32 C
Mysore
Thursday, June 4, 2020
Home All News ಜಿಲ್ಲೆಯಲ್ಲಿ ನೀರಾವರಿ ಅಭಿವೃದ್ಧಿಗೆ ಒತ್ತು: ಪೂರ್ವಭಾವಿ ಸಭೆಯಲ್ಲಿ ಚರ್ಚೆ

ಜಿಲ್ಲೆಯಲ್ಲಿ ನೀರಾವರಿ ಅಭಿವೃದ್ಧಿಗೆ ಒತ್ತು: ಪೂರ್ವಭಾವಿ ಸಭೆಯಲ್ಲಿ ಚರ್ಚೆ


ಮೈಸೂರು. ಮೇ.22. ಮೈಸೂರು ಜಿಲ್ಲೆಯ ನೀರಾವರಿ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು.
ಸಭೆಯಲ್ಲಿ ಬೃಹತ್ ಮತ್ತು ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಜಲಾಶಯಗಳ ಗುಣಮಟ್ಟ ಹಾಗೂ ಕೃಷಿ ನೀರಾವರಿ ಪ್ರದೇಶಗಳ ಬಗ್ಗೆ ಸಚಿವರು ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಅವರು ಮಾತನಾಡಿ, ಜಿಲ್ಲಾ ವ್ಯಾಪ್ತಿಗೆ ಒಳಪಡುವ ಜಲಾಶಯಗಳಿಂದ ಕೆರೆಗಳಿಗೆ ನೀರು ತುಂಬಿಸುವುದು ಹಾಗೂ ಜಲಾಶಯದ ನೀರು ವ್ಯರ್ಥವಾಗದಂತೆ ರೈತರಿಗೆ ಮತ್ತು ಜನರಿಗೆ ಉಪಯೋಗವಾಗುವಂತೆ ಯೋಜನೆ ರೂಪಿಸಲು ಚರ್ಚಿಸಲಾಗಿದೆ ಎಂದರು.
ಜಲಾಶಯದ ಸುತ್ತಮುತ್ತಲಿನ ಮುಳುಗಡೆ ಕೃಷಿಭೂಮಿ ಹಾಗೂ ಜನರು ವಾಸಿಸುವ ಪ್ರದೇಶಗಳಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವುದು. ಅಣೆಕಟ್ಟುಗಳಲ್ಲಿ ನೀರು ಸೋರಿಕೆ ಸುಧಾರಿಸಲು ಮುಂದಿನ ದಿನಗಳಲ್ಲಿ ಉನ್ನತಮಟ್ಟದ ಸಭೆ ನಡೆಸಲಾಗುವುದು ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಪ್ರಶಾಂತ್ ಕುಮಾರ್ ಮಿಶ್ರಾ, ಬೃಹತ್ ಮತ್ತು ಸಣ್ಣ ನೀರಾವರಿ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

- Advertisment -

Most Popular

ಅತೀಕ್ರಮವಾಗಿ ಮನೆಗಳಿಗೆ ಪ್ರವೇಶ ಮಾಡಿದರೆ ಕಾನೂನು ರೀತ್ಯಾ ಕ್ರಮ

ಮೈಸೂರು ಜೂನ್.3. ಮೈಸೂರು ನಗರದ ಜೆ.ಎನ್.ನರ್ಮ್-ಬಿ.ಎಸ್.ಯು.ಪಿ ಹಂತ-1 ಮತ್ತು ಹಂತ 2 ರ ಯೋಜನೆಯಡಿ ಕೆಸರೆ ಸರ್ವೆ ನಂ.484/1 ಮತ್ತು 484/2 ರಲ್ಲಿ ಒಟ್ಟು 252 ಮನೆಗಳನ್ನು ನಿರ್ಮಿಸಿದ್ದು, ಸದರಿ...

ಗಡಸು ಮರದ ಜಾತಿಯ ಗಿಡಗಳನ್ನು ನೆಡಲು ಸಹಕರಿಸಿ

ಮೈಸೂರು, ಜೂನ್.3 ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯ ರಸ್ತೆ ಬದಿಗಳು, ಉದ್ಯಾನವನಗಳು ಹಾಗೂ ಸ್ಮಶಾನಗಳಲ್ಲಿ ಮರದ ಜಾತಿಯ ಸಸ್ಯಗಳನ್ನು ಬೆಳೆಸಲಾಗಿದ್ದು, ಮುಂಗಾರು ಪೂರ್ವದಲ್ಲಿ ಹಾಗೂ ಮುಂಗಾರಿನ ಅವಧಿಯಲ್ಲಿ ಮಳೆ ಹಾಗೂ...

ಮೈಸೂರು ಸಂಸ್ಥಾನದ ಪ್ರಖ್ಯಾತ ದೊರೆ, ಜನಪ್ರಿಯ ಅರಸು ರಾಜರ್ಷಿ ಶ್ರೀಮನ್ಮಹಾರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 136 ನೇ ಹುಟ್ಟು ಹಬ್ಬ

ಮೈಸೂರು ಸಂಸ್ಥಾನದ ಪ್ರಖ್ಯಾತ ದೊರೆ, ಜನಪ್ರಿಯ ಅರಸು ರಾಜರ್ಷಿ ಶ್ರೀಮನ್ಮಹಾರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 136...

ಮಂಡ್ಯ:ಜಿಲ್ಲೆಗೆ ತೀರಾ ಅಗತ್ಯವಿದ್ದ ಕೋವಿಡ್-19 ಟೆಸ್ಟಿಂಗ್ ಲ್ಯಾಬ್ ಆದಿಚುಂಚನಗಿರಿ ಮೆಡಿಕಲ್ ಕಾಲೇಜಿನಲ್ಲಿ ಆರಂಭವಾಗಿದೆ.

ಮಂಡ್ಯ:ಜಿಲ್ಲೆಗೆ ತೀರಾ ಅಗತ್ಯವಿದ್ದ ಕೋವಿಡ್-19 ಟೆಸ್ಟಿಂಗ್ ಲ್ಯಾಬ್ ಆದಿಚುಂಚನಗಿರಿ ಮೆಡಿಕಲ್ ಕಾಲೇಜಿನಲ್ಲಿ ಆರಂಭವಾಗಿದೆ. ಕೇವಲ 15 ದಿನಗಳಲ್ಲಿ ಲ್ಯಾಬ್ ಆರಂಭಿಸಲು ಶ್ರೀಗಳೇ ಕಾರಣ. ಇನ್ನು ಮುಂದೆ ಜಿಲ್ಲೆಯ ಜನ ಭಯಪಡಬೇಕಿಲ್ಲ...

Recent Comments