32 C
Mysore
Wednesday, August 12, 2020
Home All News ಆನೆ ನಡೆದದ್ದೆ ಮಾರ್ಗ…ಕಬ್ಬಿಣದ ತಡೆಗೋಡೆ ಮುರಿದ ಗಜರಾಜ

ಆನೆ ನಡೆದದ್ದೆ ಮಾರ್ಗ…ಕಬ್ಬಿಣದ ತಡೆಗೋಡೆ ಮುರಿದ ಗಜರಾಜ

ಆನೆಗಳ ಹಾವಳಿ ತಡೆಗಟ್ಟಲು ಅರಣ್ಯ ಪ್ರದೇಶದ ಕೆಲವು ಸ್ಥಳಗಲ್ಲಿ ತಡೆಗೋಡೆ ನಿರ್ಮಿಸಲಾಗಿದೆ.ಒಂಟಿ ಸಲಗವೊಂದಕ್ಕೆ ತಡೆಗೋಡೆ ಅಡ್ಡಿಯಾಗಿದೆ.ತನ್ನ ದಾರಿಗೆ ಅಡ್ಡಬಂದ ಕಬ್ಬಿಣದ ತಡೆಗೋಡೆಯನ್ನ ಪುಡಿಮಾಡಲು ಯತ್ನಿಸಿದೆ.ಅರಣ್ಯ ಇಲಾಖೆ ಸಿಬ್ಬಂದಿಗಳ ಮುಂದೆಯೇ ಒಂಟಿ ಸಲಗ ತನ್ನ ಹಾದಿ ಹಿಡಿಯಲು ಪ್ರಯತ್ನಿಸಿ ಆಕ್ರೋಷ ವ್ಯಕ್ತಪಡಿಸಿದೆ.ದಾರಿ ಇಲ್ಲದಿದ್ರೂ ದಾರಿ ಮಾಡಿಕೊಂಡ ಗಜರಾಜ.ಕಾಡಿನತ್ತ ತೆರಳಲು ಹರಸಾಹಸ ಪಟ್ಟಿದೆ.ಗಜರಾಜ ಆರ್ಭಟಕ್ಕೆ ಅರಣ್ಯ ಇಲಾಖೆ ಸಿಬ್ಬಂದಿಗಳೂ ಸಹ ಕ್ಷಣಕಾಲ ಬೆಚ್ಚಿದ್ದಾರೆ.ಆನೆಗಳು ಒಳಬಾರದಂತೆ ಅರಣ್ಯ ಇಲಾಖೆ ಕಾಡಂಚಲ್ಲಿ ನಿರ್ಮಿಸಿರುವ ರೈಲ್ವೆ ಕಂಬಿ ತಡೆಗೋಡೆ ಮೇಲೆ ಆನೆ ಆಕ್ರೋಷ ವ್ಯಕ್ತಪಡಿಸಿದ ವಿಡಿಯೋ ವೈರಲ್ ಆಗಿದೆ.ಇದೇ ವೇಳೆ ಸಿಮೆಂಟ್ ನಲ್ಲಿ ನಿರ್ಮಿಸಿದ್ದ ತಡೆಗೋಡೆಯನ್ನ ಮುರಿದು ಹಾಕಿದೆ.
ಹೆಚ್.ಡಿ ಕೋಟೆ ತಾಲೂಕಿನ ಕಾಟವಾಳು ಗ್ರಾಮದಲ್ಲಿ ಘಟನೆ ನಡೆದಿದೆ.
ಬಂಡೀಪುರ ಅರಣ್ಯ ವ್ಯಾಪ್ತಿಯ ಬೇಗೂರು ವಲಯದ ಕಾಟವಾಳು ಗ್ರಾಮ ಇದೆ.
ಕೊನೆಗೂ ತನಗೆ ಅಡ್ಡ ಬಂದ ತಡೆಗೋಡೆಯನ್ನ ಕೆಡವಿ ಕಾಡನತ್ತ ಗಜರಾಜನ ಪಯಣ ಬೆಳೆಸುವಲ್ಲಿ ಯಶಸ್ವಿಯಾಗಿದ್ದಾನೆ…

LEAVE A REPLY

Please enter your comment!
Please enter your name here

- Advertisment -
< target="_blank">

Most Popular

ನೇಣುಬಿಗಿದ ಸ್ಥಿತಿಯಲ್ಲಿ ವ್ಯಕ್ತಿ ಶವ ಪತ್ತೆ…ಕೊಲೆ ಶಂಕೆ…

ಅಕ್ರಮ ಸಂಭಂಧ ಹಿನ್ನಲೆ ಬೇರೆಯಾಗಿದ್ದ ಪತ್ನಿಯ ಮನೆಯಲ್ಲಿ ಪತಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ.ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹ ಕಂಡುಬಂದಿದ್ದು ಕೊಲೆ ಶಂಕೆ ವ್ಯಕ್ತವಾಗಿದೆ.ಗೋವಿಂದ ನಾಯ್ಕ(೩೦) ಮೃತ...

ಸರ್ಕಾರಿ ಹೆರಿಗೆ ಆಸ್ಪತ್ರೆಯಲ್ಲಿ ಪತ್ನಿಗೆ ಹೆರಿಗೆ ಮಾಡಿಸಿದ ಡಿಸಿ…ಮಾದರಿ ಜಿಲ್ಲಾಧಿಕಾರಿ…

ಅಧಿಕಾರ ಇದ್ರೆ ಕೆಲವರು ಎಲ್ಲಾ ರೀತಿಯ ಸೌಲಭ್ಯಗಳನ್ನ ಅನುಭವಿಸಯವರೇ ಹೆಚ್ಚು.ಆದರೆ ಗದಗ ಜಿಲ್ಲೆಯ ಜಿಲ್ಲಾಧಿಕಾರಿಗಳು ಈ ಅಪವಾದದಿಂದ ದೂರ ಇದ್ದಾರೆ.ಕೊರೋನಾ ಮಧ್ಯೆಯೂ ಐಶಾರಾಮಿ ಸವಲತ್ತುಗಳನ್ನು...

ಮಾವುತನನ್ನೇ ಬಲಿ ಪಡೆದ ಆನೆ…ಮೈಸೂರು ಮೃಗಾಲಯದಲ್ಲಿ ಘಟನೆ…

ವಿಶ್ವಿಖ್ಯಾತ ಮೈಸೂರು ಮೃಗಾಲಯದಲ್ಲಿ ಆನೆಯೊಂದು ಮಾವುತನನ್ನೇ ತುಳಿದು ಕೊಂದ ಘಟನೆ ಇಂದು ಸಂಜೆ ನಡೆದಿದೆ.ಹರೀಶ್(೩೮) ಮೃತ ದುರ್ದೈವಿಯಾಗಿದ್ದಾರೆ.ಕೆಲವು ವರ್ಷಗಳಿಂದ ಆನೆ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ಹರೀಶ್...

ನಿಧಿ ಶೋಧಕ್ಕೆ ಬಂದ ಕಿಡಿಗೇಡಿ ಯುವಕ ಮಂಟಪ ಕುಸಿದು ಸಾವು…

ನಿಧಿ ಆಸೆಗಾಗಿ ಬಂದ ಚೋರರ ತಂಡದಲ್ಲಿ ಯುವಕನೊಬ್ಬ ಮೃತಪಟ್ಟಿದ್ದು ಮೂವರು ಗಾಯಗೊಂಡ ಘಟನೆ ಹೊಸಕೋಟೆ ತಾಲೂಕಿನ ನಂದಗುಡಿ ಹೋಬಳಿಯ ಹಿಂಡಿಗನಾಳ ಗ್ರಾಮದಲ್ಲಿ ನಡೆದಿದೆ.ನಿಧಿ ಲಪಟಾಯಿಸುವ...

Recent Comments