ಅರ್ಚಕನ ಜೊತೆ ಗೃಹಿಣಿ ಎಸ್ಕೇಪ್…ಕಾಡಲ್ಲಿ ಬಿಟ್ಟು ಪರಾರಿಯಾದ ಪೂಜಾರಿ…

ನಂಜನಗೂಡು,ಜೂ22,Tv10 ಕನ್ನಡ
ಹತ್ತು ದಿನಗಳ ಹಿಂದೆ ನಾಪತ್ತೆಯಾಗಿದ್ದ ಗೃಹಿಣಿ ಕಾಡಂಚಿನಲ್ಲಿ ಪತ್ತೆಯಾಗಿದ್ದಾಳೆ.21 ವರ್ಷದ ಅರ್ಚಕನ ಜೊತೆ ಪರಾರಿಯಾದ ಎರಡು ಮಕ್ಕಳ ತಾಯಿ ಅತಂತ್ರಕ್ಕೆ ಸಿಲುಕಿದ್ದಾಳೆ.ಬಾಳು ಕೊಡುವುದಾಗಿ ನಂಬಿಸಿ ಕರೆದೊಯ್ದ ಚಿಗುರುಮೀಸೆ ಯುವ ಅರ್ಚಕ ಆಕೆಯೊಂದಿಗೆ ಹತ್ತು ದಿನ ಒಡನಾಟ ಬೆಳೆಸಿ ನಂತರ ಕಾಡಂಚಿನಲ್ಲಿ ಬಿಟ್ಟು ಪರಾರಿಯಾಗಿದ್ದಾನೆ.ಇಂದು ಗ್ರಾಮಸ್ಥರ ಕಣ್ಣಿಗೆ ಬಿದ್ದ ಗೃಹಿಣಿ ಅರ್ಚಕನ ಜೊತೆ ಇರಬೇಕೆಂದು ಪಟ್ಟು ಹಿಡಿದಿದ್ದಾಳೆ.ಆದರೆ ಪೂಜಾರಿ ಕೈಕೊಟ್ಟು ಪರಾರಿಯಾಗಿದ್ದಾನೆ.

ನಂಜನಗೂಡು ತಾಲೂಕು ಕೊಲ್ಲೂಪುರ ಗ್ರಾಮದಲ್ಲಿ ಘಟನೆ ನಡೆದಿದೆ.35 ವರ್ಷದ ಗೃಹಿಣಿ ಜೂನ್ 12 ರಂದು ತಂದೆ ಮನೆಯಿಂದ ನಾಪತ್ತೆಯಾಗಿದ್ದಳು.ಇದೀಗ ನಿರ್ಜನ ಪ್ರದೇಶದಲ್ಲಿ ಗೃಹಿಣಿ ಕಂಡುಬಂದಿದ್ದಾಳೆ.ಪರಿಹಾರ ಕೇಳಲು ಮಹದೇಶ್ವರನ ದೇವಸ್ಥಾನಕ್ಕೆ ಬಂದಾಗ 21 ವರ್ಷದ ಅರ್ಚಕ ಸಂತೋಷ್ ಈಕೆಯ ಜೊತೆ ಸಲುಗೆ ಬೆಳೆಸಿದ್ದಾನೆ.ನಿನಗೆ ಹೊಸ ಬಾಳು ಕೊಡುತ್ತೇನೆಂದು ನಂಬಿಸಿದ ಸಂತೋಷ್ ಗೃಹಿಣಿಯನ್ನ ಕರೆದೊಯ್ದಿದ್ದಾನೆ.ಹತ್ತು ದಿನಗಳ ಕಾಲ ಆಕೆಯೊಂದಿಗೆ ಸ್ವೇಚ್ಛಾಚಾರವಾಗಿ ತಿರುಗಾಡಿದ ಸಂತೋಷ್ ಆತ್ಮಹತ್ಯೆ ನಾಟಕವಾಡಿ ಕಾಡಿಗೆ ಕರೆತಂದಿದ್ದಾನೆ.ಮಧ್ಯರಾತ್ರಿಯಲ್ಲಿ ಇದ್ದಕ್ಕಿದ್ದಂತೆ ಸಂತೋಷ್ ನಾಪತ್ತೆಯಾಗಿದ್ದಾನೆ.ಇಡೀ ರಾತ್ರಿ ಒಂಟಿಯಾಗಿ ಕಾಡಿನಲ್ಲಿ ಕಾಲ ಕಳೆದ ಗೃಹಿಣಿ ಮುಂಜಾನೆ ಸ್ಥಳೀಯರ ಕಣ್ಣಿಗೆ ಬಿದ್ದಿದ್ದಾಳೆ.ಗೃಹಿಣಿಯ ಕರುಣಾಜನಕ ಕಥೆ ಕೇಳಿದ ಗ್ರಾಮಸ್ಥರು ಹುಲ್ಲಹಳ್ಳಿ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಪೊಲೀಸರು ಗೃಹಿಣಿಗೆ ರಕ್ಷಣೆ ನೀಡಿದ್ದಾರೆ.ಬಾಳು ಕೊಡುವುದಾಗಿ ನಂಬಿಸಿ ಕರೆದೊಯ್ದ ಪೂಜಾರಿ ಸಂತೋಷ್ ಇದೀಗ ನಾಪತ್ತೆ.ಗಂಡನ ಮನೆಯೂ ಇಲ್ಲ,ಬಾಳು ಕೊಡುವುದಾಗಿ ನಂಬಿಸಿದ ಸಂತೋಷ್ ಸಹ ಇಲ್ಲದೆ ಗೃಹಿಣಿ ಅತಂತ್ರಕ್ಕೆ ಸಿಲುಕಿದ್ದಾಳೆ.ಸಧ್ಯ ಸಂತೋಷ್ ಜೊತೆ ಇರುವುದಾಗಿ ಗೃಹಿಣಿ ಪಟ್ಟು ಹಿಡಿದಿದ್ದಾಳೆ.ಹುಲ್ಲಹಳ್ಳಿ ಠಾಣೆ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ…

