
ಕನಿಷ್ಟ ಬೆಂಬಲ ಯೋಜನೆಯಡಿ ಗುಣಮಟ್ಟದ ಉಂಡೆ ಕೊಬ್ಬರಿ ಖರೀದಿಗೆ ನೋಂದಣಿ ಆರಂಭ: ಡಾ:ಹೆಚ್ ಎನ್ ಗೋಪಾಲಕೃಷ್ಣ
- TV10 Kannada Exclusive
- February 13, 2023
- No Comment
- 136

ಕನಿಷ್ಟ ಬೆಂಬಲ ಯೋಜನೆಯಡಿ ಗುಣಮಟ್ಟದ ಉಂಡೆ ಕೊಬ್ಬರಿ ಖರೀದಿಗೆ ನೋಂದಣಿ ಆರಂಭ: ಡಾ:ಹೆಚ್ ಎನ್ ಗೋಪಾಲಕೃಷ್ಣ
2023 ನೇ ಸಾಲಿನ ಕನಿಷ್ಠ ಬೆಂಬಲ ಯೋಜನೆಯಡಿಯಲ್ಲಿ ಎಫ್ ಎ ಕ್ಯೂ ಗುಣಮಟ್ಟದ ಉಂಡೆ ಕೊಬ್ಬರಿಗೆ ಸರ್ಕಾರವು ಪ್ರತಿ ಕ್ವಿಂಟಾಲೆಗೆ ರೂ.11750/ ಕನಿಷ್ಠ ಬೆಂಬಲ ಬೆಲೆ ಘೋಷಿಸಿದೆ. ನೊಂದಣಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅರ್ಹ ರೈತರು ಹೆಸರು ನೊಂದಾಯಿಸಿಕೊಳ್ಳುವುದು ಎಂದು ಜಿಲ್ಲಾಧಿಕಾರಿ ಡಾ.ಹೆಚ್. ಎನ್ ಗೋಪಾಲಕೃಷ್ಣ ಅವರು ತಿಳಿಸಿದರು.
ಅವರು ಇಂದು ಜಿಲ್ಲಾಧಿಕಾರಿ ಸಭಾಂಗಣದಲ್ಲಿ ರೈತರಿಂದ ನೇರವಾಗಿ ಉಂಡೆ ಕೊಬ್ಬರಿಯನ್ನು ಖರೀದಿಸುವ ಸಂಬಂಧ ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತಾನಾಡಿದರು.
ಸರ್ಕಾರದ ಆದೇಶದಂತೆ ಗುಣಮಟ್ಟದ ಉಂಡೆ ಕೊಬ್ಬರಿಯನ್ನು ರೈತರಿಂದ ನೇರವಾಗಿ ನಾಫೆಡ್ ಸಂಸ್ಥೆಯ ಕರ್ನಾಟಕ ಸರ್ಕಾರದ ಸಹಕಾರ ಮಾರಾಟ ಮಹಾ ಮಂಡಳಿ ನಿಯಮಿತದವರು ಖರೀದಿ ಪ್ರಕ್ರಿಯೆ ನಡೆಸಲಿದ್ದು, ನಾಗಮಂಗಲ ತಾಲ್ಲೂಕಿನ ಕದಬಳ್ಳಿ ಹಾಗೂ ಕೆ.ಆರ್.ಪೇಟೆ ಎ.ಪಿ.ಎಂ.ಸಿ ಆವರಣದಲ್ಲಿ ನೊಂದಣಿ ಪ್ರಕ್ರಿಯೆ ಪ್ರಾರಮಭವಾಗಲಿದೆ ಎಂದರು.
ಪ್ರತಿ ರೈತರಿಂದ ಗರಿಷ್ಠ 20 ಕ್ವಿಂಟಾಲ್ ಉಂಡೆ ಕೊಬ್ಬರಿಯನ್ನು ಪ್ರತಿ ಎಕರೆಗೆ 6 ಕ್ವಿಂಟಾಲ್ ನಂತೆ ಖರೀದಿಸಬೇಕು. ರೈತರ ನೊಂದಣಿ ಕಾಲಾವಧಿಯನ್ನು 45 ದಿನಗಳವರೆಗೆ ಹಾಗೂ ಖರೀದಿ ಅವಧಿಯನ್ನು 6 ತಿಂಗಳ ವರೆಗೆ ನಿಗದಿಪಡಿಸಿಲಾಗಿದೆ ಎಂದರು.
ನೊಂದಣಿ ಹಾಗೂ ಖರೀದಿಗೆ ಬೇಕಿರುವ ಸಿಬ್ಬಂದಿಗಳನ್ನು ನೇಮಕ ಮಾಡಲು, ಖರೀದಿ ಕೇಂದ್ರಗಳಲ್ಲಿ ಅಗತ್ಯ ಮೂಲಭೂತ ವ್ಯವಸ್ಥೆಗಳನ್ನು ಮಾಡಿಕೊಳ್ಳಬೇಕು. ರೈತರಿಗೆ ನೆರವಾಗುವ ರೀತಿ ಸಹಾಯವಾಣಿ ಪ್ರಾರಂಭಿಸುವುದು ಸೂಕ್ತ ಎಂದರು.
ಮಂಡ್ಯ ಜಿಲ್ಲೆಯಲ್ಲಿ ಪ್ರಮುಖವಾಗಿ ಜಿಲ್ಲೆಯ ಕೆ.ಆರ್ ಪೇಟೆ ಹಾಗೂ ನಾಗಮಂಗಲ ತಾಲ್ಲೂಕಿನಲ್ಲಿ ಹೆಚ್ಚಿನ ಪ್ರಮಾಣದ ತೆಂಗಿನ ಮರಗಳಿರುತ್ತದೆ. ಜಿಲ್ಲೆಯಲ್ಲಿ ಒಟ್ಟು 68466 ಹೆಕ್ಟೇರ್ ಪ್ರದೇಶದಲ್ಲಿ ತೆಂಗಿನ ಮರಗಳಿದ್ದು, ಒಟ್ಟು ಉತ್ಪಾದನೆ 5096 ಲಕ್ಷ ಕಾಯಿಕಳಾಗಿರುತ್ತವೆ ಎಂದು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಎಪಿಎಂಸಿ ಉಪ ನಿರ್ದೆಶಕ ಕೆ.ಶ್ರೀನಿವಾಸ ರೆಡ್ಡಿ, ಕೆ.ಆರ್ ಪೇಟೆ ಎಪಿಎಂಸಿ ಕಾರ್ಯದರ್ಶಿ ರಫಿಕ್ ಅಹಮ್ಮದ್, ನಾಗಮಂಗಲ ಎಪಿಎಂಸಿಯ ಸೋಮಶೇಖರ್, ರಜೀತ್, ನಫೇಢ್ ಸಂಸ್ಥೆಯ ಸತೀಶ್, ತೋಟಗಾರಿಕೆ ಇಲಾಖೆಯ ಚಂದು ಸೇರಿದಂತೆ ಇನ್ನಿತರರು ಹಾಜರಿದ್ದರು.