32 C
Mysore
Wednesday, August 12, 2020
Home All News ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದ ವೃದ್ದ ನಾಪತ್ತೆ…ಮನೆಯವರಲ್ಲಿ ಆತಂಕ…

ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದ ವೃದ್ದ ನಾಪತ್ತೆ…ಮನೆಯವರಲ್ಲಿ ಆತಂಕ…

ಕೊರೊನಾ ಸೋಂಕು ಧೃಢವಾಗಿ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವೃದ್ದರೊಬ್ಬರು ನಾಪತ್ತೆಯಾಗಿದ್ದಾರೆ.ಮಂಡಿ ಮೊಹಲ್ಲಾದ ಗರಡಿಕೇರಿ ನಿವಾಸಿ ಕೂಸಪ್ಪ (೭೬) ಆಸ್ಪತ್ರೆಯಿಂದ ನಾಪತ್ತೆಯಾದವರು.
ವೈದ್ಯರು ಹಾಗೂ ಪೊಲೀಸರ ನಿರ್ಲಕ್ಷ್ಯ ಆರೋಪ ಕೇಳಿಬಂದಿದೆ.
ಕೊರೊನಾ ಸೋಂಕಿತರಾಗಿ ಮೈಸೂರಿನ ಮೇಟಗಳ್ಳಿಯಲ್ಲಿರುವ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು.
ಕಳೆದ ಗುರುವಾರ ದಾಖಲಾಗಿದ್ದ
ಕೂಸಪ್ಪ ಅವರಿಗೆ ಸ್ಮರಣ ಶಕ್ತಿ ಕಡಿಮೆಯಿದೆ ಹುಷಾರಾಗಿ ನೋಡಿಕೊಳ್ಳಿ ಎಂದು ಪುತ್ರ ವಿಜಯ್ ವೈದ್ಯರಿಗೆ ಮನವಿ ಮಾಡಿದ್ದರು.
ಶನಿವಾರ ಬೆಳಗ್ಗೆ ಕೂಸಪ್ಪ ಆಸ್ಪತ್ರೆಯಿಂದ ನಾಪತ್ತೆಯಾಗಿದ್ದಾರೆ.
ವಿಜಯ್ ಅವರ ಸ್ನೇಹಿತರೊಬ್ಬರು ನೀಡಿದ ಮಾಹಿತಿ ಆಧಾರದ ಮೇಲೆ ಆಸ್ಪತ್ರೆಯಲ್ಲಿ ಪರಿಶೀಲನೆ ಮಾಡಿದಾಗ ಸಿಬ್ಬಂದಿಗಳು ಇದ್ದಾರೆಂದು ಸುಳ್ಳು ಹೇಳಿ ದಾರಿ ತಪ್ಪಿಸಿದ್ದಾರೆ.
ಭಾನುವಾರ ಬೆಳಗ್ಗೆ ಆಸ್ಪತ್ರೆಯಿಂದ ನಾಪತ್ತೆಯಾದ ಬಗ್ಗೆ ಖಚಿತ ಪಡಿಸಿಕೊಂಡ ವಿಜಯ್ ಆತಂಕಗೊಂಡು ತಂದೆಗಾಗಿ ಹುಡುಕಾಟ ನಡೆಸಿದ್ದಾರೆ.
ಆಸ್ಪತ್ರೆಯ ವೈದ್ಯರು, ಸಿಬ್ಬಂದಿಯೊಂದಿಗೆ ಭದ್ರತಾ ಕಾರ್ಯದಲ್ಲಿದ್ದ ಪೊಲೀಸರ ನಿರ್ಲಕ್ಷ್ಯದಿಂದ ನಮ್ಮ ತಂದೆ ನಾಪತ್ತೆಯಾಗಿದ್ದಾರೆ ಎಂದು ಆರೋಪಿಸಿರುವ ವಿಜಯ್ ಈ ಸಂಬಂಧ ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

LEAVE A REPLY

Please enter your comment!
Please enter your name here

- Advertisment -
< target="_blank">

Most Popular

ನೇಣುಬಿಗಿದ ಸ್ಥಿತಿಯಲ್ಲಿ ವ್ಯಕ್ತಿ ಶವ ಪತ್ತೆ…ಕೊಲೆ ಶಂಕೆ…

ಅಕ್ರಮ ಸಂಭಂಧ ಹಿನ್ನಲೆ ಬೇರೆಯಾಗಿದ್ದ ಪತ್ನಿಯ ಮನೆಯಲ್ಲಿ ಪತಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ.ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹ ಕಂಡುಬಂದಿದ್ದು ಕೊಲೆ ಶಂಕೆ ವ್ಯಕ್ತವಾಗಿದೆ.ಗೋವಿಂದ ನಾಯ್ಕ(೩೦) ಮೃತ...

ಸರ್ಕಾರಿ ಹೆರಿಗೆ ಆಸ್ಪತ್ರೆಯಲ್ಲಿ ಪತ್ನಿಗೆ ಹೆರಿಗೆ ಮಾಡಿಸಿದ ಡಿಸಿ…ಮಾದರಿ ಜಿಲ್ಲಾಧಿಕಾರಿ…

ಅಧಿಕಾರ ಇದ್ರೆ ಕೆಲವರು ಎಲ್ಲಾ ರೀತಿಯ ಸೌಲಭ್ಯಗಳನ್ನ ಅನುಭವಿಸಯವರೇ ಹೆಚ್ಚು.ಆದರೆ ಗದಗ ಜಿಲ್ಲೆಯ ಜಿಲ್ಲಾಧಿಕಾರಿಗಳು ಈ ಅಪವಾದದಿಂದ ದೂರ ಇದ್ದಾರೆ.ಕೊರೋನಾ ಮಧ್ಯೆಯೂ ಐಶಾರಾಮಿ ಸವಲತ್ತುಗಳನ್ನು...

ಮಾವುತನನ್ನೇ ಬಲಿ ಪಡೆದ ಆನೆ…ಮೈಸೂರು ಮೃಗಾಲಯದಲ್ಲಿ ಘಟನೆ…

ವಿಶ್ವಿಖ್ಯಾತ ಮೈಸೂರು ಮೃಗಾಲಯದಲ್ಲಿ ಆನೆಯೊಂದು ಮಾವುತನನ್ನೇ ತುಳಿದು ಕೊಂದ ಘಟನೆ ಇಂದು ಸಂಜೆ ನಡೆದಿದೆ.ಹರೀಶ್(೩೮) ಮೃತ ದುರ್ದೈವಿಯಾಗಿದ್ದಾರೆ.ಕೆಲವು ವರ್ಷಗಳಿಂದ ಆನೆ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ಹರೀಶ್...

ನಿಧಿ ಶೋಧಕ್ಕೆ ಬಂದ ಕಿಡಿಗೇಡಿ ಯುವಕ ಮಂಟಪ ಕುಸಿದು ಸಾವು…

ನಿಧಿ ಆಸೆಗಾಗಿ ಬಂದ ಚೋರರ ತಂಡದಲ್ಲಿ ಯುವಕನೊಬ್ಬ ಮೃತಪಟ್ಟಿದ್ದು ಮೂವರು ಗಾಯಗೊಂಡ ಘಟನೆ ಹೊಸಕೋಟೆ ತಾಲೂಕಿನ ನಂದಗುಡಿ ಹೋಬಳಿಯ ಹಿಂಡಿಗನಾಳ ಗ್ರಾಮದಲ್ಲಿ ನಡೆದಿದೆ.ನಿಧಿ ಲಪಟಾಯಿಸುವ...

Recent Comments