32 C
Mysore
Wednesday, September 22, 2021
Home All News ಪೋಷಕರ ಮುಂದೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಮಗ…ಯಾಕೆ ಗೊತ್ತಾ…

ಪೋಷಕರ ಮುಂದೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಮಗ…ಯಾಕೆ ಗೊತ್ತಾ…

ಯುವಕನೊಬ್ಬ ಪೋಷಕರ ಮುಂದೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ರತ್ನಪುರಿಯಲ್ಲಿ ನಡೆದಿದೆ. ಸ್ನೇಹಿತರು ಪೋಷಕರ ಮುಂದೆ ನಡೆಸಿದ ಹಲ್ಲೆ ಹಾಗೂ ಕೊಲೆ ಬೆದರಿಕೆಗೆ ಹೆದರಿದ ಯುವಕ ಬೆಂಕಿ ಹಚ್ಚಿಕೊಂಡನೆಂದು ಆರೋಪಿಸಲಾಗಿದೆ.ಟ್ರಕ್ ಡ್ರೈವರ್ ಶಗಿರುವ ಲಕ್ಷ್ಮಣ್ ರಾವ್(೨೭) ಮೃತ ದುರ್ದೈವಿ.ಘಟನೆಯಿಂದ ತೀವ್ರ ಸುಟ್ಟಗಾಯಗಳಿಂದ ನರಳುತ್ತಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.
ಅಕ್ಟೋಬರ್ ೧೫ ರಂದು ಬಾರ್ ಒಂದರಲ್ಲಿ ಸ್ನೇಹಿತರ ಜೊತೆ ಕುಡಿಯುವಾಗ ನಡೆದ ಗಲಾಟೆ ಸಾವಿನಲ್ಲಿ ಅಂತ್ಯ ಕಂಡಿದೆ. ಬಾರ್ ನಲ್ಲಿ ಗಲಾಟೆ ನಡೆದ ನಂತರ ಮೂವರು ಯುವಕರ ಗುಂಪು ಮತ್ತೆ ಮನೆಗೆ ಬಂದು ಹೆತ್ತ ಪೋಷಕರ ಮುಂದೆ ಮಾರಣಾಂತಿಕ ಹಲ್ಲೆ ನಡೆಸಿದೆ.ಅಲ್ಲದೆ
ಕೊಲೆ ಬೆದರಿಕೆ ಹಾಕಿದೆ.
ಇದ್ರಿಂದ ಬೇಸತ್ತ ಲಕ್ಷ್ಮಣ್ ರಾವ್ ಪೋಷಕರನ್ನ ಮನೆಯಲ್ಲಿ ಕೂಡಿಹಾಕಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ.ಈ ವೇಳೆ ಮನೆಯಿಂದ ಹೊರಬರಲಾರದೆ
ಅಸಹಾಯಕಾರಾಗಿ ನೋಡುವ ಪರಿಸ್ಥಿತಿ ಪೋಷಕರಿಗೆ ಬಂದಿದೆ.
ಮಗನ ಸಾವಿಗೆ ಶರಣ್,ನಲ್ಲತಂಬಿ ಹಾಗೂ ರಾಜೇಶ್ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ.ಮೂವರಿಗೂ ಶಿಕ್ಷೆ ಆಗಬೇಕೆಂದು ಪೋಷಕರ ಒತ್ತಾಯಿಸಿದ್ದಾರೆ.
ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

LEAVE A REPLY

Please enter your comment!
Please enter your name here

- Advertisment -

Most Popular

ಮೊರಾರ್ಜಿ ಶಾಲೆಯ ಮೂವರು ವಿದ್ಯಾರ್ಥಿಗಳಿಗೆ ಕೋವಿಡ್..! ಚಾಮರಾಜನಗರ ಜಿಲ್ಲೆ‌ ಯಳಂದೂರಿನ ಆದರ್ಶ ಶಾಲೆಯ ಬಳಿಕ ಹನೂರಿನ ಮೊರಾರ್ಜಿ ವಸತಿ ಶಾಲೆಯ...

ಇಂದು ಅರಮನೆಗೆ ಎಂಟ್ರಿ ನೀಡಲಿರುವ ಗಜಪಡೆ…

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಹಿನ್ನಲೆಅಂಬಾವಿಲಾಸ ಅರಮನೆಯಂಗಳಕ್ಕೆ ಇಂದು ಗಜಪಡೆ ಪ್ರವೇಶ ಪಡೆಯಲಿದೆ.ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಎಂಟು ಆನೆಗಳು ಅರಮನೆಗೆ ಪ್ರವೇಶಿಸಲಿವೆ.ಮೈಸೂರಿನ ಅಶೋಕಪುರಂನ...

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ…ಗಜಪಯಣ ಆರಂಭ…

ವಿಶ್ವವಿಖ್ಯಾತ ಜಂಬೂಸವಾರಿಯ ಗಜ ಪಯಣ ಆರಂಭವಾಗಿದೆ.ನಾಗರಹೊಳೆ ವೀರನಹೊಸಹಳ್ಳಿಯಲ್ಲಿ ಗಜಪಯಣಕ್ಕೆ ಚಾಲನೆ ನೀಡಲಾಗಿದೆ.ಅಭಿಮನ್ಯು ನೇತೃತ್ವದ 8 ಆನೆಗಳ ತಂಡ ಮೈಸೂರಿನತ್ತ ಪ್ರಯಾಣ ಬೆಳಸಲಿದೆ.ಗಜಪಡೆಗೆ ಸಾಂಪ್ರದಾಯಿಕ ಪೂಜೆ...

ನೆಲಸಮಗೊಂಡ ಶಕ್ತಿ ಮಹಾದೇವಿ ದೇವಾಲಯಕ್ಕೆ ಪ್ರತಾಪ್ ಸಿಂಹ ಭೇಟಿ…ಗ್ರಾಮಸ್ಥರಿಗೆ ಸಂಸದರ ಅಭಯ…

ಇತ್ತೀಚೆಗೆ ನೆಲಸಮಗೊಂಡ ನಂಜನಗೂಡಿನ ಹುಚ್ಚಗಣಿ ಗ್ರಾಮದ ಶಕ್ತಿ ಮಹಾದೇವಿ ದೇವಾಲಯಕ್ಕೆ ಸಂಸದ ಪ್ರತಾಪ್ ಸಿಂಹ ಭೇಟಿ ನೀಡಿ ಪರಿಶೀಲನೆ ನಡೆಸಿದರು.ದೇವಾಲಯ ನೆಲಸಮಗೊಳಿಸಿರುವ ಸ್ಥಳಕ್ಕೆ ಭೇಟಿ...

Recent Comments