ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಉತ್ತಮಗೊಳಿಸಿ : ಮಂಡ್ಯ ಡಿ.ಸಿ ಡಾ. ಹೆಚ್. ಎನ್ ಗೋಪಾಲಕೃಷ್ಣ
- TV10 Kannada Exclusive
- February 15, 2023
- No Comment
- 78
ಮಂಡ್ಯ :-ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ತೇರ್ಗಡೆಯಾಗಿ ಜಿಲ್ಲೆಗೆ ಉತ್ತಮ ಸ್ಥಾನ ದೊರಕುವಂತೆ ವಿದ್ಯಾರ್ಥಿಗಳನ್ನು ಸಿದ್ದಪಡಿಸಿ ಎಂದು ಜಿಲ್ಲಧಿಕಾರಿ ಹೆಚ್. ಎನ್ ಗೋಪಾಲಕೃಷ್ಣ ರವರು ತಿಳಿಸಿದರು.
ಅವರು ಮಂಗಳವಾರ ಜಿಲ್ಲೆಯ ಎಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಪಿ.ಯು ಕಾಲೇಜಿನ ಪ್ರಾಂಶುಪಾಲರುಗಳ ಸಭೆಯನ್ನು ಜಿಲ್ಲಾ ಪಂಚಾಯತಿಯ ಕಾವೇರಿ ಸಭಾಂಗಣದಲ್ಲಿ ನಡೆಸಿ ಮಾತನಾಡಿದರು.
ದ್ವಿತೀಯ ಪಿ.ಯು.ಸಿ.ಯ ವಾರ್ಷಿಕ ಫಲಿತಾಂಶವು ಹಿಂದಿನ ವರ್ಷಕ್ಕೆ ಸಂಬಂಧಿಸಿದಂತೆ ಶೇಕಡ 59 ರಷ್ಟು ಫಲಿತಾಂಶವನ್ನು ಹೊಂದಿತ್ತು ಆದರೆ ಈ ವರ್ಷದ ಫಲಿತಾಂಶವು ಜಿಲ್ಲೆಗೆ ಕೀರ್ತಿ ತರುವಂತಹ ಫಲಿತಾಂಶವಾಗಿರಬೇಕು ಎಂದರು.
ಫಲಿತಾಂಶವನ್ನು ಉತ್ತಮಪಡಿಸಲು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ವಿಶೇಷ ತರಗತಿಗಳು, ಗುಂಪು ಅಧ್ಯಯನ, ಕಡಿಮೆ ಅಂಕ ಪಡೆದಿರುವ ಮಕ್ಕಳಿಗೆ ಪುನರಾವರ್ತನೆ, ಮಾದರಿ ಪ್ರಶ್ನೆ ಪತ್ರಿಕೆಗಳಿಗೆ ಉತ್ತರಿಸುವುದು ಈಗೆ ವಿವಿಧ ರೀತಿಯಲ್ಲಿ ವಿದ್ಯಾರ್ಥಿಗಳಿಗೆ ಅಭ್ಯಾಸ ಮಾಡಿಸಿ ಎಂದರು
ಜಿಲ್ಲೆಯ ಫಲಿತಾಂಶವನ್ನು ಉತ್ತಮಪಡಿಸಲು ಜಿಲ್ಲಾ ಮಟ್ಟದ ಅಧಿಕಾರಿಗಳು,ಪ್ರಾಂಶುಪಾಲರುಗಳು ಹಾಗೂ ಉಪನ್ಯಾಸಕರ ಸಹಕಾರದೊಂದಿಗೆ ಕೆಲಸ ನಿರ್ವಹಿಸಿ ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಾಂತಾ ಎಲ್ ಹುಲ್ಮನಿ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಸ್ ಉಮೇಶ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.