32 C
Mysore
Wednesday, August 12, 2020
Home All News ಗ್ರಾಮ ಪಂಚಾಯ್ತಿ ಸದಸ್ಯನ ಏಕಾಂಗಿ ಪ್ರತಿಭಟನೆ…ಕೋರಂ ಇಲ್ಲದೆ ಸಾಮಾನ್ಯ ಸಭೆ ನಡೆಸಿದ ಕ್ರಮಕ್ಕೆ ಖಂಡನೆ…

ಗ್ರಾಮ ಪಂಚಾಯ್ತಿ ಸದಸ್ಯನ ಏಕಾಂಗಿ ಪ್ರತಿಭಟನೆ…ಕೋರಂ ಇಲ್ಲದೆ ಸಾಮಾನ್ಯ ಸಭೆ ನಡೆಸಿದ ಕ್ರಮಕ್ಕೆ ಖಂಡನೆ…

ಕೋರಂ ಇಲ್ಲದೆ ಸಾಮಾನ್ಯ ಸಭೆ ನಡೆಸಿದ ಗ್ರಾಮಪಂಚಾಯ್ತಿ ಅಭಿವೃದ್ದಿ ಅಧಿಕಾರಿ ಕ್ರಮ ಖಂಡಿಸಿ ಗ್ರಾಮ ಪಂಚಾಯ್ತಿ ಸದಸ್ಯರೊಬ್ಬರು ಏಕಾಂಗಿ ಪ್ರತಿಭಟನೆ ನಡಸಿದರು. ಹುಲ್ಲಹಳ್ಳಿ ಗ್ರಾಮಪಂಚಾಯಿತಿ ಕಚೇರಿ ಮುಂದೆ ಗ್ರಾಮ ಪಂಚಾಯ್ತಿ ಸದಸ್ಯ ಮಲ್ಲಿಕಾರ್ಜುನ ಎಂಬುವರು ಏಕಾಂಗಿಯಾಗಿ ಪ್ರತಿಭಟನೆ ನಡೆಸಿದರು.
ಅಭಿವೃದ್ಧಿ ಅಧಿಕಾರಿಯ ಸರ್ವಾಧಿಕಾರ ಧೋರಣೆ ಮತ್ತು ದರ್ಪದ ವಿರುದ್ಧ ಆಕ್ರೋಷ ವ್ಯಕ್ತಪಡಿಸಿದರು.
ಹದಿನೈದನೆಯ ಹಣಕಾಸು ಯೋಜನೆಯಲ್ಲಿ ಗ್ರಾಮ ಪಂಚಾಯಿತಿಗೆ 59 ಲಕ್ಷ ರೂಗಳು ಮಂಜೂರಾಗಿದೆ
ಇದರ ಕ್ರಿಯಾಯೋಜನೆ ಮಂಡಿಸಲು ಇಂದು ಸಾಮಾನ್ಯ ಸಭೆ ಕರೆಯಲಾಗಿತ್ತು.
ಸಾಮಾನ್ಯ ಸಭೆ ನಡೆಸಬೇಕಾದರೆ ಸಂವಿಧಾನಬದ್ಧವಾಗಿ ಕೋರಂ ಇರಬೇಕು.
ಒಟ್ಟು 23 ಸದಸ್ಯರ ಬಲ ಹೊಂದಿರುವ ಗ್ರಾಮ ಪಂಚಾಯಿತಿಯಲ್ಲಿ ಇಂದು ನಡೆದ ಕನಿಷ್ಟ ೧೨ ಸದಸ್ಯರು ಹಾಜರಾಗಬೇಕಿತ್ತು ಆದರೆ ಸಭೆಗೆ
ಕೇವಲ ಏಳು ಜನ ಸದಸ್ಯರು ಮಾತ್ರ ಹಾಜರಿದ್ದರು.
ಗ್ರಾಮ ಪಂಚಾಯಿತಿ ಸದಸ್ಯರ ಕೋರಂ ಇಲ್ಲದೆ ಸಾಮಾನ್ಯ ಸಭೆ ನಡೆಸುತ್ತಿರುವುದಾಗಿ ಆರೋಪ ಮಾಡಿ ತೀವ್ರವಾಗಿ ಖಂಡಿಸಿದರು.ಈಗಾಗಲೇ ಹುಲ್ಲಹಳ್ಳಿ ಗ್ರಾಮ ಪಂಚಾಯ್ತಿಯ ಭ್ರಷ್ಟಾಚಾರದ ಬಗ್ಗೆ ಸಾಕಷ್ಟು ದೂರುಗಳಿವೆ ಇಂತಹ ಸಂಧರ್ಭದಲ್ಲಿ ಸಾಮಾನ್ಯ ಸಭೆಗೆ ಸದಸ್ಯರು ಬರಲು ಹಂಜರಿಯುತ್ತಿದ್ದಾರೆಂದು ಮಲ್ಲಿಕಾರ್ಜುನ್ ಆರೋಪಿಸಿದರು…

LEAVE A REPLY

Please enter your comment!
Please enter your name here

- Advertisment -
< target="_blank">

Most Popular

ನೇಣುಬಿಗಿದ ಸ್ಥಿತಿಯಲ್ಲಿ ವ್ಯಕ್ತಿ ಶವ ಪತ್ತೆ…ಕೊಲೆ ಶಂಕೆ…

ಅಕ್ರಮ ಸಂಭಂಧ ಹಿನ್ನಲೆ ಬೇರೆಯಾಗಿದ್ದ ಪತ್ನಿಯ ಮನೆಯಲ್ಲಿ ಪತಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ.ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹ ಕಂಡುಬಂದಿದ್ದು ಕೊಲೆ ಶಂಕೆ ವ್ಯಕ್ತವಾಗಿದೆ.ಗೋವಿಂದ ನಾಯ್ಕ(೩೦) ಮೃತ...

ಸರ್ಕಾರಿ ಹೆರಿಗೆ ಆಸ್ಪತ್ರೆಯಲ್ಲಿ ಪತ್ನಿಗೆ ಹೆರಿಗೆ ಮಾಡಿಸಿದ ಡಿಸಿ…ಮಾದರಿ ಜಿಲ್ಲಾಧಿಕಾರಿ…

ಅಧಿಕಾರ ಇದ್ರೆ ಕೆಲವರು ಎಲ್ಲಾ ರೀತಿಯ ಸೌಲಭ್ಯಗಳನ್ನ ಅನುಭವಿಸಯವರೇ ಹೆಚ್ಚು.ಆದರೆ ಗದಗ ಜಿಲ್ಲೆಯ ಜಿಲ್ಲಾಧಿಕಾರಿಗಳು ಈ ಅಪವಾದದಿಂದ ದೂರ ಇದ್ದಾರೆ.ಕೊರೋನಾ ಮಧ್ಯೆಯೂ ಐಶಾರಾಮಿ ಸವಲತ್ತುಗಳನ್ನು...

ಮಾವುತನನ್ನೇ ಬಲಿ ಪಡೆದ ಆನೆ…ಮೈಸೂರು ಮೃಗಾಲಯದಲ್ಲಿ ಘಟನೆ…

ವಿಶ್ವಿಖ್ಯಾತ ಮೈಸೂರು ಮೃಗಾಲಯದಲ್ಲಿ ಆನೆಯೊಂದು ಮಾವುತನನ್ನೇ ತುಳಿದು ಕೊಂದ ಘಟನೆ ಇಂದು ಸಂಜೆ ನಡೆದಿದೆ.ಹರೀಶ್(೩೮) ಮೃತ ದುರ್ದೈವಿಯಾಗಿದ್ದಾರೆ.ಕೆಲವು ವರ್ಷಗಳಿಂದ ಆನೆ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ಹರೀಶ್...

ನಿಧಿ ಶೋಧಕ್ಕೆ ಬಂದ ಕಿಡಿಗೇಡಿ ಯುವಕ ಮಂಟಪ ಕುಸಿದು ಸಾವು…

ನಿಧಿ ಆಸೆಗಾಗಿ ಬಂದ ಚೋರರ ತಂಡದಲ್ಲಿ ಯುವಕನೊಬ್ಬ ಮೃತಪಟ್ಟಿದ್ದು ಮೂವರು ಗಾಯಗೊಂಡ ಘಟನೆ ಹೊಸಕೋಟೆ ತಾಲೂಕಿನ ನಂದಗುಡಿ ಹೋಬಳಿಯ ಹಿಂಡಿಗನಾಳ ಗ್ರಾಮದಲ್ಲಿ ನಡೆದಿದೆ.ನಿಧಿ ಲಪಟಾಯಿಸುವ...

Recent Comments