ಮತಗಟ್ಟೆ ಸಿಬ್ಬಂದಿ ನೇಮಕಕ್ಕೆ ಮಾಹಿತಿ ಸಂಗ್ರಹಣೆ: ಡಾ: ಹೆಚ್ ಎನ್ ಗೋಪಾಲಕೃಷ್ಣ

ಮತಗಟ್ಟೆ ಸಿಬ್ಬಂದಿ ನೇಮಕಕ್ಕೆ ಮಾಹಿತಿ ಸಂಗ್ರಹಣೆ: ಡಾ: ಹೆಚ್ ಎನ್ ಗೋಪಾಲಕೃಷ್ಣ

ಮಂಡ್ಯ ಮತಗಟ್ಟೆ ಸಿಬ್ಬಂದಿ ನೇಮಕಕ್ಕೆ ಮಾಹಿತಿ ಸಂಗ್ರಹಣೆ: ಡಾ: ಹೆಚ್ ಎನ್ ಗೋಪಾಲಕೃಷ್ಣ

ಮುಂಬರುವ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಮತಗಟ್ಟೆ ಸಿಬ್ಬಂದಿಗಳನ್ನು ನೇಮಕ ಮಾಡಲು‌ ಎಲ್ಲಾ ಇಲಾಖೆಯಿಂದ ಮಾಹಿತಿ ಪಡೆಯಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ: ಹೆಚ್ ಎನ್ ಗೋಪಾಲಕೃಷ್ಣ ಅವರು ತಿಳಿಸಿದರು.

ಅವರು‌ ಇಂದು‌ ಜಿಲ್ಲಾ ಮಟ್ಟದ ಅಧಿಕಾರಿಗಳ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಮತಗಟ್ಟೆಗಳ ಸಿಬ್ಬಂದಿಗಳ ನೇಮಕಕ್ಕೆ ಎಷ್ಟು ಸಿಬ್ಬಂದಿಗಳು ಲಭ್ಯವಿದ್ದಾರೆ, ಸಿಬ್ಬಂದಿಗಳನ್ನು ಅವರು ಮತದಾನ ಮಾಡುವ ಕ್ಷೇತ್ರವನ್ನು ಹೊರತು ಪಡಿಸಿ ಬೇರೆ ಕ್ಷೇತ್ರಕ್ಕೆ ನಿಯೋಜಿಸಬೇಕಾಗುತ್ತದೆ. ಈ ಹಿನ್ನಲೆಯಲ್ಲಿ‌ ಸಿಬ್ಬಂದಿಗಳ ಪೂರ್ಣ ವಿವರವನ್ನು ಹೆಚ್ಆರ್ ಎಂಎಸ್( ಮಾನವ ಸಂಪನ್ಮೂಲ ನಿರ್ವಹಣೆ ವ್ಯವಸ್ಥೆ) ಮಾಹಿತಿ ಅಪ್ಡೇಟ್ ಮಾಡಲು ಅಧಿಕಾರಿಗಳಿಗೆ ತಿಳಿಸಿದರು.

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ನಿವೃತ್ತಿಗೆ 6 ತಿಂಗಳು ಇರುವಂತಹವರು, ಗರ್ಭಿಣಿಯರು, ಬಾಣಂತಿಯರು, ಹಾಗೆಯೇ ವಿಶೇಷ ವಿಕಲಚೇತನರು, ಮಾರಣಾಂತಿಕ ಕಾಯಿಲೆಯಿಂದ ನರಳುವಂತಹ ವ್ಯಕ್ತಿಗಳಿಗೆ ಚುನಾವಣಾ ಕಾರ್ಯದಿಂದ ವಿನಾಯಿತಿ ನೀಡಲು ಅವಕಾಶ ಇರುತ್ತದೆ. ಈ ವಿವರಗಳನ್ನು ಸಹ ಅಪ್ಲೋಡ್ ಮಾಡಬೇಕಿದೆ ಎಂದರು.

ಚುನಾವಣೆ ಕೆಲಸದಲ್ಲಿ ನಿರತರಾಗುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಮತದಾನದ ಹಕ್ಕನ್ನು ಪೋಸ್ಟಲ್ ವೋಟ್ ಮೂಲಕ ನೀಡುವ ಸಂಬಂಧ ಅವರ ಚುನಾವಣಾ ಗುರುತಿನ ಚೀಟಿಯ ವಿವರ ಅವಶ್ಯಕತೆ ಇರುತ್ತದೆ. ಮಾಹಿತಿ ಒದಗಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಮತಗಟ್ಟೆ ಸಿಬ್ಬಂದಿ ಮಾತ್ರವಲ್ಲದೆ ಪೊಲೀಸ್ ಇಲಾಖೆ, ಸಾರಿಗೆ ಇಲಾಖೆ, ಆರೋಗ್ಯ ಇಲಾಖೆ, ಪಶು ಸಂಗೋಪನೆ ಇಲಾಖೆ ಹಾಗೂ ಇತರ ಇಲಾಖೆಗಳಲ್ಲಿ ಕೆಲಸ ಮಾಡುವವರು ಕೂಡ ಚುನಾವಣಾ ಕೆಲಸಕ್ಕೆ ನಿಯೋಜಿಸಲಾಗುತ್ತದೆ. ಅವರು ಮತದಾನದಿಂದ ವಂಚಿತರಾಗಬಾರದು. ಚುನಾವಣಾ ಕೆಲಸಕ್ಕೆ ನಿಯೋಜನೆಯಾಗುವ ಎಲ್ಲರ ಮಾಹಿತಿಯನ್ನು ಪಡೆಯಲಾಗುತ್ತಿದೆ ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಾಂತ ಎಲ್ ಹುಲ್ಮನಿ, ಮುಡಾ ಆಯುಕ್ತೆ ಐಶ್ವರ್ಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಧನಂಜಯ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೆಶಕ ರಂಗೇಗೌಡ ಬಿ, ಡಿ.ಡಿ.ಪಿ.ಐ ಜವರೇಗೌಡ, ಪ್ರಾದೇಶಿಕ ಸಾರಿಗೆ ಅಧಿಕಾರಿ ವಿವೇಕಾನಂದ ಸೇರಿದಂತೆ ಇನ್ನಿತರರು ಹಾಜರಿದ್ದರು.

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *