32 C
Mysore
Monday, June 21, 2021
Home Mysore 7 ತಿಂಗಳ ಅವಧಿಯಲ್ಲಿ ಒಂದು ಗುಂಟೆ ಜಮೀನು ಒತ್ತುವರಿ ತೆರುವು ಮಾಡಿದ್ದೀರಾ…ರೋಹಿಣಿ ಸಿಂಧೂರಿಗೆ ಸಾ.ರಾ.ಮಹೇಶ್ ಟಾಂಗ್…

7 ತಿಂಗಳ ಅವಧಿಯಲ್ಲಿ ಒಂದು ಗುಂಟೆ ಜಮೀನು ಒತ್ತುವರಿ ತೆರುವು ಮಾಡಿದ್ದೀರಾ…ರೋಹಿಣಿ ಸಿಂಧೂರಿಗೆ ಸಾ.ರಾ.ಮಹೇಶ್ ಟಾಂಗ್…

 

ಮೈಸೂರು ಜಿಲ್ಲಾಧಿಕಾರಿಯಾಗಿ 7 ತಿಂಗಳ ಅವಧಿಯಲ್ಲಿ ಒಂದೇ ಒಂದು ಗುಂಟೆ ಜಮೀನು ಒತ್ತುವರಿ ತೆರುವು ಮಾಡಿದ್ದೀರಾ…? ಎಂದು ನಿರ್ಗಮಿತ ಡಿಸಿ ರೋಹಿಣಿ ಸಿಂಧೂರಿ ವಿರುದ್ದ ವಾಗ್ಧಾಳಿ ನಡೆಸಿದ್ದಾರೆ‌.ಮೈಸೂರಿನ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಸಾ.ರಾ.ಮಹೇಶ್ ಆರಂಭದಿಂದಲೇ ರೋಹಿಣಿ ಸಿಂಧೂರಿ ವಿರುದ್ದ ಕಿಡಿ ಕಾರಿದರು.
ನಾನು ಆಂಧ್ರದ ಒಬ್ಬ ಐಎಎಸ್ ಅಧಿಕಾರಿ ವಿರುದ್ಧ ಮಾತನಾಡಬಾರದೆಂದು ತೀರ್ಮಾನ ಮಾಡಿದ್ದೆ.ಆದರೆ ಅವರು ನಿನ್ನೆ ಒಂದು ಪತ್ರಿಕೆಗೆ ಹೇಳಿಕೆ ನೀಡಿದ್ದಾರೆ.
ಕೆ.ಆರ್.ನಗರ ಶಾಸಕರು ಮೈಸೂರಿನ ಕೋವಿಡ್ ಆಸ್ಪತ್ರೆಗಳ ಬಗ್ಗೆ ಏಕೆ ಮಾತನಾಡಬೇಕು ಎಂದಿದ್ದಾರೆ.
ಇವರು ನಿಜವಾಗಿಯೂ ಐಎಎಸ್ ಮಾಡಿದ್ದಾರಾ..? ಎಂದು ಪ್ರಶ್ನಿಸಿದರು.
ನೀವು ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಆಗಿದ್ದೀರಿ.
ಕಳೆದ 7 ತಿಂಗಳ ಅವಧಿಯಲ್ಲಿ ಒಂದೇ ಒಂದು ಗುಂಟೆ ಒತ್ತುವರಿ ತೆರವು ಮಾಡಿದ್ದರೆ ತೋರಿಸಿ ಎಂದು ಸವಾಲು ಹಾಕಿದರು.
ಈಗಲೂ ನೀವು ಐಎಎಸ್ ಅಧಿಕಾರಿಯೇ ಆಗಿದ್ದೀರಿ, ಕರ್ನಾಟಕದಲ್ಲೇ ಇದ್ದೀರಿ.ಸರ್ಕಾರಿ ಭೂಮಿ ಉಳಿಸಿದ್ದರೆ ಮುಖ್ಯಮಂತ್ರಿಗೆ ವರದಿ ಸಲ್ಲಿಸಿ. ಅಥವಾ ನೀವೇ ಸೃಷ್ಟಿ ಮಾಡಿಸಿಕೊಂಡಿರುವ ಫೇಸ್‌ಬುಕ್ ಅಕೌಂಟ್‌ನಲ್ಲಿ ದಾಖಲೆ ಬಹಿರಂಗಪಡಿಸಿ.‌
ನಾನು 10 ಆರೋಪಗಳನ್ನು ಸಾಕ್ಷಿ ಸಮೇತ ಮಾಡಿದ್ದೇನೆ.
ಆಂಧ್ರದ ಲಾಭಿ ಮಾಡಿ ಕರ್ನಾಟಕದ ಅಧಿಕಾರಿ(ಬಿ.ಶರತ್) ಎತ್ತಂಗಡಿ ಮಾಡಿದ್ದೀರೋ ಅಂದಿನ ದಿನದಿಂದಲೂ ನಿಮ್ಮ ವಿರುದ್ಧ ಆರೋಪ ಮಾಡುತ್ತ ಬಂದಿದ್ದೇನೆ.
ಅಂದಿನಿಂದಲೇ ನೀವು ಸರ್ಕಾರಿ ಭೂಮಿ ಉಳಿಸುವ ಪ್ರಯತ್ನ ಮಾಡಬಹುದಿತ್ತು ಅಲ್ವ.? ಎಂದು ಟಾರ್ಗೆಟ್ ಮಾಡಿದರು.
ಮೈಸೂರು ಜಿಲ್ಲೆಯಲ್ಲಿ 5000 ಜನ ಕೊರೊನಾ ಸೊಂಕಿತರು ಸತ್ತಿದ್ದಾರೆ.
ಅಧಿಕೃತ ದಾಖಲಾತಿ ಪ್ರಕಾರ 3000 ಜನರು ಸತ್ತಿದ್ದಾರೆ ಎಂದು ವಾಗ್ಧಾಳಿ ನಡೆಸಿದರು. ಮೈಸೂರಿನಲ್ಲಿ ಜನರಿಗೆ ಕುಡಿಯಲು ನೀರಿಲ್ಲ.
ಇವರಿಗೆ ಸ್ವಿಮ್ಮಿಂಗ್ ಮಾಡೊಕೆ ಕುಡಿಯೋ ನೀರು ಇದೆ.
ಇವರಿಗಿಂತ ಮುಂಚೆ ಇದ್ದ ಜಿಲ್ಲಾಧಿಕಾರಿಗಳ ಮನೆಯ ಕೆಇಬಿ ಬಿಲ್ ನೋಡಿ.ಕೇವಲ 4 ಅಥವಾ 5ಸಾವಿರ ಕರೆಂಟ್ ಬಿಲ್ ಬಂದಿದೆ.
ರೋಹಿಣಿ ಸಿಂಧೂರಿ ಉಪಯೋಗಿಸಿರುವ ಕೆಇಬಿ ಬಿಲ್ ಕೂಡಾ ನೋಡಿ.ಒಂದೊಂದು ತಿಂಗಳಲ್ಲಿ 50ಸಾವಿರ ಕರೆಂಟ್ ಬಿಲ್ ಬಂದಿದೆ.ಯಾವ ಮಂತ್ರಿ ಮನೆಯಲ್ಲೂ ಇಷ್ಟು ದೊಡ್ಡ ಮೊತ್ತದ ಕರೆಂಟ್ ಬಿಲ್ ಬಂದಿಲ್ಲ.ಒಬ್ಬ ಸೆಕೆಂಡ್ ಕ್ಲಾಸ್ ಅಧಿಕಾರಿ ವೇತನ ನಿಮ್ಮ ಕರೆಂಟ್ ಬಿಲ್ ಗೆ ಸಮ.
ಇಂತವರಿಂದ ಕರ್ನಾಟಕ ಉಳಿಯಬೇಕು ಎಂದು ವ್ಯಂಗ್ಯವಾಡಿದರು.

ಇದೇ ವೇಳೆ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಬರೆದ ಪತ್ರದ ಬಗ್ಗೆ ಮಾಹಿತಿ ನೀಡಿದರು.
10 ಅಂಶಗಳನ್ನು ಉಲ್ಲೇಖಿಸಿ ಪತ್ರದ ಬಗ್ಗೆ ತಿಳಿಸಿದರು.
ನಾನು ರೋಹಿಣಿ ಸಿಂಧೂರಿ ವಿರುದ್ಧ ಮಾಡಿದ ಆರೋಪಗಳನ್ನು ಒಳಗೊಂಡ ಪತ್ರ ಬರೆದಿದ್ದೇನೆ.
ನಮ್ಮ ರಾಜ್ಯದ ದೇವಾಲಯಗಳು ಕುಸಿದು ಬೀಳುತ್ತಿದ್ದರೂ 200 ಕೋಟಿ ರೂ.ಗಳನ್ನು ಆಂಧ್ರಕ್ಕೆ ನೀಡಿದ್ದರು.
4G ವಿನಾಯಿತಿ ಅಡಿಯಲ್ಲಿ ಹಣ ಬಿಡುಗಡೆಯಾಗಿದೆ.
16 ಲಕ್ಷ ಹಣ ಬಳಸಿ ಪಾರಂಪರಿಕ ಕಟ್ಟಡದ ನವೀಕರಣ ಮಾಡಿದ್ದಾರೆ.
ಅದಾದ ನಂತರ ಈಜುಕೊಳ, ಜಿಮ್ ನಿರ್ಮಿಸಿದ್ದಾರೆ.
ಈಜುಕೊಳಕ್ಕೆ ಕುಡಿಯುವ ನೀರು ಬಳಸಿಕೊಂಡಿದ್ದಾರೆ.
ಜಿಲ್ಲಾಧಿಕಾರಿ ಮನೆಯಲ್ಲಿ ಮೂರು ಕೆಇಬಿ ಮೀಟರ್ ಇವೆ.
ಬೇರೆಯವರಿಗೆ 3- 4 ಸಾವಿರ ರೂ. ಬಿಲ್ ಬರುತ್ತೆ, ಹೆಚ್ಚೆಂದರೆ 7 ಸಾವಿರ ಬರಬಹುದು.
ದಿ ಗ್ರೇಟ್ ಸಿಂಗಂ, ದಕ್ಷ ಅಧಿಕಾರಿ.ಅದೇನ್ ಸಿಂಗಂವೋ ಸಿಂಗಳೀಕನೋ ಎಂದು ವ್ಯಂಗ್ಯವಾಡಿದರು..

LEAVE A REPLY

Please enter your comment!
Please enter your name here

- Advertisment -

Most Popular

ಕತ್ತು ಕುಯ್ದುಕೊಂಡು ಮಾನಸಿಕ ಅಸ್ವಸ್ಥ ಆತ್ಮಹತ್ಯೆ…

ಮಾನಸಿಕ ಅಸ್ವಸ್ಥನೊಬ್ಬ ಕತ್ತುಕೊಯ್ದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರು ಜಿಲ್ಲೆ ತಿ. ನರಸೀಪುರ ತಾಲ್ಲೂಕಿನ ಕನ್ನಳ್ಳಿ ಮೋಳೆ ಗ್ರಾಮದಲ್ಲಿ ನಡೆದಿದೆ.ಶಿವಣ್ಣ (42) ಮೃತ ದುರ್ದೈವಿ.ಗ್ರಾಮದಲ್ಲಿದ್ದ...

ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಬಲಿ…

ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕು ಯಾಕನೂರು ಗ್ರಾಮದಲ್ಲಿ ನಡೆದಿದೆ.ಕಾವ್ಯ(೨೧)ಮೃತ ದುರ್ದೈವಿಯಾಗಿದ್ದಾರೆ.ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.ಒಂದೂವರೆ ವರ್ಷದ...

ಶಿಕ್ಷಕರಿಗೆ ಲಸಿಕಾ ಅಭಿಯಾನ…ಸಾಮಾಜಿಕ ಅಂತರ ಮಾಯ…

ಹುಣಸೂರಿನ ಶಿಕ್ಷಕರ ಭವನದಲ್ಲಿ ಶಿಕ್ಷಕರಿಗಾಗಿ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.ನೂರಾರು ಶಿಕ್ಷಕರು ಲಸಿಕೆ ಪಡೆಯಲು ಸೇರಿದ್ದರು.ಆದರೆ ಸ್ಥಳದಲ್ಲಿ ಸಾಮಾಜಿಕ ಅಂತರ ಮಾಯವಾಗಿತ್ತು.ವಿದ್ಯಾವಂತ ಶಿಕ್ಷಕರೇ ಹೀಗೆ ವರ್ತಿಸಿದರೆ...

ನಂಜನಗೂಡು ತಾಲೂಕಿನ ಅರಿಯೂರು ಗ್ರಾಮ ಸೀಲ್ ಡೌನ್…ಮೂರ್ನಾಲ್ಕು ದಿನದಲ್ಲಿ 35 ಪಾಸಿಟಿವ್ ಕೇಸ್…

ಮೂರ್ನಾಲ್ಕು ದಿನದಲ್ಲಿ 35 ಪಾಸಿಟಿವ್ ಪ್ರಕರಣಗಳು ಪತ್ತೆಯಾದ ಹಿನ್ನಲೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಅರಿಯೂರು ಗ್ರಾಮ ಸೀಲ್ ಡೌನ್ ಮಾಡಲಾಗಿದೆ.ತಾಲೂಕು ಆಡಳಿತದಿಂದ ನಿರ್ಧಾರ...

Recent Comments