ಬೆಟ್ಟಳ್ಳಿ ಮಾರಮ್ಮನಿಗೆ ಧನುರ್ಮಾಸದ ವಿಶೇಷ ಪೂಜೆ .
ಬೆಟ್ಟಳ್ಳಿ ಮಾರಮ್ಮನಿಗೆ ಧನುರ್ಮಾಸದ ವಿಶೇಷ ಪೂಜೆ . ಹನೂರು: ಮಂಗಳವಾರದಿಂದ ಧನುರ್ಮಾಸ ಪೂಜೆ ಪ್ರಾರಂಭವಾಗಿರುವ ಹಿನ್ನೆಲೆ ಪಟ್ಟಣದ ಗ್ರಾಮ ದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮನ ದೇಗುಲದಲ್ಲಿ ದೇವರ ಮೂರ್ತಿಗೆ ಫಲ ಪುಷ್ಪಗಳಿಂದ ಸಿಂಗರಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು. ಮಂಗವಾರ ಬೆಳಗಿನ ಜಾವ 5 ಗಂಟೆಗೆ ಪನ್ನೀರು, ಎಳನೀರು, ಅರಿಶಿಣ, ಕುಂಕುಮ, ಜೇನುತುಪ್ಪ, ಹಾಲು, ಮೊಸರು ಹಾಗೂ ಗಂಧದ ಅಭಿಷೇಕವನ್ನು ನೆರವೇರಿಸಲಾಯಿತು. ಬಳಿಕ ದೇವಿ ಮೂರ್ತಿಗೆ ಬಗೆ ಬಗೆಯ ಪುಷ್ಪಾಲಂಕಾರಗಳಿಂದ ಸಿಂಗರಿಸಲಾಯಿತು.
Read More