32 C
Mysore
Wednesday, September 22, 2021
Home Mysore Mysore - Crime ನಕಲಿ ವ್ಯಕ್ತಿ ಸೃಷ್ಟಿಸಿ ದಾನಪತ್ರ ಮಾಡಿದ ಪ್ರಕರಣ…ರಮ್ಮನಹಳ್ಳಿ ಗ್ರಾಮಸಹಾಯಕ ಸಿದ್ದಯ್ಯ ವಜಾ…

ನಕಲಿ ವ್ಯಕ್ತಿ ಸೃಷ್ಟಿಸಿ ದಾನಪತ್ರ ಮಾಡಿದ ಪ್ರಕರಣ…ರಮ್ಮನಹಳ್ಳಿ ಗ್ರಾಮಸಹಾಯಕ ಸಿದ್ದಯ್ಯ ವಜಾ…

ನಕಲಿ ವ್ಯಕ್ತಿಗೆ ದಾನಪತ್ರ ತಯಾರಿಸಿ ಕೋಟ್ಯಾಂತರ ಮೌಲ್ಯದ ಆಸ್ತಿ ಕಬಳಿಸಿದ ಪ್ರಕರಣಕ್ಕೆ ಸಂಭಂಧಿಸಿದಂತೆ ಮೈಸೂರು ತಾಲೂಕಿನ ರಮ್ಮನಹಳ್ಳಿ ಗ್ರಾಮಸಹಾಯಕ ಸಿದ್ದಯ್ಯ ರನ್ನ ಹುದ್ದೆಯಿಂದ ವಜಾಗೊಳಿಸಲಾಗಿದೆ.ಮೈಸೂರು ತಾಲೂಕು ತಹಸೀಲ್ದಾರ್ ರಕ್ಷಿತ್ ವಜಾಗೊಳಿಸಿರುವುದಾಗಿ ಆದೇಶ ಹೊರಡಿಸಿದ್ದಾರೆ.

ಮೈಸೂರು ತಾಲೂಕು ಕಸಬಾ ಹೋಬಳಿ ಕೆಸರೆ ಗ್ರಾಮದ ಸರ್ವೆ ನಂ.244 ರಲ್ಲಿ 4 ಎಕ್ರೆ 4 ಗುಂಟೆ ಜಮೀನಿಗೆ ನಕಲಿ ವ್ಯಕ್ತಿಯನ್ನ ಸೃಷ್ಟಿಸಿ ದಾನಪತ್ರ ಮಾಡಲಾಗಿತ್ತು.ಪ್ರಕರಣಕ್ಕೆ ಸಂಭಂಧಿಸಿದಂತೆ ಮೈಸೂರಿನ ಎನ್.ಆರ್.ಪೊಲೀಸ್ ಠಾಣೆಯಲ್ಲಿ 5 ಮಂದಿಯನ್ನ ಬಂಧಿಸಲಾಗಿತ್ತು.ಈ ಪೈಕಿ ಗ್ರಾಮ ಸಹಾಯಕ ಸಿದ್ದಯ್ಯ ಮೂರನೇ ಆರೋಪಿಯಾಗಿದ್ದು ಆಗಸ್ಟ್ 18 ರಿಂದ 27 ರವರೆಗೆ ನ್ಯಾಯಾಂಗ ಬಂಧನದಲ್ಲಿರಿಸಲಾಗಿತ್ತು.ಈ ಹಿನ್ನಲೆ ಸಿದ್ದಯ್ಯರನ್ನ ಸೇವೆಯಿಂದ ವಜಾಗೊಳಿಸಿ ಆದೇಶ ಹೊರಡಿಸಲಾಗಿದೆ…

LEAVE A REPLY

Please enter your comment!
Please enter your name here

- Advertisment -

Most Popular

ಮೊರಾರ್ಜಿ ಶಾಲೆಯ ಮೂವರು ವಿದ್ಯಾರ್ಥಿಗಳಿಗೆ ಕೋವಿಡ್..! ಚಾಮರಾಜನಗರ ಜಿಲ್ಲೆ‌ ಯಳಂದೂರಿನ ಆದರ್ಶ ಶಾಲೆಯ ಬಳಿಕ ಹನೂರಿನ ಮೊರಾರ್ಜಿ ವಸತಿ ಶಾಲೆಯ...

ಇಂದು ಅರಮನೆಗೆ ಎಂಟ್ರಿ ನೀಡಲಿರುವ ಗಜಪಡೆ…

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಹಿನ್ನಲೆಅಂಬಾವಿಲಾಸ ಅರಮನೆಯಂಗಳಕ್ಕೆ ಇಂದು ಗಜಪಡೆ ಪ್ರವೇಶ ಪಡೆಯಲಿದೆ.ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಎಂಟು ಆನೆಗಳು ಅರಮನೆಗೆ ಪ್ರವೇಶಿಸಲಿವೆ.ಮೈಸೂರಿನ ಅಶೋಕಪುರಂನ...

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ…ಗಜಪಯಣ ಆರಂಭ…

ವಿಶ್ವವಿಖ್ಯಾತ ಜಂಬೂಸವಾರಿಯ ಗಜ ಪಯಣ ಆರಂಭವಾಗಿದೆ.ನಾಗರಹೊಳೆ ವೀರನಹೊಸಹಳ್ಳಿಯಲ್ಲಿ ಗಜಪಯಣಕ್ಕೆ ಚಾಲನೆ ನೀಡಲಾಗಿದೆ.ಅಭಿಮನ್ಯು ನೇತೃತ್ವದ 8 ಆನೆಗಳ ತಂಡ ಮೈಸೂರಿನತ್ತ ಪ್ರಯಾಣ ಬೆಳಸಲಿದೆ.ಗಜಪಡೆಗೆ ಸಾಂಪ್ರದಾಯಿಕ ಪೂಜೆ...

ನೆಲಸಮಗೊಂಡ ಶಕ್ತಿ ಮಹಾದೇವಿ ದೇವಾಲಯಕ್ಕೆ ಪ್ರತಾಪ್ ಸಿಂಹ ಭೇಟಿ…ಗ್ರಾಮಸ್ಥರಿಗೆ ಸಂಸದರ ಅಭಯ…

ಇತ್ತೀಚೆಗೆ ನೆಲಸಮಗೊಂಡ ನಂಜನಗೂಡಿನ ಹುಚ್ಚಗಣಿ ಗ್ರಾಮದ ಶಕ್ತಿ ಮಹಾದೇವಿ ದೇವಾಲಯಕ್ಕೆ ಸಂಸದ ಪ್ರತಾಪ್ ಸಿಂಹ ಭೇಟಿ ನೀಡಿ ಪರಿಶೀಲನೆ ನಡೆಸಿದರು.ದೇವಾಲಯ ನೆಲಸಮಗೊಳಿಸಿರುವ ಸ್ಥಳಕ್ಕೆ ಭೇಟಿ...

Recent Comments