ಮಾಘ ಹುಣ್ಣಿಮೆ ಜಿಲ್ಲಾಧಿಕಾರಿಗಳಿಂದ ಪರಿಶೀಲನೆ
ಶ್ರೀರಂಗಪಟ್ಟಣದ ಶ್ರೀ ನಿಮಿಷಾಂಭ ದೇವಸ್ಥಾನದಲ್ಲಿ ಫೆಬ್ರವರಿ 5 ರಂದು ನಡೆಯಲಿರುವ ಮಾಘ ಶುದ್ಧ ಹುಣ್ಣಿಮೆಯಲ್ಲಿ ಲಕ್ಷಾಂತರ ಭಕ್ತಾದಿಗಳು ಭಾಗವಹಿಸುವ ಹಿನ್ನೆಲೆಯಲ್ಲಿ ಇಂದು ಜಿಲ್ಲಾಧಿಕಾರಿ ಡಾ: ಹೆಚ್ ಎನ್ ಗೋಪಾಲ ಕೃಷ್ಣ ಅವರು ಬೇಟಿ ನೀಡಿ ಪರಿಶೀಲನೆ ನಡೆಸಿದರು.
- TV10 Kannada Exclusive
- February 3, 2023
- No Comment
- 132

ಮಾಘ ಹುಣ್ಣಿಮೆ ಜಿಲ್ಲಾಧಿಕಾರಿಗಳಿಂದ ಪರಿಶೀಲನೆ
ಶ್ರೀರಂಗಪಟ್ಟಣದ ಶ್ರೀ ನಿಮಿಷಾಂಭ ದೇವಸ್ಥಾನದಲ್ಲಿ ಫೆಬ್ರವರಿ 5 ರಂದು ನಡೆಯಲಿರುವ ಮಾಘ ಶುದ್ಧ ಹುಣ್ಣಿಮೆಯಲ್ಲಿ ಲಕ್ಷಾಂತರ ಭಕ್ತಾದಿಗಳು ಭಾಗವಹಿಸುವ ಹಿನ್ನೆಲೆಯಲ್ಲಿ ಇಂದು ಜಿಲ್ಲಾಧಿಕಾರಿ ಡಾ: ಹೆಚ್ ಎನ್ ಗೋಪಾಲ ಕೃಷ್ಣ ಅವರು ಬೇಟಿ ನೀಡಿ ಪರಿಶೀಲನೆ ನಡೆಸಿದರು.
ಭಕ್ತಾದಿಗಳಿಗೆ ಮೂಲಭೂತ ಸೌಕರ್ಯಗಳು, ಪಾರ್ಕಿಂಗ್ , ಸ್ವಚ್ಛತೆ, ನದಿಯ ಸ್ನಾನ ಘಟ್ಟಗಳ ಬಳಿ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಸಲಹೆ ಸೂಚನೆಗಳನ್ನು ನೀಡಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ಯತೀಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಾಂತ ಎಲ್ ಹುಲ್ಮನಿ, ತಹಶೀಲ್ದಾರ್ ಶ್ವೇತ, ದೇವಸ್ಥಾನ ಕಾರ್ಯನಿರ್ವಾಹಕ ಅಧಿಕಾರಿ ಮಹೇಶ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.