ಸಮಾಜದ ಕಂಟಕದ ವಿರುದ್ಧ ತಮ್ಮ ವಿರೋಧ ವ್ಯಕ್ತಪಡಿಸಿದವರು ಮಾಡಿವಾಳ ಮಾಚಿದೇವರು: ಉಪವಿಭಾಗಾಧಿಕಾರಿ ಹೆಚ್.ಎಸ್ ಕೀರ್ತನ

ಸಮಾಜದ ಕಂಟಕದ ವಿರುದ್ಧ ತಮ್ಮ ವಿರೋಧ ವ್ಯಕ್ತಪಡಿಸಿದವರು ಮಾಡಿವಾಳ ಮಾಚಿದೇವರು: ಉಪವಿಭಾಗಾಧಿಕಾರಿ ಹೆಚ್.ಎಸ್ ಕೀರ್ತನ

ಸಮಾಜದ ಕಂಟಕದ ವಿರುದ್ಧ ತಮ್ಮ ವಿರೋಧ ವ್ಯಕ್ತಪಡಿಸಿದವರು ಮಾಡಿವಾಳ ಮಾಚಿದೇವರು: ಉಪವಿಭಾಗಾಧಿಕಾರಿ ಹೆಚ್.ಎಸ್ ಕೀರ್ತನ

ಜಾತಿ, ಲಿಂಗ, ಸಮಾನತೆ ವಂಚಿತದ ಕಾಲಘಟ್ಟದಲ್ಲಿ ಕಾಯಕವೇ ಭಕ್ತಿ, ಕಾಯಕವೇ ಜೀವನ ಎಂದು ಶ್ರದ್ಧೆ ಇಟ್ಟು ಸಮಾಜದ ಕಂಟಕದ ವಿರುದ್ದ ವಿರೋಧ ವ್ಯಕ್ತಪಡಿಸಿದವರು ಮಡಿವಾಳ ಮಾಚಿದೇವರು ಎಂದು ಮಂಡ್ಯ ಉಪವಿಭಾಗಾಧಿಕಾರಿ ಹೆಚ್.ಎಸ್ ಕೀರ್ತನ ಅವರು ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆಯ ಸಹಯೋಗದೊಂದಿಗೆ ಮಡಿವಾಳ ಮಾಚಿದೇವ ಜಯಂತಿಯನ್ನು ಕಲಾಮಂದಿರದಲ್ಲಿಂದು ಜ್ಯೋತಿ ಬೆಳಗುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

12 ಶತಮಾನದ ಬಿಜ್ಜಳನ ಆಸ್ಥಾನದಲ್ಲಿ ಆದ ಬದಲಾವಣೆಯಿಂದ ವಚನ ಮತ್ತು ವಚನಕಾರರಿಗೆ ಅಪಾಯವಿದ್ದ ಕಾಲದಲ್ಲಿ ವಚನ ಮತ್ತು ವಚನಕಾರರನ್ನು ರಕ್ಷಿಸಿದ ಕೀರ್ತಿ ಮಾಡಿವಾಳ ಮಾಚಿದೇವರಿಗೆ ಸಲ್ಲುತ್ತದೆ ಎಂದರು.

ಮಡಿ ಎಂದರೆ ಶುದ್ಧ, ಶುದ್ಧ ಮಾಡುವುದೆ ಮಾಡಿವಾಳನ ಕುಲ ಕಸುಬು. ಬಟ್ಟೆಯನ್ನಷ್ಟೆ ಅಲ್ಲದೇ ಮನಸ್ಸು, ದಾರಿ, ಜೀವನ ಶೈಲಿ, ವಿವೇಚನೆಗಳನ್ನು ಶುದ್ಧ ಮಾಡಿಕೊಳ್ಳಬೇಕು ಎಂದು ಹೇಳಿದರು.

ಕಾಯಕವೇ ಜೀವನ, ಅಭಿವೃದ್ಧಿಯೇ ನಮ್ಮ ವೃತ್ತಿ ಎಂದು ಶ್ರದ್ಧೆ, ಪ್ರೀತಿಯಿಂದ ಯಾವುದೇ ಕೆಲಸ ಮಾಡಿದರೇ ಯಶಸ್ಸು ನಿಶ್ಚಿತ ಎಂದರು.

ಇದೇ ಸಂದರ್ಭದಲ್ಲಿ ಮಡಿವಾಳ ಸಮುದಾಯದ ಮುಖಂಡರು ಗಳಿಗೆ ಸನ್ಮಾನ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಎನ್ ಉದಯ್ ಕುಮಾರ್, ನಗರಸಭೆ ಸದಸ್ಯ ನಾಗೇಶ್, ಮಂಜುಳ, ಕೆ.ಎಸ್.ಓ.ಯು ನಿರ್ದೇಶಕಿ ಮಿಲನ ಆರ್ ಹಾಜರಿದ್ದರು.

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *