32 C
Mysore
Thursday, June 4, 2020
Home All News ಮನ್ರೇಗಾ ಕಾಮಗಾರಿ ಪೂರ್ಣಗೊಳಿಸಿ : ಸಚಿವ ಕೆ.ಎಸ್.ಈಶ್ವರಪ್ಪ ಸೂಚನೆ

ಮನ್ರೇಗಾ ಕಾಮಗಾರಿ ಪೂರ್ಣಗೊಳಿಸಿ : ಸಚಿವ ಕೆ.ಎಸ್.ಈಶ್ವರಪ್ಪ ಸೂಚನೆ


ಮೈಸೂರು. ಮೇ.21. ಮತ್ತೊಂದು ಮಳೆ ಬೀಳುವ ಮುನ್ನ ಕೆರೆ ಹೂಳೆತ್ತುವ ಕೆಲಸ ಮುಗಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಕೆ.ಎಸ್.ಈಶ್ವರಪ್ಪ ಸೂಚನೆ ನೀಡಿದರು.
ಅಂತರ್ಜಲ ಉಳಿಸುವ ನಿಟ್ಟಿನಲ್ಲಿ ಕೈಗೊಂಡಿರುವ ಮನ್ರೇಗಾ ಕಾಮಗಾರಿಗಳನ್ನು ತತ್ವರಿತವಾಗಿ ಪೂರ್ಣಗೊಳಿಸಿ, ಪ್ರಧಾನಿ ನರೇಂದ್ರಮೋದಿ ಆಶಯ ಸಫಲಗೊಳಿಸಿ ಎಂದು ಕೆ.ಎಸ್.ಈಶ್ವರಪ್ಪ ತಿಳಿಸಿದರು.
ಗುರುವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು. ಸರ್ಕಾರ ಅಂತರ್ಜಲ ಹೆಚ್ಚಿಸಲು ಪೂರಕವಾಗಿ ಅಂತರ್ಜಲ ಚೇತನ ವಿಶೇಷ ಯೋಜನೆ ರೂಪಿಸಿದೆ. ರಾಜ್ಯದಲ್ಲಿ 9.70 ಲಕ್ಷಕ್ಕೂ ಹೆಚ್ಚು ಕೂಲಿ ಕಾರ್ಮಿಕರಿದ್ದು, ಅವರಿಗೆ ಉದ್ಯೋಗ ದೊರಕಿಸಲು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಬಳಸಿಕೊಳ್ಳಲಾಗುತ್ತಿದೆ. ಅಂತರ್ಜಲ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಿ ಎಂದರು.
ಮೈಸೂರು ತಾಲ್ಲೂಕಿನಲ್ಲಿ 136 ಕೆರೆಗಳಿವೆ. ಈ ಪೈಕಿ 49 ಕೆರೆಗಳ ಕಾಮಗಾರಿಯನ್ನು ತೆಗೆದುಕೊಳ್ಳಲಾಗಿದೆ. ಅವುಗಳಲ್ಲಿ 17 ಕೆರೆಗಳ ಹೂಳೆತ್ತುವ ಕೆಲಸ ನಡೆಯುತ್ತಿದೆ. ಕೆ.ಆರ್.ನಗರದ 73ರಲ್ಲಿ 29 ಕೆರೆ, ನಂಜನಗೂಡಿನಲ್ಲಿ 54ರಲ್ಲಿ 28 ಕೆರೆ, ಎಚ್.ಡಿ.ಕೋಟೆಯಲ್ಲಿ 41ರಲ್ಲಿ 15 ಕೆರೆ, ತಿ.ನರಸೀಪುರದಲ್ಲಿ 79 ಕೆರೆ, ಪಿರಿಯಾಪಟ್ಣಣದಲ್ಲಿ 42 ರಲ್ಲಿ 24 ಕೆರೆಗಳ ಹೂಳೆತ್ತುವ ಕಾಮಗಾರಿ ಕೈಗೊಂಡಿರುವುದಾಗಿ ಆಯಾ ತಾಲ್ಲೂಕುಗಳ ಇಓಗಳು ಮಾಹಿತಿ ನೀಡಿದರು.
ಯಾವ್ಯಾವ ಬೆಳೆಗೆ ಮನ್ರೇಗಾ ಅನುದಾನ ನೀಡಬಹುದೆಂಬುದನ್ನು ರೈತರಿಗೆ ಮನವರಿಕೆ ಮಾಡಿಕೊಡಿ. ಮನ್ರೇಗಾದಡಿಯಲ್ಲಿ ರೈತರು ಅವರ ಭೂಮಿಯಲ್ಲಿಯೇ ದುಡಿಮೆ ಮಾಡಿ ಹಣಗಳಿಸಬಹುದೆಂಬುದನ್ನು ತಿಳಿಸಿಕೊಟ್ಟು ಕೂಲಿ ಮಾಡಿಸುವ ಕೆಲಸ ಮಾಡಿ ಎಂದು ಕೆ.ಎಸ್.ಈಶ್ವರಪ್ಪ ಅವರು ಹೇಳಿದರು.
ರೈತರ ಜಮೀನಿನಲ್ಲ್ಲಿ ಬದು ನಿರ್ಮಾಣಕ್ಕೂ ಮನ್ರೇಗಾ ಯೋಜನೆಯಡಿ ಅವಕಾಶ ಇದೆ. ಮೇ.19ರಿಂದ ಜೂ.19ರವರೆಗೆ ಬದು ನಿರ್ಮಾಣ ಮಾಸಾಚರಣೆ ನಡೆಸಲಾಗುತ್ತಿದೆ. ಗ್ರಾಮೀಣಾಭಿವೃದ್ಧಿ ಯೋಜನೆಗಳಿಗೆ ಹಣ ಕೊರತೆಯಿಲ್ಲ. ಮತ್ತೊಂದು ಮಳೆಗೂ ಮುನ್ನ ಎಲ್ಲಾ ಕೆಲಸಗಳನ್ನು ತ್ವರಿತವಾಗಿ ಮುಗಿಸಬೇಕು. ಸಾಮಾಜಿಕ ಅರಣ್ಯ ಇಲಾಖೆಯಿಂದ ಕೆರೆಗಳ ಸುತ್ತಲೂ ಗಿಡ ನೆಡುವ ಸಂಬಂಧ ಎರಡು ವರ್ಷದ ಗಿಡಗಳನ್ನು ನೆಡಬೇಕು ಎಂದರು.
ದೊಡ್ಡ ಕವಲಂದೆ ಬಹುಗ್ರಾಮಗಳ ಕುಡಿಯುವ ನೀರಿನ ಯೋಜನೆ ಕಳೆದ ಐದು ವರ್ಷದಿಂದ ನಿಷ್ಕ್ರಿಯವಾಗಿದ್ದು, ಈ ಯೋಜನೆ ಸರಿಪಡಿಸಿ ನೀರು ಸರಬರಾಜು ಮಾಡುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಈ ಪ್ರಕ್ರಿಯೆ ಐದು ವರ್ಷಗಳಿಂದ ನಿಂತಿರುವುದಕ್ಕೆ ಸಚಿವರು ಬೇಸರಿಸಿದರು. ಅಧಿಕಾರಿಗಳು ಅರ್ಹ ಟೆಂಡರ್‍ದಾರರ ಅರ್ಜಿಯನ್ನು ಪರಿಗಣಿಸದೇ ಹಲವು ವರ್ಷಗಳಿಂದ ನೆನಗುದಿಗೆ ಬಿದ್ದಿರುವ ಬಗ್ಗೆ ಶಾಸಕ ಹರ್ಷವರ್ಧನ್ ಪ್ರಶ್ನಿಸಿದರು. ಶೀಘ್ರ ಇವೆಲ್ಲವನ್ನೂ ಟೆಂಡರ್ ಕರೆಯುವ ಬಗ್ಗೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುವಂತೆ ಸಚಿವ ಈಶ್ವರಪ್ಪ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಸಹಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್, ಶಾಸಕರಾದ ಜಿ.ಟಿ.ದೇವೇಗೌಡ, ಎಸ್.ಎ.ರಾಮದಾಸ್, ಎಲ್.ನಾಗೇಂದ್ರ, ಹರ್ಷವರ್ಧನ್, ಎನ್.ಅಶ್ವಿನ್‍ಕುಮಾರ್, ಕೆ.ಮಹದೇವ್, ನಿರಂಜನ್‍ಕುಮಾರ್, ವಿಧಾನ ಪರಿಷತ್ ಸದಸ್ಯ ಆರ್.ಧರ್ಮಸೇನಾ, ಸಂಸದ ಪ್ರತಾಪಸಿಂಹ, ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಬಿ.ಸಿ.ಪರಿಮಳಾ ಶ್ಯಾಂ, ಉಪಾಧ್ಯಕ್ಷೆ ಗೌರಮ್ಮ ಸೋಮಶೇಖರ್, ಜಿ.ಪಂ. ಸಿಇಓ ಪ್ರಶಾಂತ್‍ಕುಮಾರ್ ಮಿಶ್ರ, ಗ್ರಾಮೀಣ ಕುಡಿಯುವ ನೀರು ಇಲಾಖೆ ಆಯುಕ್ತ ಡಾ.ವಿಶಾಲ್, ಮನ್ರೇಗಾ ಆಯುಕ್ತ ಅನಿರುದ್ಧ್ ಶ್ರವಣ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

- Advertisment -

Most Popular

ಅತೀಕ್ರಮವಾಗಿ ಮನೆಗಳಿಗೆ ಪ್ರವೇಶ ಮಾಡಿದರೆ ಕಾನೂನು ರೀತ್ಯಾ ಕ್ರಮ

ಮೈಸೂರು ಜೂನ್.3. ಮೈಸೂರು ನಗರದ ಜೆ.ಎನ್.ನರ್ಮ್-ಬಿ.ಎಸ್.ಯು.ಪಿ ಹಂತ-1 ಮತ್ತು ಹಂತ 2 ರ ಯೋಜನೆಯಡಿ ಕೆಸರೆ ಸರ್ವೆ ನಂ.484/1 ಮತ್ತು 484/2 ರಲ್ಲಿ ಒಟ್ಟು 252 ಮನೆಗಳನ್ನು ನಿರ್ಮಿಸಿದ್ದು, ಸದರಿ...

ಗಡಸು ಮರದ ಜಾತಿಯ ಗಿಡಗಳನ್ನು ನೆಡಲು ಸಹಕರಿಸಿ

ಮೈಸೂರು, ಜೂನ್.3 ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯ ರಸ್ತೆ ಬದಿಗಳು, ಉದ್ಯಾನವನಗಳು ಹಾಗೂ ಸ್ಮಶಾನಗಳಲ್ಲಿ ಮರದ ಜಾತಿಯ ಸಸ್ಯಗಳನ್ನು ಬೆಳೆಸಲಾಗಿದ್ದು, ಮುಂಗಾರು ಪೂರ್ವದಲ್ಲಿ ಹಾಗೂ ಮುಂಗಾರಿನ ಅವಧಿಯಲ್ಲಿ ಮಳೆ ಹಾಗೂ...

ಮೈಸೂರು ಸಂಸ್ಥಾನದ ಪ್ರಖ್ಯಾತ ದೊರೆ, ಜನಪ್ರಿಯ ಅರಸು ರಾಜರ್ಷಿ ಶ್ರೀಮನ್ಮಹಾರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 136 ನೇ ಹುಟ್ಟು ಹಬ್ಬ

ಮೈಸೂರು ಸಂಸ್ಥಾನದ ಪ್ರಖ್ಯಾತ ದೊರೆ, ಜನಪ್ರಿಯ ಅರಸು ರಾಜರ್ಷಿ ಶ್ರೀಮನ್ಮಹಾರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 136...

ಮಂಡ್ಯ:ಜಿಲ್ಲೆಗೆ ತೀರಾ ಅಗತ್ಯವಿದ್ದ ಕೋವಿಡ್-19 ಟೆಸ್ಟಿಂಗ್ ಲ್ಯಾಬ್ ಆದಿಚುಂಚನಗಿರಿ ಮೆಡಿಕಲ್ ಕಾಲೇಜಿನಲ್ಲಿ ಆರಂಭವಾಗಿದೆ.

ಮಂಡ್ಯ:ಜಿಲ್ಲೆಗೆ ತೀರಾ ಅಗತ್ಯವಿದ್ದ ಕೋವಿಡ್-19 ಟೆಸ್ಟಿಂಗ್ ಲ್ಯಾಬ್ ಆದಿಚುಂಚನಗಿರಿ ಮೆಡಿಕಲ್ ಕಾಲೇಜಿನಲ್ಲಿ ಆರಂಭವಾಗಿದೆ. ಕೇವಲ 15 ದಿನಗಳಲ್ಲಿ ಲ್ಯಾಬ್ ಆರಂಭಿಸಲು ಶ್ರೀಗಳೇ ಕಾರಣ. ಇನ್ನು ಮುಂದೆ ಜಿಲ್ಲೆಯ ಜನ ಭಯಪಡಬೇಕಿಲ್ಲ...

Recent Comments