32 C
Mysore
Wednesday, September 22, 2021
Home All News ಸಿ.ಸಿ.ಬಿ.ಪೊಲೀಸರ ಕಾರ್ಯಾಚರಣೆ…4 ಕುಖ್ಯಾತ ಸರಗಳ್ಳರ ಬಂಧನ…

ಸಿ.ಸಿ.ಬಿ.ಪೊಲೀಸರ ಕಾರ್ಯಾಚರಣೆ…4 ಕುಖ್ಯಾತ ಸರಗಳ್ಳರ ಬಂಧನ…

ಸಿಸಿಬಿ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ನಾಲ್ವರು ಕುಖ್ಯಾತ ಸರಗಳ್ಳರ ಬಂಧನವಾಗಿದೆ.ಆರೋಪಿಗಳಿಂದ 5,80,000 ರೂ ಮೌಲ್ಯದ ಚಿನ್ನಾಭರಣ ಹಾಗೂ 2 ದ್ವಿಚಕ್ರವಾಹನಗಳ ವಶಪಡಿಸಿಕೊಳ್ಳಲಾಗಿದೆ.ಶಾಂತಿನಗರದ ಅಯಾಜ್ ಖಾನ್, ತೌಸಿಫ್ ಪಾಷ, ರಾಜೀವ್‌ನಗರದ ತೌಸಿಫ್ ಬೇಗ್, ಶೋಹೆಬ್ ಪಾಷ ಬಂಧಿತರು‌.ಮೈಸೂರು ನಗರದಲ್ಲಿ ಸರಗಳ್ಳತನ ಪ್ರಕರಣಗಳು ಹೆಚ್ಚಾಗುತ್ತಿದ್ದ ಹಿನ್ನಲೆ
ಮೈಸೂರು ನಗರದ ಪೊಲೀಸ್ ಆಯುಕ್ತರು, ಸಿ.ಸಿ.ಬಿ.ಘಟಕದ
ಅಧಿಕಾರಿ, ಸಿಬ್ಬಂದಿಗಳಿರುವ ವಿಶೇಷ ತಂಡ ರಚಿಸಲಾಗಿತ್ತು.
ರಾಜೀವನಗರದ ಶಿವಣ್ಣ ವೃತ್ತದ ಬಳಿ ಅನುಮಾನಾಸ್ಪದವಾಗಿ ದ್ವಿಚಕ್ರ ವಾಹನದಲ್ಲಿ ಓಡಾಡುತ್ತಿದ್ದಾಗ ವಶಕ್ಕೆ ಪಡೆದು ವಿಚಾರಣೆ ಮಾಡಿದಾಗ ಆರೋಪಿಗಳು ಮೈಸೂರು ನಗರದ
ನಜರ್‍ಬಾದ್, ನರಸಿಂಹರಾಜ, ಕೃಷ್ಣರಾಜ, ಮಂಡಿ ಠಾಣೆ, ಕುವೆಂಪುನಗರ ಹಾಗೂ ವಿಜಯನಗರ ಪೊಲೀಸ್
ಠಾಣೆಗಳ ವ್ಯಾಪ್ತಿಯಲ್ಲಿ ತಲಾ 01 ಒಂದೊಂದು ಸರಗಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ.
ಇದರಿಂದ ಒಟ್ಟು 06 ಸರಗಳ್ಳತನ ಪ್ರಕರಣಗಳು ಪತ್ತೆಯಾಗಿರುತ್ತವೆ. ಅಲ್ಲದೆ 1 ಮತ್ತು 2ನೇ ಆರೋಪಿಗಳ ವಶದಲ್ಲಿದ್ದ
ಒಂದು ಮಹೇಂದ್ರ ಸೆಂಚೂರಿಯಾ ದ್ವಿಚಕ್ರ ವಾಹವನ್ನು ಮೈಸೂರು ನಗರದ ಉದಯಗಿರಿ ಠಾಣಾ
ಸರಹದ್ದಿನಲ್ಲಿ ಕಳವು ಮಾಡಿ ಸರಗಳ್ಳತನ ಮಾಡಲು ಉಪಯೋಗಿಸುತ್ತಿದ್ದುದ್ದಾಗಿ ವಿಚಾರಣೆ ವೇಳೆಯಲ್ಲಿ
ತಿಳಿಸಿದ್ದಾರೆ.ಆರೋಪಿಗಳು ಮೈಸೂರು ನಗರದಲ್ಲಿ ಈ ಹಿಂದೆ ಹಲವಾರು ಪ್ರಕರಣಗಳಲ್ಲಿ
ಭಾಗಿಯಾಗಿದ್ದ ಮಾಹಿತಿ ವಿಚಾರಣೆಯಿಂದ ತಿಳಿದುಬಂದಿರುತ್ತದೆ.
ಡಿ.ಸಿ.ಪಿ. ಗೀತಪ್ರಸನ್ನ ಮಾರ್ಗದರ್ಶನದಲ್ಲಿ, ಸಿ.ಸಿ.ಬಿ ಎ.ಸಿ.ಪಿ, ಸಿ.ಕೆ.ಅಶ್ವತ್ಥನಾರಾಯಣ ನೇತೃತ್ವದಲ್ಲಿ, ಸಿ.ಸಿ.ಬಿ. ಘಟಕದ
ಪೊಲೀಸ್ ಇನ್ಸ್‍ಪೆಕ್ಟರ್ ಆರ್. ಜಗದೀಶ್ ಹಾಗೂ ಸಿಬ್ಬಂದಿಗಳು ಪತ್ತೆ ಕಾರ್ಯಾಚರಣೆ ಮಾಡಿರುತ್ತಾರೆ…

LEAVE A REPLY

Please enter your comment!
Please enter your name here

- Advertisment -

Most Popular

ಮೊರಾರ್ಜಿ ಶಾಲೆಯ ಮೂವರು ವಿದ್ಯಾರ್ಥಿಗಳಿಗೆ ಕೋವಿಡ್..! ಚಾಮರಾಜನಗರ ಜಿಲ್ಲೆ‌ ಯಳಂದೂರಿನ ಆದರ್ಶ ಶಾಲೆಯ ಬಳಿಕ ಹನೂರಿನ ಮೊರಾರ್ಜಿ ವಸತಿ ಶಾಲೆಯ...

ಇಂದು ಅರಮನೆಗೆ ಎಂಟ್ರಿ ನೀಡಲಿರುವ ಗಜಪಡೆ…

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಹಿನ್ನಲೆಅಂಬಾವಿಲಾಸ ಅರಮನೆಯಂಗಳಕ್ಕೆ ಇಂದು ಗಜಪಡೆ ಪ್ರವೇಶ ಪಡೆಯಲಿದೆ.ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಎಂಟು ಆನೆಗಳು ಅರಮನೆಗೆ ಪ್ರವೇಶಿಸಲಿವೆ.ಮೈಸೂರಿನ ಅಶೋಕಪುರಂನ...

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ…ಗಜಪಯಣ ಆರಂಭ…

ವಿಶ್ವವಿಖ್ಯಾತ ಜಂಬೂಸವಾರಿಯ ಗಜ ಪಯಣ ಆರಂಭವಾಗಿದೆ.ನಾಗರಹೊಳೆ ವೀರನಹೊಸಹಳ್ಳಿಯಲ್ಲಿ ಗಜಪಯಣಕ್ಕೆ ಚಾಲನೆ ನೀಡಲಾಗಿದೆ.ಅಭಿಮನ್ಯು ನೇತೃತ್ವದ 8 ಆನೆಗಳ ತಂಡ ಮೈಸೂರಿನತ್ತ ಪ್ರಯಾಣ ಬೆಳಸಲಿದೆ.ಗಜಪಡೆಗೆ ಸಾಂಪ್ರದಾಯಿಕ ಪೂಜೆ...

ನೆಲಸಮಗೊಂಡ ಶಕ್ತಿ ಮಹಾದೇವಿ ದೇವಾಲಯಕ್ಕೆ ಪ್ರತಾಪ್ ಸಿಂಹ ಭೇಟಿ…ಗ್ರಾಮಸ್ಥರಿಗೆ ಸಂಸದರ ಅಭಯ…

ಇತ್ತೀಚೆಗೆ ನೆಲಸಮಗೊಂಡ ನಂಜನಗೂಡಿನ ಹುಚ್ಚಗಣಿ ಗ್ರಾಮದ ಶಕ್ತಿ ಮಹಾದೇವಿ ದೇವಾಲಯಕ್ಕೆ ಸಂಸದ ಪ್ರತಾಪ್ ಸಿಂಹ ಭೇಟಿ ನೀಡಿ ಪರಿಶೀಲನೆ ನಡೆಸಿದರು.ದೇವಾಲಯ ನೆಲಸಮಗೊಳಿಸಿರುವ ಸ್ಥಳಕ್ಕೆ ಭೇಟಿ...

Recent Comments