ಮೈಸೂರಲ್ಲಿ ಯುವತಿ ಮೇಲೆ ಅತ್ಯಾಚಾರ ಮತ್ತು ಕೊಲೆಗೆ ಯತ್ನ…ಬೇಕರಿ ಮಾಲೀಕನ ವಿರುದ್ದ ಪ್ರಕರಣ ದಾಖಲು…

ಮೈಸೂರಲ್ಲಿ ಯುವತಿ ಮೇಲೆ ಅತ್ಯಾಚಾರ ಮತ್ತು ಕೊಲೆಗೆ ಯತ್ನ…ಬೇಕರಿ ಮಾಲೀಕನ ವಿರುದ್ದ ಪ್ರಕರಣ ದಾಖಲು…

ಮೈಸೂರಲ್ಲಿ ಯುವತಿ ಮೇಲೆ ಅತ್ಯಾಚಾರ ಮತ್ತು ಕೊಲೆಗೆ ಯತ್ನ…ಬೇಕರಿ ಮಾಲೀಕನ ವಿರುದ್ದ ಪ್ರಕರಣ ದಾಖಲು…

ಮೈಸೂರು,ಫೆ3,Tv10 ಕನ್ನಡ
ಮೈಸೂರಿನ ಬೇಕರಿಯೊಂದರ ಮಾಲೀಕನೋರ್ವನ ಮೇಲೆ ಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಮತ್ತು ಕೊಲೆ ಯತ್ನ ಪ್ರಕರಣ ದಾಖಲಾಗಿದೆ.
ಮೈಸೂರಿನ ಹಲವು ಬಡಾವಣೆಗಳಲ್ಲಿ ತಲೆಯೆತ್ತಿರುವ ರಾಯಲ್ ವಾರಿಯರ್ ಬೇಕರಿ ಮಾಲೀಕ ಮನೋಜ್ ಎಂಬಾತನ ಮೇಲೆ ಅತ್ಯಾಚಾರ ಆರೋಪ ಹೊರಿಸಿ ಯುವತಿಯೋರ್ವಳು ದೂರು ನೀಡಿದ್ದಾಳೆ. ಮನೋಜ್ ಅಲಿಯಾಸ್ ಹೃತಿಕ್ ಎಂಬಾತ ಮಹಾರಾಜ ಕಾಲೇಜಿನಲ್ಲಿ ಬಿ.ಎ.ಓದುತ್ತಿದ್ದಾಗ ಪರಿಚಯವಾಗಿದ್ದು ಕಳೆದ ನಾಲ್ಕೂವರೆ ವರ್ಷಗಳಿಂದ ನನ್ನನ್ನು ಮದುವೆ ಅಗುವುದಾಗಿ ನಂಬಿಸಿ,ನನ್ನ ಬೆನ್ನ ಹಿಂದೆ ಬಿದ್ದು ಗೋಳಾಡಿ ಬೆದರಿಸಿ ಪ್ರೀತಿಸುವುದಾಗಿ ಹೇಳಿ ಸುಮಾರು ಎರಡು-ಮೂರು ಬಾರಿ ಅವರ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನನ್ನನ್ನು ಕರೆದುಕೊಂಡು ಹೋಗಿ ಬಲವಂತವಾಗಿ ನನ್ನ ಇಚ್ಛೆಗೆ ವಿರುದ್ಧವಾಗಿ ದೈಹಿಕ ಸಂಪರ್ಕ ಬೆಳೆಸಿದ್ದಾನೆ.ಈ ವಿಚಾರವನ್ನು ಅವರ ತಂದೆ, ತಾಯಿ ಮತ್ತವರ ಅಕ್ಕನಿಗೆ ತಿಳಿಸಿ, ಅವರ ಜೊತೆ ಮದುವೆ ವಿಷಯ ಪ್ರಸ್ತಾಪಿಸಿದಾಗ ಅವರು ನನ್ನನ್ನು ಬಾಯಿಗೆ ಬಂದಂತೆ ಬೈದು ,ನಿನಗೆ ಸ್ವಲ್ಪ ಹಣವನ್ನು ಬೇಕಾದರೆ ಕೊಡುತ್ತೇವೆ ಎಂದು ಆಮಿಷ ಒಡ್ಡಿದ್ದರು ಎಂದು ಆರೋಪಿಸಿದ್ದಾಳೆ. ಅಷ್ಟೇ ಅಲ್ಲದೆ ಅವರ ಬೇಕರಿಯಲ್ಲಿ ಕೆಲಸ ಮಾಡುವ ಹೆಚ್.ಆರ್ ಅವರನ್ನು ಕರೆದುಕೊಂಡು ಬಂದು ಅವರಿಂದ ಹೆದರಿಸಿದ್ದಾರೆ. ಅಷ್ಟೇ ಅಲ್ಲದೆ ಜನವರಿ 23 ರಂದು ರಾತ್ರಿ ವೇಳೆ ಮನೋಜ್ ಬಂದು ನನಗೆ ಬಾಯಿಗೆ ಬಂದಂತೆ ಬೈದು ನನ್ನನ್ನು ಅವನ ಕಾರಿನಲ್ಲಿ ಕೂರಿಸಿಕೊಂಡು 20 ರಿಂದ 30 ಮಾತ್ರೆಗಳನ್ನು ಬಲವಂತವಾಗಿ ನನ್ನ ಬಾಯಿಗೆ ತುರುಕಿ ಸಾಯಿಸಲು ಪ್ರಯತ್ನಪಟ್ಟಿದ್ದಾನೆ. ನಂತರ ಆತನೇ ನನ್ನನ್ನು ಆಸ್ಪತ್ರೆಗೆ ಸೇರಿಸಿದ್ದು ಚಿಕಿತ್ಸೆ ಪಡೆಯುತ್ತಿದ್ದ ಕಾರಣ ತಡವಾಗಿ ದೂರು ನೀಡುತ್ತಿದ್ದೇನೆ. ಇವರ ಮೇಲೆ ಕಾನೂನು ರೀತಿಯ ಕ್ರಮ ಜರುಗಿಸಬೇಕೆಂದು ದೂರನ್ನು ನೀಡಿದ್ದು, ಯುವತಿ ನೀಡಿರುವ ದೂರಿನ ಮೇರೆಗೆ
ಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *