32 C
Mysore
Friday, October 23, 2020
Home All News ಕೃಷಿ, ಕೃಷಿಯೇತರ ಕ್ಷೇತ್ರಕ್ಕೆ 39,300 ಕೋಟಿ ರೂಪಾಯಿ ಸಾಲ; ಮುಖ್ಯಮಂತ್ರಿಗಳಾದ ಯಡಿಯೂರಪ್ಪ

ಕೃಷಿ, ಕೃಷಿಯೇತರ ಕ್ಷೇತ್ರಕ್ಕೆ 39,300 ಕೋಟಿ ರೂಪಾಯಿ ಸಾಲ; ಮುಖ್ಯಮಂತ್ರಿಗಳಾದ ಯಡಿಯೂರಪ್ಪ

  • ಆರ್ಥಿಕ ಸ್ಪಂದನ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಅವರಿಂದ ಚಾಲನೆ
  • ಕೋವಿಡ್ 19 ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 53 ಕೋಟಿ ರೂ. ಸಂಗ್ರಹಿಸಿ ನೀಡಿದ ಸಚಿವರಾದ ಸೋಮಶೇಖರ್ ಅವರಿಗೆ ಅಭಿನಂದನೆ ಸಲ್ಲಿಸಿದ ಸಿಎಂ
  • ಆರ್ಥಿಕ ಸ್ಪಂದನ ಕಾರ್ಯಕ್ರಮದಡಿ 4 ವಲಯಗಳಿಗೆ ಸಾಲ ವಿತರಣೆ; ಸಚಿವ ಎಸ್‌ ಟಿ ಎಸ್

ಬೆಂಗಳೂರು: ಭಾರತದಲ್ಲಿ ಸಹಕಾರಿ ಚಳುವಳಿ ಹೆಮ್ಮರವಾಗಿ ಬೆಳೆದಿದೆ. ಬಡವರಿಗೆ, ಹೆಣ್ಣುಮಕ್ಕಳಿಗೆ, ರೈತರಿಗೆ ಸಹಕಾರಿಯಾಗಿ ನಿಂತಿದೆ. ಕೃಷಿ ಹಾಗೂ ಕೃಷಿಯೇತರ ಕ್ಷೇತ್ರಕ್ಕೆ 39,300 ಕೋಟಿ ರೂಪಾಯಿ ಸಾಲವನ್ನು ನೀಡಲು ಮುಂದಾಗಿದ್ದೇವೆ ಎಂದು ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದರು.

ಸಹಕಾರ ಇಲಾಖೆ ವತಿಯಿಂದ ಕೋವಿಡ್ 19 ಹಿನ್ನೆಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಯೋಜನೆಗಳ ಆರ್ಥಿಕ ಸ್ಪಂದನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕೋವಿಡ್ 19 ರ ಸಂಕಷ್ಟಗಳ ಕಾಲದಲ್ಲಿ ಸಹಕಾರ ಇಲಾಖೆ ವತಿಯಿಂದ 53 ಕೋಟಿ ರೂ. ದೇಣಿಗೆ ನೀಡಿರುವುದಕ್ಕೆ ಸಹಕಾರ ಸಚಿವರಾದ ಸೋಮಶೇಖರ್ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಹೈನುಗಾರಿಕೆ, ಮೀನುಗಾರಿಕೆ ಸಾಲಕ್ಕಾಗಿ 2020-21 ನೇ ಸಾಲಿನಲ್ಲಿ 38 ಸಾವಿರ ಜನರಿಗೆ 100 ಕೋಟಿ ರೂ. ಸಾಲ ವಿತರಣೆ ಗುರಿ ಹೊಂದಲಾಗಿದ್ದು, ಈವರೆಗೆ 34,927 ಜನರಿಗೆ 60.30 ಕೋಟಿ ರೂ. ವಿತರಿಸಲಾಗಿದೆ ಎಂದು ತಿಳಿಸಿದರು.

ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಮಾತನಾಡಿ,
ಕೋವಿಡ್ 19 ರ ಸನ್ನಿವೇಶದಲ್ಲಿ ದೇಶದ ಸಮಗ್ರ ಅಭಿವೃದ್ಧಿಗೆ ಆತ್ಮನಿರ್ಭರ ಭಾರತ ಯೋಜನೆಯಡಿ 20 ಲಕ್ಷ ಕೋಟಿ ರೂಪಾಯಿಯನ್ನು ಕೊಟ್ಟಿದ್ದಾರೆ. ಇನ್ನು ಸಣ್ಣ, ಮಧ್ಯಮ ಹಾಗೂ ಅತಿ ಸಣ್ಣ ರೈತರಿಗೆ ಸಾಲ ನೀಡಬೇಕು ಎಂಬ ನಿಟ್ಟಿನಲ್ಲಿ ಈಗ ಆರ್ಥಿಕ ಸ್ಪಂದನ ಕಾರ್ಯಕ್ರಮದಡಿ ಸುಮಾರು 39 ಸಾವಿರ ಕೋಟಿ ರೂಪಾಯಿ ನೀಡುವ ಯೋಜನೆಗೆ ಮಾನ್ಯ ಮುಖ್ಯಮಂತ್ರಿಗಳು ಚಾಲನೆ ನೀಡಿದ್ದಾರೆ ಎಂದು ತಿಳಿಸಿದರು.

ಈ ಯೋಜನೆಯಡಿ ನಾಲ್ಕು ವಲಯಗಳಲ್ಲಿ ವಿತರಣೆ ಮಾಡಲಾಗುತ್ತಿದ್ದು, ಮೊದಲಿಗೆ ಬೆಂಗಳೂರು ವಲಯದಲ್ಲಿ ವಿತರಣೆ ಮಾಡಲಾಗುತ್ತಿದೆ. ಈ ಮೂಲಕ ರೈತರನ್ನು ಆರ್ಥಿಕ ಸಬಲರನ್ನಾಗಿ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಉಳಿದ ಮೂರು ವಲಯಗಳಿಗೆ ಈ ಯೋಜನೆಯಡಿ ಸಾಲವನ್ನು ವಿತರಣೆ ಮಾಡಲಾಗುತ್ತದೆ ಎಂದು ತಿಳಿಸಿದರು.

ಕೋವಿಡ್ ಸಂದರ್ಭದಲ್ಲಿ ಬಡವರಿಗೆ ಕುಡಿಯುವ ಹಾಲು ವಿತರಣೆ ಮಾಡಲು 79 ಕೋಟಿಯನ್ನು ಕೆಎಂಎಫ್ ಗೆ ಬಿಡುಗಡೆ ಮಾಡಿದ್ದೇವೆ. ಇನ್ನು ರೈತರಿಗೂ ಸಹ ಸಾಲ ಕೊಡುವ ಕೆಲಸವನ್ನು ಮಾಡುತ್ತಿದ್ದೇವೆ. 15,300 ಕೋಟಿ ರೂ. ಬೆಳೆ ಸಾಲ ನೀಡುವ ಗುರಿ ಇದ್ದು, ಈವರೆಗೆ 12.11 ಲಕ್ಷ ರೈತರಿಗೆ 7929.30 ಕೋಟಿ ರೂಪಾಯಿ ಸಾಲವನ್ನು ಶೂನ್ಯ ಹಾಗೂ ಶೇ. 3ರ ಬಡ್ಡಿದರದಲ್ಲಿ ವಿತರಣೆ ಮಾಡಲಾಗಿದೆ ಎಂದು ತಿಳಿಸಿದರು.

ಇನ್ನು ಮುಖ್ಯಮಂತ್ರಿಗಳ ಕೋವಿಡ್ ಪರಿಹಾರ ನಿಧಿಗೆ 53 ಕೋಟಿ ರೂಪಾಯಿ ದೇಣಿಗೆಯನ್ನು ಸಹಕಾರ ವಲಯ ಹಾಗೂ ಎಪಿಎಂಸಿಗಳ ಮೂಲಕ ಸಂಗ್ರಹಿಸಿ ಕೊಟ್ಟಿದ್ದೇನೆ. ಜೊತೆಗೆ ಕೊರೋನಾ ವಾರಿಯರ್ಸ್ ಗಳಾದ 12,608 ಆಶಾ ಕಾರ್ಯಕರ್ತೆಯರಿಗೆ 12.75 ಕೋಟಿ ರೂ. ಪ್ರೋತ್ಸಾಹಧನವನ್ನು ವಿತರಣೆ ಮಾಡಿದ್ದೇವೆ ಎಂದು ಸಚಿವರಾದ ಸೋಮಶೇಖರ್ ತಿಳಿಸಿದರು.

1885 ಕೋಟಿ ರೂಪಾಯಿ ಅನುದಾನವನ್ನು ಕೆಎಂಎಫ್ ನಡಿ ತಲಾ 5 ರೂ.ನಂತೆ ಪ್ರೋತ್ಸಾಹಧನ ಕೊಡುವ ಕೆಲಸವನ್ನು ಮಾನ್ಯ ಮುಖ್ಯಮಂತ್ರಿಗಳು ಮಾಡಿದ್ದಾರೆ. ರೈತರ ಹಾಗೂ ಜನರ ಅಭ್ಯುದಯಕ್ಕೆ ದುಡಿಯುತ್ತಿದ್ದಾರೆ ಎಂದು ಸಚಿವರಾದ ಎಸ್ ಟಿ ಎಸ್ ತಿಳಿಸಿದರು.

ಹೈನುಗಾರರಿಗೆ ಹಾಗೂ ಮೀನುಗಾರರಿಗೆ ಶೂನ್ಯ ಬಡ್ಡಿದರದಲ್ಲಿ 2 ಲಕ್ಷ ರೂ. ಸಾಲ ಕೊಡುವ ಯೋಜನೆಯನ್ನು ಹೊಸದಾಗಿ ಪ್ರಾರಂಭಿಸಲಾಗಿದೆ. ಈ ಎಲ್ಲ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸುವ ಪ್ರಾಮಾಣಿಕ ಪ್ರಯತ್ನವನ್ನು ಮಾನ್ಯ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಮುಂದಾಗಿದ್ದೇವೆ ಎಂದು ಸಚಿವರಾದ ಸೋಮಶೇಖರ್ ತಿಳಿಸಿದರು.

ಸಾಕ್ಷ್ಯಚಿತ್ರ ಅನಾವರಣ

ಇದೇ ಸಂದರ್ಭದಲ್ಲಿ ಆರ್ಥಿಕ ಸ್ಪಂದನ ಕಾರ್ಯಕ್ರಮದ ಸಾಕ್ಷ್ಯಚಿತ್ರವನ್ನು ಅನಾವರಣಗೊಳಿಸಲಾಯಿತು. ಈ ಮೂಲಕ ಸಹಕಾರ ವಲಯದ ಮೂಲಕ ಯಾವೆಲ್ಲ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ರೈತರಿಗೆ ಯಾವೆಲ್ಲ ಯೋಜನೆಗಳಡಿ ಎಷ್ಟು ಸಾಲ ಕೊಡಲಾಗಿದೆ. ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಕೈಗೊಂಡ ಪ್ರವಾಸ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಹಿತಿಯನ್ನು ಕೊಡಲಾಗಿದೆ.

ಸಾಂಕೇತಿಕ ಸಾಲ ವಿತರಣೆ

ಆರ್ಥಿಕ ಸ್ಪಂದನ ಕಾರ್ಯಕ್ರಮದಡಿ ವಿವಿಧ ಯೋಜನೆಯಲ್ಲಿ 50 ಫಲಾನುಭವಿಗಳಿಗೆ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರು ಸಾಂಕೇತಿಕವಾಗಿ ಸಾಲದ ಚೆಕ್ ಅನ್ನು ವಿತರಣೆ ಮಾಡಿದರು.

ಉಪ ಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ ರವರು, ಲಕ್ಷ್ಮಣ ಸಂಗಪ್ಪ ಸವದಿ ರವರು, ಅಶ್ವಥ್ ನಾರಾಯಣ ರವರು, ವಿಧಾನಪರಿಷತ್ ಸದಸ್ಯ ರಮೇಶ್ ಗೌಡ, ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ತುಷಾರ್ ಗಿರಿನಾಥ್, ಕರ್ನಾಟಕ ರಾಜ್ಯ ಸಹಕಾರಿ ಮಾರಾಟ ಮಹಾಮಂಡಳದ ಅಧ್ಯಕ್ಷರಾದ ಡಾ. ರಾಜೇಂದ್ರ ಕುಮಾರ್, ಸಹಕಾರ ಸಂಘಗಳ ನಿಬಂಧಕರಾದ ಎಸ್.ಜಿಯಾವುಲ್ಲ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

- Advertisment -
< target="_blank">

Most Popular

ಪೋಷಕರ ಮುಂದೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಮಗ…ಯಾಕೆ ಗೊತ್ತಾ…

ಯುವಕನೊಬ್ಬ ಪೋಷಕರ ಮುಂದೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ರತ್ನಪುರಿಯಲ್ಲಿ ನಡೆದಿದೆ. ಸ್ನೇಹಿತರು ಪೋಷಕರ...

ಅನೈತಿಕ ಸಂಭಂಧಕ್ಕೆ ಲಾಕ್ ಡೌನ್ ಅಡ್ಡಿ…ಪತಿಯನ್ನ ಕೊಂದ ಪತ್ನಿ ಪ್ರಿಯಕರ ಅಂದರ್…

ಲಾಕ್ ಡೌನ್ ಸಂಧರ್ಭದಲ್ಲಿ ಅನೈತಿಕ ಸಂಭಂಧಕ್ಕೆ ಅಡ್ಡಿಯಾದ ಪತಿಯನ್ನ ಪ್ರಿಯಕರನ ಜೊತೆ ಸೇರಿ ಕೊಂದ ಪತ್ನಿ ಅಂದರ್ ಆಗಿದ್ದಾಳೆ.ಪ್ರಿಯತಮೆಗೆ ಸಾಥ್ ನೀಡಿದ ಪ್ರಿಯಕರನೂ ಸಹ...

ಎಮ್ಮೆ ಮೇಯಿಸುತ್ತಿದ್ದ ಒಂಟಿ ಮಹಿಳೆ ಕೊಲೆ ರಹಸ್ಯ ಬಯಲು…ಚಿನ್ನಾಭರಣಕ್ಕಾಗಿ ಹಂತಕರಾದರು…

ಒಂದೂವರೆ ತಿಂಗಳ ಹಿಂದೆ ನಡೆದ ಕೊಲೆ ರಹಸ್ಯ ಭೇಧಿಸುವಲ್ಲಿ ಬನ್ನೂರು ಪೊಲೀಸರು ಯಶಸ್ವಿಯಾಗಿದ್ದಾರೆ.ಕೊಲೆ ಪ್ರಕರಣಕ್ಕೆ ಸಂಭಂಧಿಸಿದಂತೆ ಇಬ್ಬರು ಆರೋಪಿಗಳನ್ನ ಬಂಧಿಸಿದ್ದಾರೆ.ಚಿನ್ನಾಭರಣಕ್ಕಾಗಿ ಕೊಲೆ ನಡೆಸಿರುವುದಾಗಿ ವಿಚಾರಣೆ...

ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಬಲಿ…ಪ್ರೀತಿಸಿ ಮದುವೆಯಾದ ಎರಡು ವರ್ಷಕ್ಕೇ ಮಸಣಕ್ಕೆ…

ವರದಕ್ಷಿಣೆ ಪೆಡಂಭೂತಕ್ಕೆ ಎರಡು ವರ್ಷದ ಹಿಂದೆ ಪ್ರೀತಿಸಿ ಮದುವೆಯಾದ ಗೃಹಿಣಿ ಬಲಿಯಾಗಿದ್ದಾಳೆ. ಮಂಜುಳಾ(೨೦) ಅನುಮಾನಾಸ್ಪದವಾಗಿಸಾವನ್ನಪ್ಪಿದ್ದಾಳೆ.ಪೋಷಕರಿಂದ ಕೊಲೆ ಆರೋಪ ಪ್ರಕರಣ ದಾಖಲಾಗಿದೆ.ಮೈಸೂರು ತಾಲೂಕು ಮೆಲ್ಲಹಳ್ಳಿ ಗ್ರಾಮದಲ್ಲಿ...

Recent Comments