32 C
Mysore
Friday, January 15, 2021
Home Health & Fitness ಯು.ಕೆ.ಯಿಂದ ಮೈಸೂರಿಗೆ ಬಂದಿರುವುದು 137 ಮಂದಿ…ಡಿಸಿ ರೋಹಿಣಿ ಸಿಂಧೂರಿ…

ಯು.ಕೆ.ಯಿಂದ ಮೈಸೂರಿಗೆ ಬಂದಿರುವುದು 137 ಮಂದಿ…ಡಿಸಿ ರೋಹಿಣಿ ಸಿಂಧೂರಿ…

ಯು.ಕೆ.ನಿಂದ ಡಿಸೆಂಬರ್ ನಲ್ಲಿ ಮೈಸೂರಿಗೆ 137 ಮಂದಿ ಬಂದಿದ್ದಾರೆಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಿಳಿಸಿದ್ದಾರೆ. ರೂಪಾಂತರಗೊಂಡ ಕೋವಿಡ್ ವೈರಸ್ ಯು.ಕೆ.ನಲ್ಲಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯಾಗಿ ಮೈಸೂರು ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿರುವುದಾಗಿ ತಿಳಿಸಿದ್ದಾರೆ.ಇಂದು ಸಂಜೆ ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಡಿಸೆಂಬರ್ 1ರಿಂದ 20 ರ ವರೆಗೆ 119 ಜನರು ಹಾಗೂ ಡಿಸೆಂಬರ್ 21 ರಂದು 18 ಜನರು ಸೇರಿದಂತೆ ಒಟ್ಟು 137 ಜನರು ಬ್ರಿಟನ್‌ನಿಂದ ಮೈಸೂರಿಗೆ ಬಂದಿದ್ದಾರೆ ಎಂದು ಹೇಳಿದರು.
ಡಿ. 21ರಂದು ವಾಪಾಸ್ಸಾದ ಎಲ್ಲಾ ಬ್ರಿಟನ್ ಪ್ರಯಾಣಿಕರ ಕೋವಿಡ್-19 ಪರೀಕ್ಷೆ ಆಗಿದೆ. ಡಿ‌20ಕ್ಕೂ ಮೊದಲು ಬಂದ ಕೆಲವರು ಪರೀಕ್ಷೆಗೆ ಆಗಿದೆ ಎಂದು ಮಾಹಿತಿ ನೀಡಿದ್ದಾರೆ. ಡಿಸೆಂಬರ್ 21ರಂದು ಬಂದಿರುವ ಎಲ್ಲಾ 18 ಜನರ ಪರೀಕ್ಷಾ ವರದಿ ನೆಗೆಟಿವ್ ಬಂದಿದೆ ಎಂದರು. ಡಿಸೆಂಬರ್ 20ಕ್ಕೂ ಮೊದಲು ಬಂದಿರುವ ಎಲ್ಲರು ಮುನ್ನೆಚ್ಚರಿಕೆಯಾಗಿ ಕಡ್ಡಾಯವಾಗಿ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಸೂಚನೆ ನೀಡಿದರು.ಬ್ರಿಟನ್‌ನಿಂದ ವಾಪಾಸ್ಸಾದವರ ಕೋವಿಡ್ ಪರೀಕ್ಷೆಗೆ ಡಿಸೆಂಬರ್ 24 ರಂದು ಗುರುವಾರ ಮೈಸೂರಿನ ಟೌನ್‌ಹಾಲ್‌ನಲ್ಲಿ ಪ್ರತ್ಯೇಕವಾದ ಕೌಂಟರ್ ತೆರೆಯಲಾಗಿದೆ. ಬೆಳಗ್ಗೆ‌ 10 ಗಂಟೆಯಿಂದ‌ ಸಂಜೆ 4 ಗಂಟೆ ವರೆಗೆ ಕೌಂಟರ್ ತೆರೆದಿರುತ್ತದೆ. ವಾರ್ ರೂಂ ನಿಂದ ಅವರೆಲ್ಲರಿಗೂ ಮಾಹಿತಿ ನೀಡಲಾಗಿದೆ ಎಂದು ತಿಳಿಸಿದರು.
ರೋಗ ಲಕ್ಷಣ ಇರುವವರು ಹಾಗೂ ಈ 137 ಜನರೊಂದಿಗೆ ಪ್ರಾಥಮಿಕ ಸಂಪರ್ಕ ಇದ್ದವರೂ ಕೂಡ ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿದರು.

ಇಂದಿನ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪರಮೇಶ್, ಮೈಸೂರು ವೈದ್ಯಕೀಯ ಮಹಾವಿದ್ಯಾಲಯದ ಡೀನ್ ಡಾ. ನಂಜರಾಜ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಅಮರನಾಥ್, ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು…

LEAVE A REPLY

Please enter your comment!
Please enter your name here

- Advertisment -

Most Popular

ಗ್ರಾ.ಪಂ.ಚುನಾವಣೆಯಲ್ಲಿ ಪತ್ನಿಗೆ ಸೋಲು…ಪತಿ ಸೂಸೈಡ್…

ಇತ್ತೀಚೆಗೆ ನಡೆದ ಗ್ರಾಮಪಂಚಾಯ್ತಿ ಚುನಾವಣೆಯಲ್ಲಿ ಪತ್ನಿ ಸೋತ ಹಿನ್ನಲೆ ಪತಿರಾಯ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ಕಲಬುರ್ಗಿ ಜಿಲ್ಲೆ ಚಿತ್ತಾಪುರ ತಾಲೂಕು...

ಮಗನ ಕೊಲೆ ಮುಚ್ಚಿ ಹಾಕಲು ತಂದೆಯನ್ನೂ ಕೊಲೆ ಮಾಡಿದ ದುಷ್ಕರ್ಮಿಗಳು ಅಂದರ್…

ಮಗನ ಕೊಲೆ ಪ್ರಕರಣದಿಂದ ತಪ್ಪಿಸಿಕೊಳ್ಳಲು ತಂದೆಯನ್ನೂ ಕೊಲೆ ಮಾಡಿದ ಹಂತಕರು ಇದೀಗ ಪೊಲೀಸರ ಅತಿಥಿಯಾಗಿದ್ದಾರೆ.ಮೈಸೂರಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಂಡಕಳ್ಳಿ ಗ್ರಾಮದಲ್ಲಿ ಘಟನೆ...

ಕಾರ್ಯಕರ್ತನ ಟೀ ಅಂಗಡಿಯಲ್ಲಿ ಲೆಮನ್ ಟೀ ಸವಿದ ಹೆಚ್ಡಿಕೆ…

ತಮ್ಮ ಕಾರ್ಯಕರ್ತನ ಟೀ ಅಂಗಡಿಯಲ್ಲಿ ಸ್ಪೆಷಲ್ ಲೆಮನ್ ಮಡಿಕೆ ಟೀ ಕುಡಿದ ಮಾಜಿ ಸಿಎಂ ಕುಮಾರಸ್ವಾಮಿ ಮತ್ತೊಮ್ಮೆ ಸರಳತೆ ಮೆರೆದಿದ್ದಾರೆ. ಇಂದು ಕಾರ್ಯಕ್ರಮದ ನಿಮಿತ್ತ...

ಏಷಿಯನ್ ಪೈಂಟ್ಸ್ ವಿರುದ್ದ ರೈತರ ಪ್ರತಿಭಟನೆ…ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಸಭೆ…

ಕಳೆದ 42 ದಿನಗಳಿಂದ ಮೈಸೂರಿನ ಏಷಿಯನ್‌ ಪೇಂಟ್ಸ್‌ ಕಾರ್ಖಾನೆ ಬಳಿ ಪ್ರತಿಭಟನೆಯಲ್ಲಿ ತೊಡಗಿರುವ ರೈತರ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಇಂದು ಬೆಂಗಳೂರಿನಲ್ಲಿ ಬೃಹತ್‌ ಮತ್ತು...

Recent Comments