32 C
Mysore
Wednesday, August 12, 2020
Home All News ಲವ್ ಮಾಡಿ ಕಿರುಕುಳ ಕೊಡುತ್ತಿದ್ದ ಪ್ರೇಮಿಯ ಎದೆಗೆ ಬಿತ್ತು ಗುಂಡು…ಹಾಸನದಲ್ಲೊಂದು ದುರಂತ ಪ್ರೇಮ ಕಥೆ…

ಲವ್ ಮಾಡಿ ಕಿರುಕುಳ ಕೊಡುತ್ತಿದ್ದ ಪ್ರೇಮಿಯ ಎದೆಗೆ ಬಿತ್ತು ಗುಂಡು…ಹಾಸನದಲ್ಲೊಂದು ದುರಂತ ಪ್ರೇಮ ಕಥೆ…

ಪ್ರೇಮ ಕಲಹ ಪ್ರಕರಣವೊಂದು ಕೊಲೆಯಲ್ಲಿ ಅಂತ್ಯವಾದ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.ಕಿರುಕುಳ ಕೊಡುತ್ತಿದ್ದ
ಪ್ರೀಯಕರನನ್ನು ಪ್ರಿಯತಮೆಯ ಚಿಕ್ಕಪ್ಪ ಗುಂಡಿಕ್ಕಿ ಕೊಂದಿದ್ದಾನೆ.
ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಸೊಪ್ಪಿನಹಳ್ಳಿಯಲ್ಲಿ ಘಟನೆ ನಡೆದಿದೆ.
ಮಧು (28) ಕೊಲೆಯಾದ ಪ್ರಿಯಕರ.ಆಲೂರು ಗ್ರಾಮದ ಸುಶ್ಮಿತ ಎಂಬಾಕೆಯನ್ನ ಮಧು ಪ್ರೀತಿಸುತ್ತಿದ್ದ. ಸುಶ್ಮಿತಾ ಅಪ್ರಾಪ್ತೆಯಾಗಿದ್ದ ಕಾರಣ 2019 ರಲ್ಲಿ ಆಲೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿ ಜೈಲು ಸೇರಿದ್ದ. ಜಾಮೀನಿನ ಮೇಲೆ ಹೊರಬಂದ ಮಧು ಆಗಾಗ ಪ್ರಿಯತಮೆಯ ಮನೆ ಮುಂದೆ ಬಂದು ಕಿರಿಕಿರಿ ಮಾಡುತ್ತಿದ್ದ
ಇದರಿಂದ ಸಿಟ್ಟಿಗೆದ್ದ ಅಪ್ರಾಪ್ತೆಯ ಚಿಕ್ಕಪ್ಪ ರೂಪೇಶ್ ಗುಂಡಿಕ್ಕಿ ಕೊಂದಿದ್ದಾನೆ.ಈವತ್ತೂ ಸಹ
ಮನೆಯ ಮುಂದೆ ಪ್ರತ್ಯಕ್ಷವಾಗಿ ಪ್ರಿಯತಮೆಯನ್ನು ಚುಡಾಯಿಸುತ್ತಿದ್ದಾಗ ಗುಂಡು ಹಾರಿಸಿ ಹತ್ಯೆಗೈಯ್ಯಲಾಗಿದೆ.
ಬೆಂಗಳೂರಿನಿಂದ ಬಂದು ಹೋಂ ಕ್ವಾರೆಂಟೈನ್ ಆಗಿದ್ದ ಯುವತಿ ಚಿಕ್ಕಪ್ಪ ರೂಪೇಶ್ ಕೊಲೆ ಮಾಡಿದ ನಂತರ ಪರಾರಿಯಾಗಿದ್ದಾನೆ.
ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

LEAVE A REPLY

Please enter your comment!
Please enter your name here

- Advertisment -
< target="_blank">

Most Popular

ನೇಣುಬಿಗಿದ ಸ್ಥಿತಿಯಲ್ಲಿ ವ್ಯಕ್ತಿ ಶವ ಪತ್ತೆ…ಕೊಲೆ ಶಂಕೆ…

ಅಕ್ರಮ ಸಂಭಂಧ ಹಿನ್ನಲೆ ಬೇರೆಯಾಗಿದ್ದ ಪತ್ನಿಯ ಮನೆಯಲ್ಲಿ ಪತಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ.ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹ ಕಂಡುಬಂದಿದ್ದು ಕೊಲೆ ಶಂಕೆ ವ್ಯಕ್ತವಾಗಿದೆ.ಗೋವಿಂದ ನಾಯ್ಕ(೩೦) ಮೃತ...

ಸರ್ಕಾರಿ ಹೆರಿಗೆ ಆಸ್ಪತ್ರೆಯಲ್ಲಿ ಪತ್ನಿಗೆ ಹೆರಿಗೆ ಮಾಡಿಸಿದ ಡಿಸಿ…ಮಾದರಿ ಜಿಲ್ಲಾಧಿಕಾರಿ…

ಅಧಿಕಾರ ಇದ್ರೆ ಕೆಲವರು ಎಲ್ಲಾ ರೀತಿಯ ಸೌಲಭ್ಯಗಳನ್ನ ಅನುಭವಿಸಯವರೇ ಹೆಚ್ಚು.ಆದರೆ ಗದಗ ಜಿಲ್ಲೆಯ ಜಿಲ್ಲಾಧಿಕಾರಿಗಳು ಈ ಅಪವಾದದಿಂದ ದೂರ ಇದ್ದಾರೆ.ಕೊರೋನಾ ಮಧ್ಯೆಯೂ ಐಶಾರಾಮಿ ಸವಲತ್ತುಗಳನ್ನು...

ಮಾವುತನನ್ನೇ ಬಲಿ ಪಡೆದ ಆನೆ…ಮೈಸೂರು ಮೃಗಾಲಯದಲ್ಲಿ ಘಟನೆ…

ವಿಶ್ವಿಖ್ಯಾತ ಮೈಸೂರು ಮೃಗಾಲಯದಲ್ಲಿ ಆನೆಯೊಂದು ಮಾವುತನನ್ನೇ ತುಳಿದು ಕೊಂದ ಘಟನೆ ಇಂದು ಸಂಜೆ ನಡೆದಿದೆ.ಹರೀಶ್(೩೮) ಮೃತ ದುರ್ದೈವಿಯಾಗಿದ್ದಾರೆ.ಕೆಲವು ವರ್ಷಗಳಿಂದ ಆನೆ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ಹರೀಶ್...

ನಿಧಿ ಶೋಧಕ್ಕೆ ಬಂದ ಕಿಡಿಗೇಡಿ ಯುವಕ ಮಂಟಪ ಕುಸಿದು ಸಾವು…

ನಿಧಿ ಆಸೆಗಾಗಿ ಬಂದ ಚೋರರ ತಂಡದಲ್ಲಿ ಯುವಕನೊಬ್ಬ ಮೃತಪಟ್ಟಿದ್ದು ಮೂವರು ಗಾಯಗೊಂಡ ಘಟನೆ ಹೊಸಕೋಟೆ ತಾಲೂಕಿನ ನಂದಗುಡಿ ಹೋಬಳಿಯ ಹಿಂಡಿಗನಾಳ ಗ್ರಾಮದಲ್ಲಿ ನಡೆದಿದೆ.ನಿಧಿ ಲಪಟಾಯಿಸುವ...

Recent Comments