8 ವರ್ಷಗಳಲ್ಲಿ 120 ಲಕ್ಷ ಕೋಟಿ ಸಾಲ…ಇದೇ ಬಿಜೆಪಿ ಸಾಧನೆ…ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ಆರೋಪ…
- Politics
- February 2, 2023
- No Comment
- 92
8 ವರ್ಷಗಳಲ್ಲಿ 120 ಲಕ್ಷ ಕೋಟಿ ಸಾಲ…ಇದೇ ಬಿಜೆಪಿ ಸಾಧನೆ…ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ಆರೋಪ…
ಮೈಸೂರು,ಫೆ2,Tv10 ಕನ್ನಡ
ಕಳೆದ 8 ವರ್ಷಗಳ ಆಡಳಿತಾವಧಿಯಲ್ಲಿ ಬಿಜೆಪಿ ಸರ್ಕಾರ 120 ಲಕ್ಷ ಕೋಟಿ ಸಾಲ ಮಾಡಿದೆ ಎಂದು ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ಆರೋಪಿಸಿದ್ದಾರೆ.ಇದೇ ಬಿಜೆಪಿ ಯ ಸಾಧನೆ ಎಂದು ವ್ಯಂಗ್ಯವಾಡಿದ್ದಾರೆ.
ಮೈಸೂರಿನ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಸುದ್ದಿಗೋಷ್ಠಿ ನಡೆಸಿ ಈ ಬಾರಿಯ ಕೇಂದ್ರ ಬಜೆಟ್ ವೇಳೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ದೇಶಕ್ಕೆ 155 ಲಕ್ಷ ಕೋಟಿ ಸಾಲವಿದ್ದು, ವರ್ಷಾಂತ್ಯಕ್ಕೆ 18ಲಕ್ಷ ಕೋಟಿ ಹೊಸ ಸಾಲ ಪಡೆಯುವುದಾಗಿ ಹೇಳಿದ್ದಾರೆ.ಈ ಮೂಲಕ ದೇಶದ ಸಾಲ ವರ್ಷಾಂತ್ಯಕ್ಕೆ 173 ಲಕ್ಷ ಕೋಟಿಗೆ ಏರಿಕೆಯಾಗಲಿದೆ.1947ರಿಂದ 2014ರವರೆಗೆ ದೇಶದ ಮೇಲೆ ಇದ್ದ ಸಾಲ 53 ಲಕ್ಷ ಕೋಟಿ.ಆದರೆ ಕಳೆದ ಎಂಟು ವರ್ಷಗಳ ಅವಧಿಯಲ್ಲಿ 120 ಲಕ್ಷ ಕೋಟಿ ಸಾಲ ಮಾಡಿರುವುದು ಬಿಜೆಪಿ ಸರ್ಕಾರದ ಸಾಧನೆಯಾಗಿದೆ ಎಂದರು.ದೇಶ ಪ್ರತಿವರ್ಷ 10.81 ಲಕ್ಷ ಕೋಟಿ ಬಡ್ಡಿ ಕಟ್ಟಬೇಕಿದೆ.ಅಂದರೆ 100 ರೂಪಾಯಿಯಲ್ಲಿ 42 ರೂಪಾಯಿ ಬಡ್ಡಿಗೆ ಹೋಗಲಿದೆ.ಈ ರೀತಿ ಮಾಡಿದ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ.
ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ದೇಶದ ಜಿಡಿಪಿ ದರ 8.7% ಇತ್ತು.
ದೇಶದ ಜಿಡಿಪಿ ದರ ಈಗ 6%ಕ್ಕೆ ಇಳಿದಿದೆ.
2004ರಿಂದ 2014ರವರೆಗೆ 13% ತಲಾ ಆದಾಯವಿತ್ತು.
2014ರಿಂದ 2023ರವರೆಗೆ ತಲಾ ಆದಾಯ 9% ಕ್ಕೆ ಕುಸಿದಿದೆ ಎಂದು ಆರೋಪಿಸಿದರು…