ಸಿದ್ದಾರ್ಥನಗರದ ನೂತನ ಕಟ್ಟಡಕ್ಕೆ ಜಿಲ್ಲಾಧಿಕಾರಿಗಳ ಕಾರ್ಯಾಲಯ ಶಿಫ್ಟ್…ಹೊಸ ಕಟ್ಟಡದಲ್ಲೇ ಸಾರ್ವಜನಿಕರ ಭೇಟಿ…
ಮೈಸೂರು,ಜೂ8,Tv10 ಕನ್ನಡಜಿಲ್ಲಾಧಿಕಾರಿಗಳ ಕಾರ್ಯಾಲಯವನ್ನ ಸಿದ್ದಾರ್ಧ ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಕಟ್ಟಡಕ್ಕೆ ಶಿಫ್ಟ್ ಮಾಡಲಾಗಿದೆ. ಜಿಲ್ಲಾಧಿಕಾರಿಗಳು ಇಂದಿನಿಂದ ಹೊಸಕಟ್ಟಡದಲ್ಲಿ ಅಧಿಕೃತವಾಗಿ ಕಾರ್ಯನಿರ್ವಹಿಸಲಿದ್ದಾರೆ. ಸರ್ಕಾರ ಹಾಗೂ ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಜಿಲ್ಲಾಧಿಕಾರಿಗಳನ್ನು ಸಾರ್ವಜನಿಕರು ಸಿದ್ದಾರ್ಧನಗರದಲ್ಲಿ ನೂತನವಾಗಿ ನಿರ್ಮಿಸಿರುವ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಂಪರ್ಕಿಸುವಂತೆ ಜಿಲ್ಲಾಧಿಕಾರಿಗಳಾದ ಡಾ ರಾಜೇಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ…
Read More