32 C
Mysore
Thursday, June 4, 2020
Home All News ರೈಲು ಸಂಚಾರ ಆರಂಭ…ಮೈಸೂರಿನಿಂದ ಬೆಂಗಳೂರಿನ‌ ನಡುವಿನ ಮೆಮು ರೈಲಿಗೆ ಚಾಲನೆ…

ರೈಲು ಸಂಚಾರ ಆರಂಭ…ಮೈಸೂರಿನಿಂದ ಬೆಂಗಳೂರಿನ‌ ನಡುವಿನ ಮೆಮು ರೈಲಿಗೆ ಚಾಲನೆ…

ಲಾಕ್ ಡೌನ್ ಸಡಿಲಿಕೆ ನಂತರ ಮೈಸೂರು-ಬೆಂಗಳೂರು ನಡುವೆ ಇಂದಿನಿಂದ ರೈಲು ಸಂಚಾರ ಆರಂಭವಾಗಿದೆ. ಎರಡು ತಿಂಗಳ ನಂತರ ರೈಲು ಸೇವೆ ಆರಂಭವಾಗಿದ್ದು ಪ್ರಯಾಣಿಕರಲ್ಲಿ ಸಂತಸ ಮೂಡಿದೆ.ಪ್ರಾಯೋಗಿಕವಾಗಿ ಮೆಮು ರೈಲು ಸಂಚಾರ ಆರಂಭವಾಗಿದೆ. ಬೆಂಗಳೂರಿನಿಂದ ಬೆಳಿಗ್ಗೆ ಹೊರಡುವ ರೈಲು ಮಧ್ಯಾಹ್ನ 12:30ಕ್ಕೆ ಮೈಸೂರು ತಲುಪಲಿದೆ.
ಅದೇ ರೈಲು ಮಧ್ಯಾಹ್ನ 1:45ಕ್ಕೆ ಮೈಸೂರಿನಿಂದ ಬೆಂಗಳೂರಿಗೆ ನಿರ್ಗಮಿಸಲಿರುವ ರೈಲಿಗೆ ಮೈಸೂರು ರೈಲ್ವೆ ನಿಲ್ದಾಣದಲ್ಲಿ ಹಸಿರು ನಿಶಾನೆ ತೋರಿಸಲಾಯಿತು.
ಆನ್ ಲೈನ್ ಮೂಲಕ ಸೀಟು ಕಾಯ್ದಿರಿಸುವವರಿಗೆ ಮಾತ್ರ ರೈಲಿನಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿತ್ತು.
ರೈಲು ನಿಲ್ದಾಣದ ಟಿಕೆಟ್ ಕೌಂಟರ್ ನಲ್ಲಿ ಟಿಕೆಟ್ ಪಡೆದು ಪ್ರಯಾಣಿಸಲು ಯಾವುದೇ ಅವಕಾಶ ಇರಲಿಲ್ಲ.ರೈಲು ನಿಲ್ದಾಣಕ್ಕೆ ಒಳ ಬರಲು ಒಂದು ದ್ವಾರ ಮತ್ತು ಹೊರಹೋಗಲು ಒಂದು ದ್ವಾರದ ವ್ಯವಸ್ಥೆ ಮಾಡಲಾಗಿದೆ.ನಿನ್ನೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ರೈಲ್ವೆ ನಿಲ್ದಾಣಕ್ಕೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.ಬೆಂಗಳೂರಿನಿಂದ ಮೈಸೂರಿಗೆ ಮೊದಲ ದಿನ ೬೯ ಪ್ರಯಾಣಿಕರು ಪ್ರಯಾಣಿಸದರೆ ಮೈಸೂರಿನಿಂದ ಬೆಂಗಳೂರಿಗೆ ಕೇವಲ ೫೭ ಮಂದಿ ತೆರಳಿದ್ದಾರೆ.ಆನ್ ಲೈನ್ ಬುಕಿಂಗ್ ಕಾರಣ ಮೊದಲ ದಿನದ ರೈಲಿಗೆ ನೀರಸ ಪ್ರತಿಕ್ರಿಯೆ ದೊರೆತಿದೆ.ರೈಲು ನಿಲ್ದಾಣದ ಮುಖ್ಯ ಧ್ವಾರದಲ್ಲಿ ಸ್ಯಾನಿಟೈಸ್ ವ್ಯವಸ್ಥೆ ಮಾಡಲಾಗಿತ್ತು.ಒಂದು ಬೋಗಿಯಲ್ಲಿ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿತ್ತು.ಸಾಮಾಜಿಕ ಅಂತರಕ್ಕೆ ಒತ್ತು ನೀಡಲಾಗಿತ್ತು…

LEAVE A REPLY

Please enter your comment!
Please enter your name here

- Advertisment -

Most Popular

ಅತೀಕ್ರಮವಾಗಿ ಮನೆಗಳಿಗೆ ಪ್ರವೇಶ ಮಾಡಿದರೆ ಕಾನೂನು ರೀತ್ಯಾ ಕ್ರಮ

ಮೈಸೂರು ಜೂನ್.3. ಮೈಸೂರು ನಗರದ ಜೆ.ಎನ್.ನರ್ಮ್-ಬಿ.ಎಸ್.ಯು.ಪಿ ಹಂತ-1 ಮತ್ತು ಹಂತ 2 ರ ಯೋಜನೆಯಡಿ ಕೆಸರೆ ಸರ್ವೆ ನಂ.484/1 ಮತ್ತು 484/2 ರಲ್ಲಿ ಒಟ್ಟು 252 ಮನೆಗಳನ್ನು ನಿರ್ಮಿಸಿದ್ದು, ಸದರಿ...

ಗಡಸು ಮರದ ಜಾತಿಯ ಗಿಡಗಳನ್ನು ನೆಡಲು ಸಹಕರಿಸಿ

ಮೈಸೂರು, ಜೂನ್.3 ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯ ರಸ್ತೆ ಬದಿಗಳು, ಉದ್ಯಾನವನಗಳು ಹಾಗೂ ಸ್ಮಶಾನಗಳಲ್ಲಿ ಮರದ ಜಾತಿಯ ಸಸ್ಯಗಳನ್ನು ಬೆಳೆಸಲಾಗಿದ್ದು, ಮುಂಗಾರು ಪೂರ್ವದಲ್ಲಿ ಹಾಗೂ ಮುಂಗಾರಿನ ಅವಧಿಯಲ್ಲಿ ಮಳೆ ಹಾಗೂ...

ಮೈಸೂರು ಸಂಸ್ಥಾನದ ಪ್ರಖ್ಯಾತ ದೊರೆ, ಜನಪ್ರಿಯ ಅರಸು ರಾಜರ್ಷಿ ಶ್ರೀಮನ್ಮಹಾರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 136 ನೇ ಹುಟ್ಟು ಹಬ್ಬ

ಮೈಸೂರು ಸಂಸ್ಥಾನದ ಪ್ರಖ್ಯಾತ ದೊರೆ, ಜನಪ್ರಿಯ ಅರಸು ರಾಜರ್ಷಿ ಶ್ರೀಮನ್ಮಹಾರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 136...

ಮಂಡ್ಯ:ಜಿಲ್ಲೆಗೆ ತೀರಾ ಅಗತ್ಯವಿದ್ದ ಕೋವಿಡ್-19 ಟೆಸ್ಟಿಂಗ್ ಲ್ಯಾಬ್ ಆದಿಚುಂಚನಗಿರಿ ಮೆಡಿಕಲ್ ಕಾಲೇಜಿನಲ್ಲಿ ಆರಂಭವಾಗಿದೆ.

ಮಂಡ್ಯ:ಜಿಲ್ಲೆಗೆ ತೀರಾ ಅಗತ್ಯವಿದ್ದ ಕೋವಿಡ್-19 ಟೆಸ್ಟಿಂಗ್ ಲ್ಯಾಬ್ ಆದಿಚುಂಚನಗಿರಿ ಮೆಡಿಕಲ್ ಕಾಲೇಜಿನಲ್ಲಿ ಆರಂಭವಾಗಿದೆ. ಕೇವಲ 15 ದಿನಗಳಲ್ಲಿ ಲ್ಯಾಬ್ ಆರಂಭಿಸಲು ಶ್ರೀಗಳೇ ಕಾರಣ. ಇನ್ನು ಮುಂದೆ ಜಿಲ್ಲೆಯ ಜನ ಭಯಪಡಬೇಕಿಲ್ಲ...

Recent Comments