32 C
Mysore
Friday, January 15, 2021
Home All News ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ


ಮೈಸೂರು.ಆಗಸ್ಟ್.20. ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಆಗಸ್ಟ್ 10 ರಿಂದ ಆಕ್ಟೋಬರ್ 31 ರವರೆಗೆ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಯನ್ನು ನಡೆಸಲಾಗುತ್ತಿದ್ದು, ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ವಾಸವಿರುವ ಅರ್ಹ ಮತದಾರರು ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡಿಸಲು, ತಿದ್ದುಪಡಿ, ಕೈಬಿಡಲು ಅಥವಾ ವರ್ಗಾವಣೆ ಇದ್ದಲ್ಲಿ ಅರ್ಜಿ ಸಲ್ಲಿಸಬಹುದು.
ದಿನಾಂಕ: 01-01-2021 ರಂದು 18 ವರ್ಷ ಪೂರೈಸಿದವರು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಲು ನಮೂನೆ-6 ರಲ್ಲಿ ಅಗತ್ಯವಾದ ಸ್ವಯಂ ದೃಢೀಕೃತ ದಾಖಲಾತಿಗಳೊಂದಿಗೆ ಸಲ್ಲಿಸುವುದು. 21 ವರ್ಷ ಮೇಲ್ಪಟ್ಟವರು ನಮೂನೆ-6ರಲ್ಲಿ ಹೊಸದಾಗಿ ಅರ್ಜಿ ಸಲ್ಲಿಸಬಹುದು. ಈ ಹಿಂದೆ ಮತದಾರರ ಪಟ್ಟಿಯಲ್ಲಿ ನೊಂದಣಿ ಮಾಡಿಸಿದ್ದಲ್ಲಿ ಸಂಬಂಧಿಸಿದ ಮತದಾನ ನೊಂದಣಿ ಅಧಿಕಾರಿಯಿಂದ ನಮೂನೆ-7 ರಲ್ಲಿ ಸ್ವೀಕೃತಿ ಅಥವಾ ಹಿಂಬರಹ ಹಾಗೂ ನೋಟರಿ ಪ್ರಮಾಣ ಪತ್ರ ಸಲ್ಲಿಸುವುದು.
ಹೆಸರು ಕೈಬಿಡುವುದಕ್ಕೆ ನಮೂನೆ-7 ಅನ್ನು ಪಡೆದು ಅರ್ಜಿ ಸಲ್ಲಿಸಬಹುದು. ಹೆಸರು ತಿದ್ದುಪಡಿಗೆ ನಮೂನೆ-8 ಅನ್ನು ಪಡೆದು ಸಲ್ಲಿಸುವುದು. ಒಂದೇ ವಿಧಾನಸಭಾ ಕ್ಷೇತ್ರದಲ್ಲಿ ಬೇರೆ ಮತಗಟ್ಟೆಗೆ ವರ್ಗಾವಣೆ ಮಾಡಿಸಬೇಕಿದ್ದಲ್ಲಿ ನಮೂನೆ-8ಎ ಹಾಗೂ ವಿಳಾಸ ದಾಖಲಾತಿಯೊಂದಿಗೆ ಸಲ್ಲಿಸುವುದು.
ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ವಾಸವಾಗಿರುವ ಸಾರ್ವಜನಿಕರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಈ ಹಿಂದೆ ಹೆಸರು ಇದ್ದರೂ ಸಹ ಹೊಸ ಮತದಾರರ ಪಟ್ಟಿಯಲ್ಲಿ ಹೆಸರು ಇರುವುದನ್ನು ಖಚಿತಪಡಿಸಕೊಳ್ಳತಕ್ಕದ್ದು. ಒಂದು ವೇಳೆ ಹೆಸರು ಇಲ್ಲದಿದ್ದಲ್ಲಿ ಮರು ಸೇರ್ಪಡೆಗೆ ಅವಕಾಶವಿರುತ್ತದೆ ಎಂದು ಮೈಸೂರು ತಾಲ್ಲೂಕಿನ ತಹಶೀಲ್ದಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ✍️ tv10kannada news💐

LEAVE A REPLY

Please enter your comment!
Please enter your name here

- Advertisment -

Most Popular

ಗ್ರಾ.ಪಂ.ಚುನಾವಣೆಯಲ್ಲಿ ಪತ್ನಿಗೆ ಸೋಲು…ಪತಿ ಸೂಸೈಡ್…

ಇತ್ತೀಚೆಗೆ ನಡೆದ ಗ್ರಾಮಪಂಚಾಯ್ತಿ ಚುನಾವಣೆಯಲ್ಲಿ ಪತ್ನಿ ಸೋತ ಹಿನ್ನಲೆ ಪತಿರಾಯ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ಕಲಬುರ್ಗಿ ಜಿಲ್ಲೆ ಚಿತ್ತಾಪುರ ತಾಲೂಕು...

ಮಗನ ಕೊಲೆ ಮುಚ್ಚಿ ಹಾಕಲು ತಂದೆಯನ್ನೂ ಕೊಲೆ ಮಾಡಿದ ದುಷ್ಕರ್ಮಿಗಳು ಅಂದರ್…

ಮಗನ ಕೊಲೆ ಪ್ರಕರಣದಿಂದ ತಪ್ಪಿಸಿಕೊಳ್ಳಲು ತಂದೆಯನ್ನೂ ಕೊಲೆ ಮಾಡಿದ ಹಂತಕರು ಇದೀಗ ಪೊಲೀಸರ ಅತಿಥಿಯಾಗಿದ್ದಾರೆ.ಮೈಸೂರಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಂಡಕಳ್ಳಿ ಗ್ರಾಮದಲ್ಲಿ ಘಟನೆ...

ಕಾರ್ಯಕರ್ತನ ಟೀ ಅಂಗಡಿಯಲ್ಲಿ ಲೆಮನ್ ಟೀ ಸವಿದ ಹೆಚ್ಡಿಕೆ…

ತಮ್ಮ ಕಾರ್ಯಕರ್ತನ ಟೀ ಅಂಗಡಿಯಲ್ಲಿ ಸ್ಪೆಷಲ್ ಲೆಮನ್ ಮಡಿಕೆ ಟೀ ಕುಡಿದ ಮಾಜಿ ಸಿಎಂ ಕುಮಾರಸ್ವಾಮಿ ಮತ್ತೊಮ್ಮೆ ಸರಳತೆ ಮೆರೆದಿದ್ದಾರೆ. ಇಂದು ಕಾರ್ಯಕ್ರಮದ ನಿಮಿತ್ತ...

ಏಷಿಯನ್ ಪೈಂಟ್ಸ್ ವಿರುದ್ದ ರೈತರ ಪ್ರತಿಭಟನೆ…ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಸಭೆ…

ಕಳೆದ 42 ದಿನಗಳಿಂದ ಮೈಸೂರಿನ ಏಷಿಯನ್‌ ಪೇಂಟ್ಸ್‌ ಕಾರ್ಖಾನೆ ಬಳಿ ಪ್ರತಿಭಟನೆಯಲ್ಲಿ ತೊಡಗಿರುವ ರೈತರ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಇಂದು ಬೆಂಗಳೂರಿನಲ್ಲಿ ಬೃಹತ್‌ ಮತ್ತು...

Recent Comments