32 C
Mysore
Thursday, June 4, 2020
Home All News ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ರಕ್ತದೋಕುಳಿ…ಮೂವರು ಮಟಾಷ್…

ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ರಕ್ತದೋಕುಳಿ…ಮೂವರು ಮಟಾಷ್…

ಮನೆಯ ಮುಂಭಾಗದಲ್ಲಿ ಮಾಲೀಕನ ಹೆಣ ಬಿದ್ದರೆ ಹಾಸಿಗೆಯಲ್ಲೇ ಹೆಣವಾಗಿರುವ ತಾಯಿ ಮಗ ಈ ಹೃದಯ ವಿದ್ರಾಯವಕ ಘಟನೆ
ಬೆಳಗಾವಿ ಜಿಲ್ಲೆಯ ಜನರನ್ನ ಬೆಚ್ಚಿ ಬೀಳಿಸಿದೆ. ರಾಯ್ರಿಯೆಲ್ಲಾ ಮದುವೆ ವಿಚಾರ ಮಾತನಾಡಿ ಮಲಗಿದ ಕುಟುಂಬ ಬೆಳಗಾಗುವಷ್ಟರಲ್ಲಿ ರಕ್ತದ ಮಡುವಿನಲ್ಲಿ ಕಾಣಿಸಿಕೊಂಡಿದ್ದಾರೆ. ಶಿವಾನಂದ ಅಂದಾನಶೆಟ್ಟಿ ಮಾಜಿ ತಾಲೂಕು ಪಂಚಾಯಿತಿ ಸದಸ್ಯ ಹಾಗೂ ಆತನ ಮಡದಿ ಶಾಂತವ್ವಾ, ಪುತ್ರ ವಿನೋದ್ ಅಂದಾನಶೆಟ್ಟಿ ಕೊಲೆಯಾದ ದುರ್ದೈವಿಗಳು. ಬೆಳಗಿನಜಾವ ಮೂರು ಗಂಟೆ ಸುಮಾರಿಗೆ ಐದರಿಂದ ಆರು ಜನರ ದುಷ್ಕರ್ಮಿಗಳ ತಂಡ ಮನೆ ಬಾಗಿಲು ತೆಗೆಸಿ ಒಳ ನುಗ್ಗಿದ್ದಾರೆ. ಬಾಗಿಲು ತೆಗೆದ ಮನೆ ಮಾಲೀಕನ ತಲೆಗೆ ರಾಡ್ ನಿಂದ ಹಲ್ಲೆ ಮಾಡಿ ಹತ್ಯೆಗೈದಿದ್ದಾರೆ. ಬಳಿಕ ಒಳ ನುಗ್ಗಿ ಕೋಣೆಯಲ್ಲಿ ಮಲಗಿದ್ದ ಮಗ ವಿನೋದ್ ತಲೆಗೆ ಹೊಡೆದು ಸಾಯಿಸಿದ್ದಾರೆ. ಬಳಿಕ ಪಕ್ಕದ ಕೋಣೆಗೆ ತೆರಳಿ ತಾಯಿ ಶಾಂತವ್ವಾಗೆ ತಲೆಯ ಹಿಂಭಾಗಕ್ಕೆ ಹೊಡೆದು ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿದ್ದಾರೆ. ಬೆಳಗ್ಗೆ ಪಕ್ಕದ ಮನೆಯವರು ಮನೆಯ ಬಾಗಿಲಿನ ಬಳಿ ಬಿದ್ದ ಹೆಣ ನೋಡಿ ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ.

ಕೊಲೆಯಾಗಿರುವ ವಿನೋದ್‌ಗೆ ಪಕ್ಕದ ಗ್ರಾಮದ ಯುವತಿಯ ಜೊತೆಗೆ ಇದೇ ತಿಂಗಳು 30ರಂದು ಮದುವೆ ನಿಶ್ಚಯವಾಗಿತ್ತು. ಮದುವೆ ಕಾರ್ಡ್ ಪ್ರಿಂಟ್ ಮಾಡಿಸಿ ಕಾರ್ಡ್ ಹಂಚಲು ಶುರು ಮಾಡಿದ್ದರು. ಇತ್ತ ಮನೆಗೆ ಸುಣ್ಣ ಬಣ್ಣ ಬಳಿದು ಸಿಂಗಾರಿ ಮಾಡಲಾಗಿತ್ತು. ಮದುವೆಗೆ ಬೇಕಾದ ಆಭರಣ, ಬಟ್ಟೆ ಸೇರಿದಂತೆ ಎಲ್ಲ ವಸ್ತುಗಳ ಖರೀದಿ ಕೂಡ ಆಗಿತ್ತು. ಆದರೆ ನಿನ್ನೆ ಬೆಳಗಿನಜಾವ ಮನೆಗೆ ನುಗ್ಗಿದ ದುಷ್ಕರ್ಮಿಗಳು ಸಂಭ್ರದಲ್ಲಿದ್ದ ಕುಟುಂಬದ ಸದಸ್ಯರನ್ನೆಲ್ಲಾ ಕೊಲೆ ಮಾಡಿ ಸರ್ವನಾಶ ಮಾಡಿದ್ದಾರೆ.‌ಕೊಲೆಗೆ ಆಸ್ತಿ ವಿಚಾರವೇ ಕಾರಣ ಎನ್ನಲಾಗುತ್ತಿದೆ. ಒಂದು ವರ್ಷದ ಹಿಂದೆ ಶಿವಾನಂದ ಸಹೋದರ ಆಸ್ತಿ ವಿಚಾರಕ್ಕೆ ಕೊಲೆ ಯತ್ನ ನಡೆಸಿದ್ದನಂತೆ. ಶಿವಾನಂದ ಮನೆಯ ಪಕ್ಕದಲ್ಲಿ ಖುಲ್ಲಾ ಜಾಗಕ್ಕೆ ಆಗಾಗ ಜಗಳ ಕೂಡ ಆಗುತ್ತಿತ್ತು. ಇದೇ ವಿಚಾರಕ್ಕೆ ಕೊಲೆಯಾಗಿದೆ ಎಂಬ ಶಂಕೆಯನ್ನ ವ್ಯಕ್ತಪಡಿಸುತ್ತಿದ್ದಾರೆ. ಇನ್ನೂ ಕೊಲೆಯಾದ ಶಿವಾನಂದ ಎರಡನೇ ಮದುವೆಯಾಗಿದ್ದ. ಮೊದಲ ಪತ್ನಿ ಇನ್ನೂ ಜೀವಂತವಾಗಿದ್ದು ಅವಳೇ ದೂರು ನೀಡಿದ್ದಾಳೆ. ಸ್ಥಳಕ್ಕೆ ಬಂದ ಹಿರಿಯ ಅಧಿಕಾರಿಗಳು ಪರಿಶೀಲನೆ ನಡೆಸಿ ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.ಕೊಲೆಗಡುಕರ ಪತ್ತೆಗೆ ಪೊಲೀಸರು ಜಾಲ ಬೀಸಿದ್ದಾರೆ…

LEAVE A REPLY

Please enter your comment!
Please enter your name here

- Advertisment -

Most Popular

ಅತೀಕ್ರಮವಾಗಿ ಮನೆಗಳಿಗೆ ಪ್ರವೇಶ ಮಾಡಿದರೆ ಕಾನೂನು ರೀತ್ಯಾ ಕ್ರಮ

ಮೈಸೂರು ಜೂನ್.3. ಮೈಸೂರು ನಗರದ ಜೆ.ಎನ್.ನರ್ಮ್-ಬಿ.ಎಸ್.ಯು.ಪಿ ಹಂತ-1 ಮತ್ತು ಹಂತ 2 ರ ಯೋಜನೆಯಡಿ ಕೆಸರೆ ಸರ್ವೆ ನಂ.484/1 ಮತ್ತು 484/2 ರಲ್ಲಿ ಒಟ್ಟು 252 ಮನೆಗಳನ್ನು ನಿರ್ಮಿಸಿದ್ದು, ಸದರಿ...

ಗಡಸು ಮರದ ಜಾತಿಯ ಗಿಡಗಳನ್ನು ನೆಡಲು ಸಹಕರಿಸಿ

ಮೈಸೂರು, ಜೂನ್.3 ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯ ರಸ್ತೆ ಬದಿಗಳು, ಉದ್ಯಾನವನಗಳು ಹಾಗೂ ಸ್ಮಶಾನಗಳಲ್ಲಿ ಮರದ ಜಾತಿಯ ಸಸ್ಯಗಳನ್ನು ಬೆಳೆಸಲಾಗಿದ್ದು, ಮುಂಗಾರು ಪೂರ್ವದಲ್ಲಿ ಹಾಗೂ ಮುಂಗಾರಿನ ಅವಧಿಯಲ್ಲಿ ಮಳೆ ಹಾಗೂ...

ಮೈಸೂರು ಸಂಸ್ಥಾನದ ಪ್ರಖ್ಯಾತ ದೊರೆ, ಜನಪ್ರಿಯ ಅರಸು ರಾಜರ್ಷಿ ಶ್ರೀಮನ್ಮಹಾರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 136 ನೇ ಹುಟ್ಟು ಹಬ್ಬ

ಮೈಸೂರು ಸಂಸ್ಥಾನದ ಪ್ರಖ್ಯಾತ ದೊರೆ, ಜನಪ್ರಿಯ ಅರಸು ರಾಜರ್ಷಿ ಶ್ರೀಮನ್ಮಹಾರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 136...

ಮಂಡ್ಯ:ಜಿಲ್ಲೆಗೆ ತೀರಾ ಅಗತ್ಯವಿದ್ದ ಕೋವಿಡ್-19 ಟೆಸ್ಟಿಂಗ್ ಲ್ಯಾಬ್ ಆದಿಚುಂಚನಗಿರಿ ಮೆಡಿಕಲ್ ಕಾಲೇಜಿನಲ್ಲಿ ಆರಂಭವಾಗಿದೆ.

ಮಂಡ್ಯ:ಜಿಲ್ಲೆಗೆ ತೀರಾ ಅಗತ್ಯವಿದ್ದ ಕೋವಿಡ್-19 ಟೆಸ್ಟಿಂಗ್ ಲ್ಯಾಬ್ ಆದಿಚುಂಚನಗಿರಿ ಮೆಡಿಕಲ್ ಕಾಲೇಜಿನಲ್ಲಿ ಆರಂಭವಾಗಿದೆ. ಕೇವಲ 15 ದಿನಗಳಲ್ಲಿ ಲ್ಯಾಬ್ ಆರಂಭಿಸಲು ಶ್ರೀಗಳೇ ಕಾರಣ. ಇನ್ನು ಮುಂದೆ ಜಿಲ್ಲೆಯ ಜನ ಭಯಪಡಬೇಕಿಲ್ಲ...

Recent Comments