ನೇಣು ಬಿಗಿದ ಸ್ಥಿತಿಯಲ್ಲಿ ದಂಪತಿ ಶವ ಪತ್ತೆ…ಆತ್ಮಹತ್ಯೆ ಶಂಕೆ…
ಪಿರಿಯಾಪಟ್ಟಣ,ನ14,Tv10 ಕನ್ನಡ ನೇಣುಬಿಗಿದ ಸ್ಥಿತಿಯಲ್ಲಿ ದಂಪತಿ ಶವ ಪತ್ತೆಯಾದ ಘಟನೆ ಪಿರಿಯಾಪಟ್ಟಣ ತಾಲೂಕು ತಾಲ್ಲೂಕು ದೊಡ್ಡ ಹೊನ್ನೂರು ಕಾವಲಿನ ಜಮೀನಿನ ಹಳೆಯ ಖಾಲಿ ಮನೆಯಲ್ಲಿ ಬೆಳಕಿಗೆ ಬಂದಿದೆ.ಸುರೇಶ್ (40) ಹಾಗೂ ಪತ್ನಿ ಪಲ್ಲವಿ (28) ಮೃತ ದಂಪತಿ.ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.ಮೃತರು ಪಿರಿಯಾಪಟ್ಟಣ ತಾಲ್ಲೂಕು ಕೊಪ್ಪ ಗ್ರಾಮದ ನಿವಾಸಿಗಳಾಗಿದ್ದಾರೆ.ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದ ಸುರೇಶ್ಉದ್ಯಮದಲ್ಲಿ ನಷ್ಟ ಹಾಗೂ ಸಾಲಗಾರರ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆಂದು ಹೇಳಲಾಗಿದೆ.ಬೈಲುಕುಪ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…
Read More