ಕಳೆದ 42 ದಿನಗಳಿಂದ ಮೈಸೂರಿನ ಏಷಿಯನ್ ಪೇಂಟ್ಸ್ ಕಾರ್ಖಾನೆ ಬಳಿ ಪ್ರತಿಭಟನೆಯಲ್ಲಿ ತೊಡಗಿರುವ ರೈತರ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಇಂದು ಬೆಂಗಳೂರಿನಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಶ್ರೀ ಜಗದೀಶ್ಏಷಿಯನ್ ಪೈಂಟ್ಸ್ ವಿರುದ್ದ ರೈತರ ಪ್ರತಿಭಟನೆ…ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಸಭೆ… ಶೆಟ್ಟರ್ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆಯನ್ನು ನಡೆಸಲಾಯಿತು. ಒಂದು ಗಂಟೆಗೂ ಹೆಚ್ಚು ಕಾಲ ನಡೆದ ಸಭೆಯಲ್ಲಿ ಅಲ್ಲಿನ ಸಮಸ್ಯೆಗಳ ಬಗ್ಗೆ ವಿಸ್ತ್ರುತವಾಗಿ ಚರ್ಚೆ ನಡೆಸಲಾಯಿತು. ಮೈಸೂರಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಪೊಲೀಸ್ ಆಧೀಕ್ಷಕರಾದ ಸಿ.ಬಿ ರಿಷ್ಯಂತ್ ಅವರೊಂದಿಗೆ ಚರ್ಚಿಸಿದ ಸಚಿವರು ಮಾಹಿತಿಯನ್ನ ಪಡೆದುಕೊಂಡರು. ಸಭೆಯಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತಾ, ಕೈಗಾರಿಕಾಭಿವೃದ್ದಿ ಆಯುಕ್ತೆ ಶ್ರೀಮತಿ ಗುಂಜನ್ ಕೃಷ್ಣ, ಕೆ.ಐ.ಎ.ಡಿ.ಬಿ ಸಿಇಓ ಡಾ ಶಿವಶಂಕರ್, ಕಾರ್ಮಿಕ ಇಲಾಖೆ ಆಯುಕ್ತ ಶ್ರೀ ಅಕ್ರಮ್ ಪಾಷಾ ಸೇರಿದಂತೆ ಪ್ರಮುಖ ಅಧಿಕಾರಿಗಳು ಭಾಗವಹಿಸಿದ್ದರು. ಈ ಸಂಧರ್ಭದಲ್ಲಿ ಏಷಿಯನ್ ಪೇಂಟ್ಸ್ ಸಂಸ್ಥೆಯ ಪ್ರಮುಖರು ಪಾಲ್ಗೊಂಡಿದ್ದರು…