32 C
Mysore
Wednesday, September 22, 2021
Home All News ನೆಲಸಮಗೊಂಡ ಶಕ್ತಿ ಮಹಾದೇವಿ ದೇವಾಲಯಕ್ಕೆ ಪ್ರತಾಪ್ ಸಿಂಹ ಭೇಟಿ…ಗ್ರಾಮಸ್ಥರಿಗೆ ಸಂಸದರ ಅಭಯ…

ನೆಲಸಮಗೊಂಡ ಶಕ್ತಿ ಮಹಾದೇವಿ ದೇವಾಲಯಕ್ಕೆ ಪ್ರತಾಪ್ ಸಿಂಹ ಭೇಟಿ…ಗ್ರಾಮಸ್ಥರಿಗೆ ಸಂಸದರ ಅಭಯ…

ಇತ್ತೀಚೆಗೆ ನೆಲಸಮಗೊಂಡ ನಂಜನಗೂಡಿನ ಹುಚ್ಚಗಣಿ ಗ್ರಾಮದ ಶಕ್ತಿ ಮಹಾದೇವಿ ದೇವಾಲಯಕ್ಕೆ ಸಂಸದ ಪ್ರತಾಪ್ ಸಿಂಹ ಭೇಟಿ ನೀಡಿ ಪರಿಶೀಲನೆ ನಡೆಸಿದರು.ದೇವಾಲಯ ನೆಲಸಮಗೊಳಿಸಿರುವ ಸ್ಥಳಕ್ಕೆ ಭೇಟಿ ನೀಡಿ ಗ್ರಾಮಸ್ಥರ ಜತೆ ಚರ್ಚಿಸಿ ಅಭಯ ನೀಡಿದರು.ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಸುಪ್ರೀಂಕೋರ್ಟ್ ಆದೇಶವನ್ನು ಸರಿಯಾದ ರೀತಿಯಲ್ಲಿ ಪರಿಶೀಲನೆ ಮಾಡಿಲ್ಲ.
ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳ ಎಡವಟ್ಟಿನಿಂದ ಹಿಂದು ಧಾರ್ಮಿಕ ಸ್ಥಳ ಮತ್ತು ಭಾವೈಕ್ಯತೆಗೆ ಧಕ್ಕೆ ಬಂದಿದೆ.ಶ್ರೀ ಶಕ್ತಿ ಮಹಾದೇವಿ ದೇವಾಲಯ ಬರೋಬ್ಬರಿ ೮೦೦ ವರ್ಷಗಳ ಇತಿಹಾಸವುಳ್ಳ ದೇವಾಲಯವಾಗಿದೆ.
ನೆಲಸಮಗೊಂಡಿರುವ ಸನಿಹದಲ್ಲಿ ಸಾಕಷ್ಟು ವೀರಗಲ್ಲುಗಳಿವೆ.
ಇದೊಂದು ಇತಿಹಾಸ ಪೂರ್ವದ ದೇವಾಲಯ ಎಂಬುವುದಕ್ಕೆ ಈ ವೀರಗಲ್ಲುಗಳೇ ಸಾಕ್ಷಿ ಹೇಳುತ್ತಿವೆ. ಇದನ್ನು ಕೂಡ ಅಧಿಕಾರಿಗಳು ಗಮನಿಸಿಲ್ಲ.
ಇನ್ನು ೯೨ ದೇವಾಲಯಗಳು ರಾಜ್ಯದ ವಿವಿಧ ಮೂಲೆಗಳಲ್ಲಿವೆ.
ಅವುಗಳನ್ನು ಯಾವುದೇ ಕಾರಣಕ್ಕೂ ಅಧಿಕಾರಿಗಳು ಮುಟ್ಟಲು ಬಿಡುವುದಿಲ್ಲ ಎಂದು ಅಭಯ ನೀಡಿದರು.
ಅಧಿಕಾರಿಗಳಿಗೆ ತಕ್ಕ ಪಾಠ ಕಲಿಸುತ್ತೇವೆ ನೀವು ಆತಂಕಕ್ಕೆ ಒಳಗಾಗುವುದು ಬೇಡ ಎಂದು ಸಲಹೆ ನೀಡಿದರು.ಈಗಾಗಲೇ ದಾನಿಗಳು ದೇವಾಲಯ ನಿರ್ಮಾಣಕ್ಕೆ ಭೂಮಿ ನೀಡಲು ಮುಂದಾಗಿದ್ದಾರೆ. ಉತ್ತಮ ರೀತಿಯಲ್ಲಿ ದೇವಾಲಯ ನಿರ್ಮಾಣ ಮಾಡಲು ನಾವು ಸಹಕರಿಸುತ್ತೇವೆ.
ದೇವಾಲಯ ನೆಲಸಮವಾದ ಸನಿಹದಲ್ಲೇ ದೇವಿಯ ಮೂರ್ತಿ ಸ್ಥಾಪನೆ ಮಾಡಿರುವುದು ಸ್ವಾಗತಾರ್ಹ.ಇಲ್ಲಿಯ ವಾಸ್ತವ ವರದಿಯನ್ನು ಈಗಾಗಲೇ ಪರಿಶೀಲನೆ ಮಾಡಲಾಗಿದೆ. ಇದನ್ನು ಬಿಜೆಪಿ ಪಕ್ಷದ ದೊಡ್ಡ ಮಟ್ಟದ ನಾಯಕರ ಜೊತೆ ಚರ್ಚೆ ಮಾಡಲು ಮುಂದಾಗುತ್ತೇವೆ ಎಂದು ಅಭಯ ನೀಡಿದ್ದಾರೆ…

LEAVE A REPLY

Please enter your comment!
Please enter your name here

- Advertisment -

Most Popular

ಮೊರಾರ್ಜಿ ಶಾಲೆಯ ಮೂವರು ವಿದ್ಯಾರ್ಥಿಗಳಿಗೆ ಕೋವಿಡ್..! ಚಾಮರಾಜನಗರ ಜಿಲ್ಲೆ‌ ಯಳಂದೂರಿನ ಆದರ್ಶ ಶಾಲೆಯ ಬಳಿಕ ಹನೂರಿನ ಮೊರಾರ್ಜಿ ವಸತಿ ಶಾಲೆಯ...

ಇಂದು ಅರಮನೆಗೆ ಎಂಟ್ರಿ ನೀಡಲಿರುವ ಗಜಪಡೆ…

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಹಿನ್ನಲೆಅಂಬಾವಿಲಾಸ ಅರಮನೆಯಂಗಳಕ್ಕೆ ಇಂದು ಗಜಪಡೆ ಪ್ರವೇಶ ಪಡೆಯಲಿದೆ.ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಎಂಟು ಆನೆಗಳು ಅರಮನೆಗೆ ಪ್ರವೇಶಿಸಲಿವೆ.ಮೈಸೂರಿನ ಅಶೋಕಪುರಂನ...

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ…ಗಜಪಯಣ ಆರಂಭ…

ವಿಶ್ವವಿಖ್ಯಾತ ಜಂಬೂಸವಾರಿಯ ಗಜ ಪಯಣ ಆರಂಭವಾಗಿದೆ.ನಾಗರಹೊಳೆ ವೀರನಹೊಸಹಳ್ಳಿಯಲ್ಲಿ ಗಜಪಯಣಕ್ಕೆ ಚಾಲನೆ ನೀಡಲಾಗಿದೆ.ಅಭಿಮನ್ಯು ನೇತೃತ್ವದ 8 ಆನೆಗಳ ತಂಡ ಮೈಸೂರಿನತ್ತ ಪ್ರಯಾಣ ಬೆಳಸಲಿದೆ.ಗಜಪಡೆಗೆ ಸಾಂಪ್ರದಾಯಿಕ ಪೂಜೆ...

ನೆಲಸಮಗೊಂಡ ಶಕ್ತಿ ಮಹಾದೇವಿ ದೇವಾಲಯಕ್ಕೆ ಪ್ರತಾಪ್ ಸಿಂಹ ಭೇಟಿ…ಗ್ರಾಮಸ್ಥರಿಗೆ ಸಂಸದರ ಅಭಯ…

ಇತ್ತೀಚೆಗೆ ನೆಲಸಮಗೊಂಡ ನಂಜನಗೂಡಿನ ಹುಚ್ಚಗಣಿ ಗ್ರಾಮದ ಶಕ್ತಿ ಮಹಾದೇವಿ ದೇವಾಲಯಕ್ಕೆ ಸಂಸದ ಪ್ರತಾಪ್ ಸಿಂಹ ಭೇಟಿ ನೀಡಿ ಪರಿಶೀಲನೆ ನಡೆಸಿದರು.ದೇವಾಲಯ ನೆಲಸಮಗೊಳಿಸಿರುವ ಸ್ಥಳಕ್ಕೆ ಭೇಟಿ...

Recent Comments