32 C
Mysore
Wednesday, September 22, 2021
Home All News ಸುಧರ್ಮಾ ಸಂಸ್ಕೃತ ಪತ್ರಿಕೆ ಸಂಪಾದಕ ಕೆ.ವಿ. ಸಂಪತ್ ಕುಮಾರ್ ವಿಧಿವಶ…

ಸುಧರ್ಮಾ ಸಂಸ್ಕೃತ ಪತ್ರಿಕೆ ಸಂಪಾದಕ ಕೆ.ವಿ. ಸಂಪತ್ ಕುಮಾರ್ ವಿಧಿವಶ…

ವಿಶ್ವದ ಏಕೈಕ ಸಂಸ್ಕೃತ ದೈನಿಕ ಪತ್ರಿಕೆಯ ಸಂಪಾದಕರಾದ ಕೆ.ವಿ.ಸಂಪತ್ ಕುಮಾರ್ (64)
ಅಯ್ಯಂಗಾರ್ ವಿಧಿವಶರಾಗಿದ್ದಾರೆ.
2019ರ ಪದ್ಮಶ್ರೀ ಪುರಸ್ಕೃತರಾಗಿದ್ದ ಸಂಪತ್ ಕುಮಾರ್
ಕಳೆದ ನಾಲ್ಕು ದಶಕಗಳಿಂದ ಸುಧರ್ಮಾ ಪತ್ರಿಕೆಯನ್ನ ಮುನ್ನಡೆಸಿದ್ದರು.
ಸಂಸ್ಕೃತ ಭಾಷೆ ಉಳಿವಿಗೆ ಶ್ರಮಿಸಿದ್ದರು.
ಇವರ ಸಂಸ್ಕೃತ ಸೇವೆ ಗುರುತಿಸಿ ಕೇಂದ್ರ ಸರ್ಕಾರ ಪದ್ಮಶ್ರೀ ನೀಡಿ ಗೌರವಿಸಿತ್ತು.
ಮಧ್ಯಾಹ್ನ ಸಂಸ್ಕೃತ ಪತ್ರಿಕೆಯ ಕೆಲಸದಲ್ಲಿರುವಾಗಲೇ ಸಂಪತ್ ಕುಮಾರ್ ವಿಧಿವಶರಾದರು.ತೀವ್ರ ಹೃದಯಾಘಾತದಿಂದ ಸಂಪತ್ ಕುಮಾರ್ ನಿಧನರಾಗಿದ್ದಾರೆ.

ಸಂಪತ್ ಕುಮಾರ್ ನಿಧನಕ್ಕೆ ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ತೀವ್ರ ಸಂತಾಪ ಸೂಚಿಸಿದೆ.

ಕಡಿಮೆ ಓದುಗರ ಬಳಗ, ಆರ್ಥಿಕವಾಗಿ ಸಾಕಷ್ಟು ತೊಂದರೆಗಳಿದ್ದರೂ ಯಾವುದನ್ನು ಲೆಕ್ಕಿಸದೆ ಪ್ರಪಂಚದ ಅತ್ಯಂತ ಪ್ರಾಚೀನ ಭಾಷೆಗಳಲ್ಲಿ ಒಂದಾದ ಸಂಸ್ಕೃತವನ್ನು ಸುಧರ್ಮ ಪತ್ರಿಕೆಯ ಮೂಲಕ ಜನರಿಗೆ ಪರಿಚಯಿಸುವ ಮಹತ್ತರ ಕಾರ್ಯವನ್ನು ಮುಂದುವರಿಸಿಕೊಂಡು ಬಂದಿದ್ದ ಸಂಪತ್ ಕುಮಾರ್ ಅವರ ಸೇವೆ ಅನನ್ಯ ಎಂದು ಸಂಘದ ಅಧ್ಯಕ್ಷ ಎಸ್.ಟಿ.ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಎಂ.ಸುಬ್ರಹ್ಮಣ್ಯ ಬಣ್ಣಿಸಿದ್ದಾರೆ.

ಸುಧರ್ಮ ಬಗ್ಗೆ ಒಂದಷ್ಟು ಮಾಹಿತಿ

ಮೈಸೂರಿನ ಪಂಡಿತ್ ವರದರಾಜ ಅಯ್ಯಂಗಾರ್ ಈ ಪತ್ರಿಕೆಯನ್ನು ಪ್ರಾರಂಭಿಸಿದ್ದರು. ಸಂಸ್ಕೃತ ವಿದ್ವಾಂಸರೂ ಆಗಿದ್ದ ಇವರು 1945ರಲ್ಲಿ ಸುಧರ್ಮ ಮುದ್ರಣಾಲಯ ಪ್ರಾರಂಭಿಸಿ ಪುಸ್ತಕಗಳು, ಸರ್ಕಾರಿ ಗೆಜೆಟ್ ಗಳು, ಸಂಸ್ಕೃತ ಮತ್ತು ಕನ್ನಡದ ಪ್ರಶ್ನೆ ಪತ್ರಿಕೆಗಳನ್ನು ಮುದ್ರಿಸುತ್ತಿದ್ದರು. 1963 ರಲ್ಲಿ ಅವರು ಮೈಸೂರು ನಗರದಲ್ಲಿ ಬಾಲಕಿಯರ ಶಾಲೆ ಪ್ರಾರಂಭಿಸಿ ಅಲ್ಲಿ ಸಂಸ್ಕೃತ ಕಾರ್ಯಾಗಾರಗಳನ್ನು ಆಯೋಜಿಸುತ್ತಿದ್ದರು.
1970ರಲ್ಲಿ, ಸಂಸ್ಕೃತ ಭಾಷೆಯನ್ನು ಜನಪ್ರಿಯಗೊಳಿಸಲು ಮತ್ತು ಅದನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ಸುಧರ್ಮ ಪತ್ರಿಕೆ ಪ್ರಾರಂಭಿಸಿದರು.
ವರದರಾಜ ಅಯ್ಯಂಗಾರ್ ನಿಧನದ ನಂತರ ಸಂಪಾದಕ ಹುದ್ದೆ ವಹಿಸಿಕೊಂಡ ಕೆ.ವಿ.ಸಂಪತ್ ಕುಮಾರ್ ಹಾಗೂ ಅವರ ಪತ್ನಿ ಜಯಲಕ್ಷ್ಮೀ ಅವರು ಪತ್ರಿಕೆಯನ್ನು ಈವರೆಗೆ ಬಹಳ ಅಚ್ಚುಕಟ್ಟಾಗಿ ನಡೆಸಿಕೊಂಡು ಬಂದಿದ್ದರು.

ಇಂದಿನ ಆಧುನಿಕತೆಯನ್ನು ಬಳಸಿಕೊಂಡು ಪತ್ರಿಕೆಯ ಆನ್ ಲೈನ್ ಆವೃತ್ತಿಯನ್ನು ಸಹ ತಂದಿದ್ದಾರೆ. ಸಂಪತ್ ಕುಮಾರ್ ತಮ್ಮ ತಂದೆಯ ಇಚ್ಚೆಯಂತೆ ಸಂಸ್ಕೃತ ಭಾಷೆಯನ್ನು ಪಸರಿಸುವ ಕೆಲಸವನ್ನು ಅತ್ಯಂತ ಶ್ರದ್ಧೆಯಿಂದ ನಿರ್ವಹಿಸಿಕೊಂಡು ಬಂದಿದ್ದರು.

ಇವರು ಸಂಸ್ಕೃತದ ಹಲವು ಮೊಟ್ಟ ಮೊದಲುಗಳನ್ನು ನಿರ್ಮಿಸಿದ್ದಾರೆ. ಮೊದಲ ಸಂಸ್ಕೃತ ದಿನದರ್ಶಿ ತರುವ ಜೊತೆಗೆ ಸುಧರ್ಮ ಎ3 ಗಾತ್ರದ ಎರಡು-ಪುಟ, ಐದು-ಕಾಲಂ ಪತ್ರಿಕೆಯಾಗಿಸಿದ್ದರು. 2009 ರಲ್ಲಿ ಸುಧರ್ಮ ಇ-ಪೇಪರ್ ಆವೃತ್ತಿ ಪ್ರಾರಂಭಿಸಿ ಜಗತ್ತಿನಾದ್ಯಂತ ಹಲವಾರು ಜನರು ಸಂಸ್ಕೃತ ಪತ್ರಿಕೆಯನ್ನು ಓದುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದರು.

ನಾವು ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಚಂದಾದಾರರನ್ನು ಹೊಂದಿದ್ದು ಅಂಚೆ ಮೂಲಕ ಪತ್ರಿಕೆ ಕಳುಹಿಸುವ ವ್ಯವಸ್ಥೆ ಮಾಡಿದ್ದೇವೆ ಎಂದು ಸಂಪತ್ ಕುಮಾರ್ ಹಿಂದೊಮ್ಮೆ ಕಾರ್ಯಕ್ರಮದಲ್ಲಿ ಹೇಳಿದ್ದರು.

ಪದ್ಮಶ್ರೀ ಪ್ರಶಸ್ತಿ ಗೌರವ

ಸಂಸ್ಕೃತ ಭಾಷೆಯಲ್ಲಿ 50 ವರ್ಷಗಳಿಂದ ಮೈಸೂರಿನಿಂದ ಪ್ರಕಟವಾಗುತ್ತಿರುವ ‘ಸುಧರ್ಮ’ ದಿನಪತ್ರಿಕೆಯ ಸೇವೆಯನ್ನು ಪರಿಗಣಿಸಿ 2 ವರ್ಷಗಳ ಹಿಂದೆ ಕೇಂದ್ರ ಸರ್ಕಾರ ಕೆ.ವಿ.ಸಂಪತ್ ಕುಮಾರ್- ಕೆ.ಎಸ್.ಜಯಲಕ್ಷ್ಮೀ ದಂಪತಿಗೆ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿ ಪ್ರಕಟಿಸಿದೆ. ಆದರೆ ಪ್ರಶಸ್ತಿ ಸ್ವೀಕರಿಸುವ ಮುನ್ನವೇ ಸಂಪತ್ ಕುಮಾರ್ ವಿಧಿವಶರಾದದ್ದು ಬೇಸರದ ವಿಷಯವಾಗಿದೆ…

LEAVE A REPLY

Please enter your comment!
Please enter your name here

- Advertisment -

Most Popular

ಮೊರಾರ್ಜಿ ಶಾಲೆಯ ಮೂವರು ವಿದ್ಯಾರ್ಥಿಗಳಿಗೆ ಕೋವಿಡ್..! ಚಾಮರಾಜನಗರ ಜಿಲ್ಲೆ‌ ಯಳಂದೂರಿನ ಆದರ್ಶ ಶಾಲೆಯ ಬಳಿಕ ಹನೂರಿನ ಮೊರಾರ್ಜಿ ವಸತಿ ಶಾಲೆಯ...

ಇಂದು ಅರಮನೆಗೆ ಎಂಟ್ರಿ ನೀಡಲಿರುವ ಗಜಪಡೆ…

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಹಿನ್ನಲೆಅಂಬಾವಿಲಾಸ ಅರಮನೆಯಂಗಳಕ್ಕೆ ಇಂದು ಗಜಪಡೆ ಪ್ರವೇಶ ಪಡೆಯಲಿದೆ.ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಎಂಟು ಆನೆಗಳು ಅರಮನೆಗೆ ಪ್ರವೇಶಿಸಲಿವೆ.ಮೈಸೂರಿನ ಅಶೋಕಪುರಂನ...

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ…ಗಜಪಯಣ ಆರಂಭ…

ವಿಶ್ವವಿಖ್ಯಾತ ಜಂಬೂಸವಾರಿಯ ಗಜ ಪಯಣ ಆರಂಭವಾಗಿದೆ.ನಾಗರಹೊಳೆ ವೀರನಹೊಸಹಳ್ಳಿಯಲ್ಲಿ ಗಜಪಯಣಕ್ಕೆ ಚಾಲನೆ ನೀಡಲಾಗಿದೆ.ಅಭಿಮನ್ಯು ನೇತೃತ್ವದ 8 ಆನೆಗಳ ತಂಡ ಮೈಸೂರಿನತ್ತ ಪ್ರಯಾಣ ಬೆಳಸಲಿದೆ.ಗಜಪಡೆಗೆ ಸಾಂಪ್ರದಾಯಿಕ ಪೂಜೆ...

ನೆಲಸಮಗೊಂಡ ಶಕ್ತಿ ಮಹಾದೇವಿ ದೇವಾಲಯಕ್ಕೆ ಪ್ರತಾಪ್ ಸಿಂಹ ಭೇಟಿ…ಗ್ರಾಮಸ್ಥರಿಗೆ ಸಂಸದರ ಅಭಯ…

ಇತ್ತೀಚೆಗೆ ನೆಲಸಮಗೊಂಡ ನಂಜನಗೂಡಿನ ಹುಚ್ಚಗಣಿ ಗ್ರಾಮದ ಶಕ್ತಿ ಮಹಾದೇವಿ ದೇವಾಲಯಕ್ಕೆ ಸಂಸದ ಪ್ರತಾಪ್ ಸಿಂಹ ಭೇಟಿ ನೀಡಿ ಪರಿಶೀಲನೆ ನಡೆಸಿದರು.ದೇವಾಲಯ ನೆಲಸಮಗೊಳಿಸಿರುವ ಸ್ಥಳಕ್ಕೆ ಭೇಟಿ...

Recent Comments