32 C
Mysore
Thursday, June 4, 2020
Home All News ಜಿಲ್ಲಾಡಳಿತದಿಂದ ಕೊರೊನ ಜಾಗೃತಿ ಭರ್ಜರಿ…ಎಪಿಎಂಸಿಕಾರ್ಮಿಕರಿಗೆ ಇಲ್ಲ ಸೇಫ್ಟಿ…

ಜಿಲ್ಲಾಡಳಿತದಿಂದ ಕೊರೊನ ಜಾಗೃತಿ ಭರ್ಜರಿ…ಎಪಿಎಂಸಿಕಾರ್ಮಿಕರಿಗೆ ಇಲ್ಲ ಸೇಫ್ಟಿ…

ಇದೊಂದು ವಿಪರ್ಯಾಸದ ಸಂಗತಿ ಅಂದರೆ ತಪ್ಪಿಲ್ಲ.ಇಡೀ ಜಗತ್ತೇ ಕೊರೊನಾ ಹೆಸರೇಳಿದರೆ ಬೆಚ್ಚಿಬೀಳುತ್ತಿದೆ.ಮೈಸೂರಿನಲ್ಲಂತೂ ಭರ್ಜರಿಯಾಗಿ ಜಾಗೃತಿ ಮೂಡಿಸಲಾಗುತ್ತಿದೆ.ಆದರೆ ಎಪಿಎಂಸಿ ಆವರಣವನ್ನ ಸ್ವಚ್ಛಗೊಳಿಸುವ ಪೌರಕಾರ್ಮಿಕರ ಸೇಫ್ಟಿ ಬಗ್ಗೆ ತಲೆಯೇ ಕೊಡಿಸಿಕೊಂಡಿಲ್ಲ.ಇಲ್ಲಿನ ಪೌರಕಾರ್ಮಿಕರು ಸಂಪೂರ್ಣವಾಗಿ ಡೇಂಜರ್ ಜೋನ್ ನಲ್ಲಿ ಇದ್ದಾರೆ.ಮಾಸ್ಕ್ ಧರಿಸಿಲ್ಲ…ಕೈಗಳಿಗೆ ಗ್ಲೌಸ್ ಗಳಿಲ್ಲ…ಕಾಲುಗಳಿಗೆ ಬೂಟಿಲ್ಲ ಹೀಗಿದ್ದರೂ ಸ್ವಚ್ಛತಾ ಕಾರ್ಯದಲ್ಲಿ ನಿರತರಾಗಿದ್ದಾರೆ.ಮನೆಯಿಂದ ಹೊರಗಿದ್ದಾಗ ಕಡ್ಡಾಯವಾಗಿ ಮಾಸ್ಕ್ ಧರಿಸಲೇ ಬೇಕೆಂದು ವಾರ್ನ್ ಮಾಡಲಾಗಿದೆ.ಮಾಸ್ಕ್ ಧರಿಸದೇ ಬಂದ ಎಷ್ಟೋ ಮಂದಿಗೆ ಪೊಲೀಸರ ಲಾಠಿ ರುಚಿಯೂ ತೋರಿಸಲಾಗಿದೆ.ಆದರೆ ಈ ಪೌರ ಕಾರ್ಮಿಕರನ್ನ ಮಾತ್ರ ನಿರ್ಲಕ್ಷಿಸಲಾಗಿದೆ.ಇವರನ್ನ ನೇಮಿಸಿಕೊಂಡ ಟೆಂಡರ್ ದಾರನೂ‌ ಈ ಬಗ್ಗೆ ಗಮನ ಹರಿಸಿಲ್ಲ ಎಪಿಎಂಸಿ ಮಾರುಕಟ್ಟೆಯ ಅಧಿಕಾರಿಗಳೂ ತಿರುಗಿ‌ ನೋಡಿಲ್ಲ.ಕೊರೊನಾ ವೈರಸ್ ಭೀತಿ‌ ಶುರುವಾಗಿ ತಿಂಗಳು ಉರುಳುತ್ತಾ ಬಂದರೂ ಇವರ ಆರೋಗ್ಯದ ಬಗ್ಗೆ ಮಾತ್ರ ಯಾರಿಗೂ ಕಾಳಜಿ ಇಲ್ಲ…ಇದು ವಿಪರ್ಯಾಸವಲ್ಲದೆ ಬೇರಿನ್ನೇನು…?

LEAVE A REPLY

Please enter your comment!
Please enter your name here

- Advertisment -

Most Popular

ಅತೀಕ್ರಮವಾಗಿ ಮನೆಗಳಿಗೆ ಪ್ರವೇಶ ಮಾಡಿದರೆ ಕಾನೂನು ರೀತ್ಯಾ ಕ್ರಮ

ಮೈಸೂರು ಜೂನ್.3. ಮೈಸೂರು ನಗರದ ಜೆ.ಎನ್.ನರ್ಮ್-ಬಿ.ಎಸ್.ಯು.ಪಿ ಹಂತ-1 ಮತ್ತು ಹಂತ 2 ರ ಯೋಜನೆಯಡಿ ಕೆಸರೆ ಸರ್ವೆ ನಂ.484/1 ಮತ್ತು 484/2 ರಲ್ಲಿ ಒಟ್ಟು 252 ಮನೆಗಳನ್ನು ನಿರ್ಮಿಸಿದ್ದು, ಸದರಿ...

ಗಡಸು ಮರದ ಜಾತಿಯ ಗಿಡಗಳನ್ನು ನೆಡಲು ಸಹಕರಿಸಿ

ಮೈಸೂರು, ಜೂನ್.3 ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯ ರಸ್ತೆ ಬದಿಗಳು, ಉದ್ಯಾನವನಗಳು ಹಾಗೂ ಸ್ಮಶಾನಗಳಲ್ಲಿ ಮರದ ಜಾತಿಯ ಸಸ್ಯಗಳನ್ನು ಬೆಳೆಸಲಾಗಿದ್ದು, ಮುಂಗಾರು ಪೂರ್ವದಲ್ಲಿ ಹಾಗೂ ಮುಂಗಾರಿನ ಅವಧಿಯಲ್ಲಿ ಮಳೆ ಹಾಗೂ...

ಮೈಸೂರು ಸಂಸ್ಥಾನದ ಪ್ರಖ್ಯಾತ ದೊರೆ, ಜನಪ್ರಿಯ ಅರಸು ರಾಜರ್ಷಿ ಶ್ರೀಮನ್ಮಹಾರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 136 ನೇ ಹುಟ್ಟು ಹಬ್ಬ

ಮೈಸೂರು ಸಂಸ್ಥಾನದ ಪ್ರಖ್ಯಾತ ದೊರೆ, ಜನಪ್ರಿಯ ಅರಸು ರಾಜರ್ಷಿ ಶ್ರೀಮನ್ಮಹಾರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 136...

ಮಂಡ್ಯ:ಜಿಲ್ಲೆಗೆ ತೀರಾ ಅಗತ್ಯವಿದ್ದ ಕೋವಿಡ್-19 ಟೆಸ್ಟಿಂಗ್ ಲ್ಯಾಬ್ ಆದಿಚುಂಚನಗಿರಿ ಮೆಡಿಕಲ್ ಕಾಲೇಜಿನಲ್ಲಿ ಆರಂಭವಾಗಿದೆ.

ಮಂಡ್ಯ:ಜಿಲ್ಲೆಗೆ ತೀರಾ ಅಗತ್ಯವಿದ್ದ ಕೋವಿಡ್-19 ಟೆಸ್ಟಿಂಗ್ ಲ್ಯಾಬ್ ಆದಿಚುಂಚನಗಿರಿ ಮೆಡಿಕಲ್ ಕಾಲೇಜಿನಲ್ಲಿ ಆರಂಭವಾಗಿದೆ. ಕೇವಲ 15 ದಿನಗಳಲ್ಲಿ ಲ್ಯಾಬ್ ಆರಂಭಿಸಲು ಶ್ರೀಗಳೇ ಕಾರಣ. ಇನ್ನು ಮುಂದೆ ಜಿಲ್ಲೆಯ ಜನ ಭಯಪಡಬೇಕಿಲ್ಲ...

Recent Comments