ಚಿರತೆ ಸೆರೆಗೆ ಕಾರ್ಯಾಚರಣೆ ಆರಂಭ…ಬೋನು ಇರಿಸಿದ ಅರಣ್ಯಾಧಿಕಾರಿಗಳು…
ಚಿರತೆ ಸೆರೆಗೆ ಕಾರ್ಯಾಚರಣೆ ಆರಂಭ…ಬೋನು ಇರಿಸಿದ ಅರಣ್ಯಾಧಿಕಾರಿಗಳು… ಕೆ.ಆರ್.ಎಸ್,ಅ22,Tv10 ಕನ್ನಡಕೆ.ಆರ್.ಎಸ್. ಬೃಂದಾವನ ಗಾರ್ಡನ್ ನಲ್ಲಿ ಕಾಣಿಸಿಕೊಂಡ ಚಿರತೆಯನ್ನ ಸೆರೆ ಹಿಡಿಯಲು ಅರಣ್ಯಾಧಿಕಾರಿಗಳು ಕಾರ್ಯಾಚರಣೆ ಆರಂಭಿಸಿದ್ದಾರೆ.ಚಿರತೆ ಕಾಣಿಸಿಕೊಂಡ ಸ್ಥಳದಲ್ಲಿ ಬೋನು ಇರಿಸಿದ್ದಾರೆ.ಇಂದು ಬೆಳಿಗ್ಗೆ ಚಿರತೆ ಕಾಣಿಸಿಕೊಂಡ ಹಿನ್ನಲೆ ಮುಂಜಾಗ್ರತೆ ಕ್ರಮವಾಗಿ ಪ್ರವಾಸಿಗರ ಪ್ರವೇಶ ನಿಷೇಧಿಸಲಾಗಿದೆ.ಕಾವೇರಿ ನೀರಾವರಿ ನಿಗಮದ ಫಾರೂಕ್ ಅಬು ಹಾಗೂ ಅರಣ್ಯಾಧಿಕಾರಿಗಳಾದ ಅನಿತ,ಶಿವ.ಎಂ. ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯುತ್ತಿದೆ.ಸಧ್ಯ ಆತಂಕ ಪಡುವ ಅಗತ್ಯವಿಲ್ಲ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ…
Read More