲಾಕ್‌ಡೌನ್ ಆದೇಶ ಉಲ್ಲಂಘಿಸಿದ್ರೆ ಕ್ರಿಮಿನಲ್ ಕೇಸ್…ಪೊಲೀಸ್ ಕಮೀಷನರ್ ಖಡಕ್ ವಾರ್ನಿಂಗ್…

ಕೊರೊನಾ ವೈರಸ್ ತಡೆಗಟ್ಟಲು ಜಿಲ್ಲಾಡಳಿತ ಸಮರೋಪಾದಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ.ಆದರೆ ಸಾರ್ವಜನಿಕರು ಸೂಕ್ತವಾಗಿ ಸ್ಪಂದಿಸುತ್ತಿಲ್ಲವೆಂದು ಬೇಸರವೂ ವ್ಯಕ್ತವಾಗುತ್ತಿದೆ.ಸಾರ್ವಜನಿಕರ ಮೇಲೆ ನಿಯಂತ್ರಣ ಹೇರಲು ಪೊಲೀಸ್ ಇಲಾಖೆ ತೀರ್ಮಾನಿಸಿದೆ.ಲಾಕ್ ಡೌನ್ ನಿಯಮಗಳನ್ನ ಉಲ್ಲಂಘಿಸಿದರೆ ಕ್ರಿಮಿನಲ್ ಮೊಕದ್ದಮೆ ದಾಖಲಿಸುವುದಾಗಿ ಮೈಸೂರು ನಗರ ಪೊಲೀಸ್ ಆಯುಕ್ತ ಚಂದ್ರಗುಪ್ತ ಎಚ್ಚರಿಕೆ ನೀಡಿದ್ದಾರೆ.
ಜನರು ಲಾಕ್‌ಡೌನ್ ಆದೇಶವನ್ನ ಲಘುವಾಗಿ ಪರಿಗಣಿಸುತ್ತಿರುವುದು ಗಮನಕ್ಕೆ ಬಂದಿದೆ.
ಎಲ್ಲೆಂದರಲ್ಲಿ ಓಡಾಡುತ್ತಿದ್ದಾರೆ.ಅನಗತ್ಯವಾಗಿ ಮನೆಗಳಿಂದ ಹೊರಬಂದು
ವಾಹನಗಳಲ್ಲಿ ಸಂಚರಿಸುತ್ತಿದ್ದಾರೆ.
ಅಗತ್ಯ ವಸ್ತುಗಳ ಅಂಗಡಿ ಬಿಟ್ಟು ಬೇರೆ ಅಂಗಡಿಗಳು ತೆರೆಯಲಾಗಿದೆ.
ಇವೇಲ್ಲವು ಲಸಕ್ ಡೌನ್ಆದೇಶದ ಸ್ಪಷ್ಟ ಉಲ್ಲಂಘನೆಯಾಗುತ್ತಿದೆ.ಇಂತವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸುವುದುಬಾನಿವಾರ್ಯವಾಗುತ್ತದೆ.
ಜನ ಯಾಕೇ ಇದನ್ನ ಸಿರಿಯಸ್ ಆಗಿ ತಗೆದುಕೊಳ್ಳುವಂತೆ ಪೊಲೀಸ್ ಆಯುಕ್ತರು ಮನವಿ ಮಾಡಿದ್ದಾರೆ.
ಇಂದಿನಿಂದ ಪೊಲೀಸರು ಮತ್ತಷ್ಟು ಗಂಭೀರವಾಗುತ್ತಾರೆ ಎಂದು ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.ಅಲ್ಲದೆ
ಮೈಸೂರಿನಲ್ಲಿ ಎಲ್ಲಾ ಖಾಸಗಿ ವಾಹನಗಳಾದ ಓಲಾ ,ಉಬರ್, ಆಟೋ, ಎಲ್ಲವು ನಿಷೇಧಿಸಲಾಗಿದೆ ಎಂದರು.
ಹೊರಜಿಲ್ಲೆಯಿಂದ ಬರುವ ಎಲ್ಲ ವಾಹನ ತಪಾಸಣೆ ಮಾಡಲಾಗುತ್ತದೆ.
ಅನಗತ್ಯ ಓಡಾಡುತ್ತಿದ್ದರೆ ಪ್ರಶ್ನೆ ಮಾಡುತ್ತೇವೆ ಸೂಕ್ತವಾದ
ಉದ್ದೇಶ ಇಲ್ಲದಿದ್ದರೆ ಪ್ರಕರಣ ದಾಖಲಿಸುವುದು ಗ್ಯಾರೆಂಟಿ‌.ಇನ್ನು 10 ದಿನಗಳ ಕಾಲ ಇವೇಲ್ಲವನ್ನು ಸಹಿಸಿಕೊಳ್ಳಬೇಕು ಎಂದು
ಮೈಸೂರು ಪೊಲೀಸ್ ಆಯುಕ್ತ ಚಂದ್ರಗುಪ್ತ ತಿಳಿಸಿದ್ದಾರೆ…

LEAVE A REPLY

Please enter your comment!
Please enter your name here

- Advertisment -

Most Popular

ಜಿಲ್ಲಾಡಳಿತದಿಂದ ಕೊರೊನ ಜಾಗೃತಿ ಭರ್ಜರಿ…ಎಪಿಎಂಸಿಕಾರ್ಮಿಕರಿಗೆ ಇಲ್ಲ ಸೇಫ್ಟಿ…

ಇದೊಂದು ವಿಪರ್ಯಾಸದ ಸಂಗತಿ ಅಂದರೆ ತಪ್ಪಿಲ್ಲ.ಇಡೀ ಜಗತ್ತೇ ಕೊರೊನಾ ಹೆಸರೇಳಿದರೆ ಬೆಚ್ಚಿಬೀಳುತ್ತಿದೆ.ಮೈಸೂರಿನಲ್ಲಂತೂ ಭರ್ಜರಿಯಾಗಿ ಜಾಗೃತಿ ಮೂಡಿಸಲಾಗುತ್ತಿದೆ.ಆದರೆ ಎಪಿಎಂಸಿ ಆವರಣವನ್ನ ಸ್ವಚ್ಛಗೊಳಿಸುವ ಪೌರಕಾರ್ಮಿಕರ ಸೇಫ್ಟಿ ಬಗ್ಗೆ ತಲೆಯೇ ಕೊಡಿಸಿಕೊಂಡಿಲ್ಲ.ಇಲ್ಲಿನ ಪೌರಕಾರ್ಮಿಕರು ಸಂಪೂರ್ಣವಾಗಿ...

ಮನೆಯಿಂದ ಹೊರಬಂದರೆ ಕರೊನಾ…ಒಳಗಿದ್ದರೆ ನಗೀನಾ…ಹುಣಸೂರು ಜನತೆಗೆ ಹಾವಿನ ಕಾಟ…

ಕೊರೊನಾ ವೈರಸ್ ಮನುಕುಲಕ್ಕೆ ಭೀತಿ ಹುಟ್ಟಿಸಿದೆ.ಗೃಹಬಂಧನವೇ ಮುಕ್ತಿಗೆ ದಾರಿ.ಮನೆಯಲ್ಲಿದ್ದರೆ ಮಾತ್ರ ಸೇಫ್.ಹುಣಸೂರಿನ‌ ಶಬ್ಬೀರ್ ನಗರದ ನಿವಾಸಿಗಳಿಗೆ ಮನೆಯೂ ಸೇಫಾಗಿಲ್ಲ ಯಾಕೆ ಗೊತ್ತಾ…? ಹಾವುಗಳ ಕಾಟ.ನಿನ್ನೆ ರಾತ್ರಿಯಂತೂ ಎರಡು ಹಾವುಗಳ ಓಡಾಟ...

ಅಸಮರ್ಥ ಅಧಿಕಾರಿಗಳನ್ನ ವರ್ಗಾವಣೆ ಮಾಡಿ…ಹಳ್ಳಿಹಕ್ಕಿ ಕಿಡಿ…

ಕೊರೊನಾ ವೈರಸ್ ವಿಚಾರದಲ್ಲಿ ಹಳ್ಳಿಹಕ್ಕಿ ವಿಶ್ವನಾಥ್ ಮೌನ ಮುರಿದಿದ್ದಾರೆ.ಇಷ್ಟು ದಿನ ಮೌನವಹಿಸಿದ್ದ ವಿಶ್ವನಾಥ್ ವಿಡಿಯೋ ಮೂಲಕ ಮುಖ್ಯಮಂತ್ರಿಗಳಿಗೆ ಸಂದೇಶ ರವಾನೆ ಮಾಡಿದ್ದಾರೆ.ಸಮರ್ಥ ಅಧಿಕಾರಿಗಳನ್ನ‌ ಮೈಸೂರಿಗೆ ವರ್ಗಾಯಿಸಿ.ಅಸಮರ್ಥ ಅಧಿಕಾರಿಗಳನ್ನ ಎತ್ತಂಗಡಿ ಮಾಡಿ...

ಕೊರೊನಾ ಪಾಸಿಟಿವ್‌ ೧೨ ಕ್ಕೆ ಏರಿಕೆ…ಆತಂಕವೂ ಹೆಚ್ಚಾಗುತ್ತಿದೆ…

ಮೈಸೂರು ಜಿಲ್ಲೆಯಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಪಟ್ಟಿ ಬೆಳೆಯುತ್ತಿದೆ.ಒಂದು ವಾರದ ಅಂತರದಲ್ಲಿ ೯ ಮಂದಿ ಸೋಂಕಿತರು ಪಟ್ಟಿಗೆ ಸೇರಿದ್ದಾರೆ. ಜೊತೆಗೆ ಕ್ವಾರೆಂಟೈನ್ ಗೆ ಒಳಗಾದವರ ಸಂಖ್ಯೆಯೂ ಗಣನೀಯವಾಗಿ ಏರುತ್ತಿದೆ.ಸೋಂಕಿತರ...

Recent Comments