ಜಿ.ಟಿ.ದೇವೇಗೌಡ ಗೆ ಕಾಂಗ್ರೆಸ್ ಪಕ್ಷಕ್ಕೆ ಬರುವ ಮನಸ್ಸು ಇರುವುದು ನಿಜ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.ಹಿನಕಲ್ ನಲ್ಲಿ ನಡೆದ ಕಾರ್ಯಕ್ರಮದ ವೇದಿಕೆಯಲ್ಲಿ ಈ ವಿಚಾರವನ್ನ ಬಹಿರಂಗಪಡಿಸಿದ ಸಿದ್ದರಾಮಯ್ಯ ಅವರನ್ನ ಕಾಂಗ್ರೆಸ್ ಪಕ್ಷಕ್ಕೆ ಸ್ವಾಗತಿಸುವುದಾಗಿ ತಿಳಿಸಿದರು.ಜಿಟಿ ದೇವೇಗೌಡರನ್ನ ಉಳಿಸಿಕೊಳ್ಳಲು ಹೆಚ್ ಡಿ ದೇವೇಗೌಡ ಮತ್ತು ಕುಮಾರಸ್ವಾಮಿ ಪ್ರಯತ್ನ ಮಾಡುತ್ತಿದ್ದಾರೆ.
ಕಾಂಗ್ರೆಸ್ ಪಕ್ಷಕ್ಕೆ ಬರುವುದು ಬಿಡುವುದು ಜಿಟಿಗೆ ಬಿಟ್ಟ ವಿಚಾರ.
ಜಿಟಿ ದೇವೇಗೌಡ ಕಾಂಗ್ರೆಸ್ ಪಕ್ಷಕ್ಕೆ ಬಂದರೆ ಸ್ವಾಗತ ಮಾಡುತ್ತೇನೆ.
ನಾನು ಜಿಟಿಡಿ ಪರಸ್ಪರ ಸ್ಪರ್ಧೆ ಮಾಡಿದ್ದೆವು.
ಈ ಗಿರಾಕಿ ಚುನಾವಣೆಯಲ್ಲಿ ನನ್ನೇ ಸೋಲಿಸಿದ್ದ.ಹೀಗಾಗಿ, ನಾವಿಬ್ಬರು ಒಂದೇ ವೇದಿಕೆಗೆ ಬಂದಿರುವುದಕ್ಕೆ ಮಾಧ್ಯಮದವರಿಗೆ ಕೂತುಹಲ ಕೆರಳಿದೆ.
ಕಾಂಗ್ರೆಸ್ ಸಿದ್ಧಾಂತ ಒಪ್ಪಿ ಯಾರೇ ಪಕ್ಷಕ್ಕೆ ಬಂದರು ಸ್ವಾಗತ.
ಜಿಟಿಡಿ ಬಂದರು ಸ್ವಾಗತ ಯಾರೇ ಬಂದರು ಸರಿ ಸ್ವಾಗತಿಸುತ್ತೇನೆ.ಜಿಟಿಡಿ ನನ್ನ ರಾಜಕೀಯ ಎದುರಾಳಿ ಹೊರತು ವೈರಿ ಅಲ್ಲ.
ನನಗೂ ಜಿಟಿಡಿ ಗೂ ವೈಯಕ್ತಿಕ ದ್ವೇಷ ಇಲ್ಲ.
ಮುಂದೆ ರಾಜಕೀಯ ಬೆಳವಣಿಗೆ ಏನೇನಾಗುತ್ತೆ ಗೊತ್ತಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದರು…