32 C
Mysore
Wednesday, August 12, 2020
Home All News ಕೊರೊನಾದಿಂದ ಮೃತಪಟ್ಟವರ ಅಂತ್ಯಕ್ರಿಯೆಯಲ್ಲಿ ಸಂಸದ ಡಿ.ಕೆ.ಸುರೇಶ್ ಭಾಗಿ…

ಕೊರೊನಾದಿಂದ ಮೃತಪಟ್ಟವರ ಅಂತ್ಯಕ್ರಿಯೆಯಲ್ಲಿ ಸಂಸದ ಡಿ.ಕೆ.ಸುರೇಶ್ ಭಾಗಿ…

ರಾಮನಗರ ಸಂಸದ ಡಿ.ಕೆ.ಸುರೇಶ್ ಮಾನವೀಯತೆಯನ್ನ ಮೆಚ್ಚಲೇಬೇಕು.ಕೊರೊನಾ ಸೋಂಕು ತಗುಲಿದೆ ಅಂದ್ರೆ ಹೌಹಾರಿ ದೂರ ನಿಲ್ಲುವುದೇ ಹೆಚ್ಚು.ಆದರೆ ಸಂಸದ ಡಿ.ಕೆ.ಸುರೇಶ್ ಮುನ್ನೆಚ್ಚರಿಕೆ ಕ್ರಮ ಕೈಗೊಂಡು ಸೋಂಕಿತರನ್ನ ನೋಡಲು ಆಸ್ಪತ್ರೆಗೆ ಭೇಟಿ ಮಾಡಿದ್ದಲ್ಲದೆ ಮೃತಪಟ್ಟಾಗಲೂ ಸಹ ಅಂತ್ಯಕ್ರಿಯೆಯಲ್ಲಿ

ಭಾಗಿಯಾಗಿದ್ದಾರೆ.ಕೋವಿಡ್ ಆಸ್ಪತ್ರೆಗೆ ತೆರಳಿ ಸೊಂಕಿತರಿಗೆ ಆತ್ಮಸ್ಥೈರ್ಯ ತುಂಬಿದ್ದ ಸಂಸದ ಡಿ.ಕೆ.ಸುರೇಶ್ ಇದೀಗ ಮೃತ ಸೋಂಕಿತರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು ಮೃತರಿಗೆ ಅಂತಿಮ ನಮನ ಸಲ್ಲಿಸಿ ಗಮನ ಸೆಳೆದಿದ್ದಾರೆ. ಕಳೆದ ಮೂರು ದಿನಗಳ‌ ಹಿಂದೆ ಕನಕಪುರದ ಸಪ್ತಗಿರಿ ಜೂವೆಲರ್ಸ್ ಮಾಲೀಕರಾದ ನರಸಿಂಹ ಶೆಟ್ಟಿ ಅವರಿಗೆ ಕರೋನಾ ಪಾಸಿಟಿವ್ ಕಾಣಿಸಿಕೊಂತ್ತು.ಸೋಂಕಿತರನ್ನ ಆಸ್ಪತ್ರೆಯಲ್ಲಿ ಡಿ.ಕೆ.ಸುರೇಶ್ ಭೇಟಿ ಮಾಡಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಸೋಂಕಿತರು ಸಾವನ್ನಪ್ಪಿದರು.


ಸೋಂಕಿತ ವ್ಯಕ್ತಿಯ ಅಂತ್ಯಕ್ರಿಯೆ ಕನಕಪುರದ ದೇಗುಲ ಮಠದ ಸಮೀಪದ ಸ್ಮಶಾನದಲ್ಲಿ ಮಾಡಲಾಯಿತು.
ಈ ವೇಳೆ ಅಂತ್ಯಕ್ರಿಯೆಯಲ್ಲಿ ಪಿಪಿಇ ಕಿಟ್ ಧರಿಸಿ ಸಂಸದ ಡಿ.ಕೆ ಸುರೇಶ್, ಎಂಎಲ್ಸಿ ರವಿ ಪಾಲ್ಗೊಂಡರು. ಕುಟುಂಬ ಸದಸ್ಯರಿಗೆ ಧೈರ್ಯ ತುಂಬಿದ್ದಾರೆ.ಕೊರೊನಾ ಭೀತಿಯನ್ನ ಲೆಕ್ಕಿಸದ ಡಿ.ಕೆ.ಸುರೇಶ್ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದು ವಿಶೇಷವೇ…

LEAVE A REPLY

Please enter your comment!
Please enter your name here

- Advertisment -
< target="_blank">

Most Popular

ನೇಣುಬಿಗಿದ ಸ್ಥಿತಿಯಲ್ಲಿ ವ್ಯಕ್ತಿ ಶವ ಪತ್ತೆ…ಕೊಲೆ ಶಂಕೆ…

ಅಕ್ರಮ ಸಂಭಂಧ ಹಿನ್ನಲೆ ಬೇರೆಯಾಗಿದ್ದ ಪತ್ನಿಯ ಮನೆಯಲ್ಲಿ ಪತಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ.ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹ ಕಂಡುಬಂದಿದ್ದು ಕೊಲೆ ಶಂಕೆ ವ್ಯಕ್ತವಾಗಿದೆ.ಗೋವಿಂದ ನಾಯ್ಕ(೩೦) ಮೃತ...

ಸರ್ಕಾರಿ ಹೆರಿಗೆ ಆಸ್ಪತ್ರೆಯಲ್ಲಿ ಪತ್ನಿಗೆ ಹೆರಿಗೆ ಮಾಡಿಸಿದ ಡಿಸಿ…ಮಾದರಿ ಜಿಲ್ಲಾಧಿಕಾರಿ…

ಅಧಿಕಾರ ಇದ್ರೆ ಕೆಲವರು ಎಲ್ಲಾ ರೀತಿಯ ಸೌಲಭ್ಯಗಳನ್ನ ಅನುಭವಿಸಯವರೇ ಹೆಚ್ಚು.ಆದರೆ ಗದಗ ಜಿಲ್ಲೆಯ ಜಿಲ್ಲಾಧಿಕಾರಿಗಳು ಈ ಅಪವಾದದಿಂದ ದೂರ ಇದ್ದಾರೆ.ಕೊರೋನಾ ಮಧ್ಯೆಯೂ ಐಶಾರಾಮಿ ಸವಲತ್ತುಗಳನ್ನು...

ಮಾವುತನನ್ನೇ ಬಲಿ ಪಡೆದ ಆನೆ…ಮೈಸೂರು ಮೃಗಾಲಯದಲ್ಲಿ ಘಟನೆ…

ವಿಶ್ವಿಖ್ಯಾತ ಮೈಸೂರು ಮೃಗಾಲಯದಲ್ಲಿ ಆನೆಯೊಂದು ಮಾವುತನನ್ನೇ ತುಳಿದು ಕೊಂದ ಘಟನೆ ಇಂದು ಸಂಜೆ ನಡೆದಿದೆ.ಹರೀಶ್(೩೮) ಮೃತ ದುರ್ದೈವಿಯಾಗಿದ್ದಾರೆ.ಕೆಲವು ವರ್ಷಗಳಿಂದ ಆನೆ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ಹರೀಶ್...

ನಿಧಿ ಶೋಧಕ್ಕೆ ಬಂದ ಕಿಡಿಗೇಡಿ ಯುವಕ ಮಂಟಪ ಕುಸಿದು ಸಾವು…

ನಿಧಿ ಆಸೆಗಾಗಿ ಬಂದ ಚೋರರ ತಂಡದಲ್ಲಿ ಯುವಕನೊಬ್ಬ ಮೃತಪಟ್ಟಿದ್ದು ಮೂವರು ಗಾಯಗೊಂಡ ಘಟನೆ ಹೊಸಕೋಟೆ ತಾಲೂಕಿನ ನಂದಗುಡಿ ಹೋಬಳಿಯ ಹಿಂಡಿಗನಾಳ ಗ್ರಾಮದಲ್ಲಿ ನಡೆದಿದೆ.ನಿಧಿ ಲಪಟಾಯಿಸುವ...

Recent Comments