ಶ್ರೀಗಂಧ ಬೆಳೆ ಬೆಳೆದು ಶ್ರೀಮಂತರಾಗಿ: ನಿವೃತ್ತ ಐಎಎಸ್ ಅಧಿಕಾರಿ ಅಮರನಾರಾಯಣ್

ಶ್ರೀಗಂಧ ಬೆಳೆ ಬೆಳೆದು ಶ್ರೀಮಂತರಾಗಿ: ನಿವೃತ್ತ ಐಎಎಸ್ ಅಧಿಕಾರಿ ಅಮರನಾರಾಯಣ್

ಶ್ರೀಗಂಧ ಬೆಳೆ ಬೆಳೆದು ಶ್ರೀಮಂತರಾಗಿ: ನಿವೃತ್ತ ಐಎಎಸ್ ಅಧಿಕಾರಿ ಅಮರನಾರಾಯಣ್

ಮಂಡ್ಯದ ರೈತರು ಭತ್ತ ಕಬ್ಬು ಬೆಳೆದು ಶ್ರೀಮಂತರಾಗಿರೋದು ಬಹಳ ಕಡಿಮೆ. ಆದ್ದರಿಂದ ಶ್ರೀಗಂಧ ಬೆಳೆ ಬೆಳೆದು ಶ್ರೀಮಂತರಾಗಿ ಎಂದು ನಿವೃತ್ತ ಐಎಎಸ್‌ ಅಧಿಕಾರಿ ಹಾಗೂ ಅಖಿಲ ಕರ್ನಾಟಕ ಶ್ರೀಗಂಧ ಮತ್ತು ವನ ಕೃಷಿ ಬೆಳಗಾರರ ಸಂಘದ ಅದ್ಯಕ್ಷರಾದ ಅಮರನಾರಾಯಣ್ ರೈತರಿಗೆ ಸಲಹೆ ನೀಡಿದರು.

ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ, ಅಖಿಲ ಕರ್ನಾಟಕ ಶ್ರೀಗಂಧ ಮತ್ತು ವನ ಕೃಷಿ ಬೆಳಗಾರರ ಸಂಘ, ಬೆಂಗಳೂರು ಮತ್ತು OISCA ಇಂಟರ್ ನ್ಯಾಷನಲ್ ಕರ್ನಾಟಕ ವಲಯ ಇವರ ಸಂಯುಕ್ತಾಶ್ರಯದಲ್ಲಿ 2022-23 ನೇ ಸಾಲಿನ ಆತ್ಮ ಯೋಜನೆಯಡಿ ಶ್ರೀಗಂಧ, ವನಕೃಷಿ ಮತ್ತು ಸಮಗ್ರ ಕೃಷಿ ಪದ್ದತಿ ಕುರಿತು ತರಬೇತಿ ಹಾಗೂ ವಿಚಾರ ಸಂಕೀರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಂಡ್ಯದಲ್ಲಿ 51 ಭಾಗ ನೀರಾವರಿ ಜಮೀನು ಇದೆ. 42 ಸಾವಿರ ಹೆಕ್ಟೇರ್ ಖುಷ್ಕಿ ಭೂಮಿ ಇದೆ. ರೈತರು ನೀರಾವರಿ ಇಲ್ಲದ ಕೃಷಿ ಭೂಮಿಯಲ್ಲಿ ಶ್ರೀಗಂಧ ಬೆಳೆ ಬೆಳೆದು ಆರ್ಥಿಕವಾಗಿ ಲಾಭ ಪಡೆದುಕೊಳ್ಳಬಹುದು ಎಂದರು.

ಅಂದಿನ ಮೈಸೂರಿನ ಮಹಾರಾಜರು ಹೆಚ್ಚಾಗಿ ಸಿಗುತ್ತಿದ್ದ ಶ್ರೀಗಂಧ ಬೆಳೆಯನ್ನು ಕಂಡು ಮೈಸೂರು ಸ್ಯಾಂಡಲ್ ಸೋಪ್, ಗಂಧದ‌ ಎಣ್ಣೆ ಕಾರ್ಖಾನೆಗೆ ಬುನಾದಿ ಹಾಕಿದರು. ಅದರ ಪರಿಣಾಮ ಇಂದು ದೇಶ ವಿದೇಶಗಳಲೆಲ್ಲಾ ಶ್ರೀಗಂಧದ ಬೆಳೆ ಶ್ರೀಮಂತವಾಗಿದೆ. ಇಡೀ ಭಾರತದಲ್ಲೇ ಕರ್ನಾಟಕ 71% ಶ್ರೀಗಂಧ ಪೂರೈಸುತ್ತಿದೆ. ಈ ನಿಟ್ಟಿನಲ್ಲಿ ರೈತರು ಶ್ರೀಗಂಧದ ಬೆಳೆಯ ಬಗ್ಗೆ ತಿಳಿದುಕೊಂಡು ಶ್ರೀಗಂಧ ಬೆಳೆಯಬೇಕಿದೆ ಎಂದರು.

ಕರ್ನಾಟಕ ಶ್ರೀಗಂಧ ಮತ್ತು ವನ ಕೃಷಿ ಬೆಳಗಾರರ ಸಂಘವು ಕಳೆದ ಒಂದು ವರ್ಷದಿಂದ ರಾಜ್ಯಾದ್ಯಂತ ಸಂಚರಿಸಿ ಶ್ರೀಗಂಧ ಬೆಳೆಯ ಬಗ್ಗೆ ರೈತರಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದರು.

ಸರ್ಕಾರ ಶ್ರೀಗಂಧ ಬೆಳೆಯನ್ನು ತೋಟಗಾರಿಕೆ ಬೆಳೆ ಎಂದು ಪರಿಗಣಿಸಿ, ಇದನ್ನು ಪರಿಣಾಮಕಾರಿವಾಗಿ ತೋಟಗಾರಿಕೆ ಇಲಾಖೆಯಿಂದ ಸಾಲ, ಸೌಲಭ್ಯ ಹಾಗೂ ವಿಮೆ ಇನ್ನಿತರ ಸೌಲಭ್ಯ ಸಿಗುವಂತಾಗಬೇಕು ಎಂದರು.

ಶ್ರೀ ಗಂಧದ ಕೃಷಿಯಲ್ಲಿ ಅತಿಥಿ ಸಸ್ಯ ಉಪಯೋಗಿಸುವ ಗೊಬ್ಬರ, ಗಿಡಗಳ ನಡುವೆ ಅಂತರ, ರೋಗ ನಿಗ್ರಾಹ ಕುರಿತಂತೆ ರೈತರಿಗೆ ಮಾಹಿತಿ ಕೈಪಿಡಿ ಒದಗಿಸಬೇಕು ಎಂದರು.

ಪ್ರಗತಿಪರ ರೈತರ ಯಶೋಗಾಥೆಯನ್ನು ಹಂಚಿಕೊಳ್ಳಿ: ಶಾಂತ ಎಲ್‌ ಹುಲ್ಮನಿ

ಪ್ರಗತಿಪರ ರೈತರು ತಮ್ಮ ಕೃಷಿಯಲ್ಲಿ ಅಳವಡಿಸಿಕೊಂಡಿರುವ ವಿಧಾನ ಹಾಗೂ ಹೊಸ ತಂತ್ರಜ್ಞಾನಗಳ ಬಳಕೆ ಕುರಿತ ಯಶೋಗಾಥೆಗಳನ್ನು ಇತರೆ ರೈತರೊಂದಿಗೆ ಹಂಚಿಕೊಳ್ಳಿ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಾಂತ ಎಲ್ ಹುಲ್ಮನಿ ಅವರು ತಿಳಿಸಿದರು.

ರೈತರಿಗೆ ಹೆಚ್ಚು ಕಾರ್ಯಾಗಾರಗಳನ್ನು‌ ಆಯೋಜಿಸಿ, ರೈತರು ಕೃಷಿಯಲ್ಲಿ ಖುದ್ದು ತಮ್ಮ ಅನುಭವ, ತೊಂದರೆಗಳು ಮತ್ತು ಸುಧಾರಣೆ ಅಂಶಗಳನ್ನು ಹಂಚಿಕೊಳ್ಳಲಿದ್ದಾರೆ. ಇಲ್ಲಿ ಮೂಡುವ ಅಭಿಪ್ರಾಯಗಳು ಸರ್ಕಾರದ ಹಂತಕ್ಕೆ ತಲುಪಿದರೆ ರೈತರ ಪರವಾಗಿ ಯೋಜನೆಗಳನ್ನು ರೂಪಿಸಲು ಸಹಕಾರಿ ಎಂದರು.
ಗ್ರಾಮೀಣ ಭಾಗದಲ್ಲಿ ಮನರೇಗಾ ಯೋಜನೆಗಳನ್ನು ಪರಿಣಾಮಕಾರಿ ಅನುಷ್ಠಾನಗೊಳಿಸಲಾಗುತ್ತಿದೆ. ಶಾಲೆಗಳಲ್ಲಿ 1200 ಆಟದ ಮೈದಾನ ನಿರ್ಮಾಣ ಕೆಲಸ ಕೈಗೊಳ್ಳಲಾಗುತ್ತಿದೆ, ಸ್ಮಾಸನದ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ (ಆಡಳಿತ) ಎಂ ಬಾಬು, ಸಂಜಿವಪ್ಪ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ.ವಿ.ಎಸ್ ಅಶೋಕ್, ತೋಟಗಾರಿಕೆ ಇಲಾಖೆ ನಿರ್ದೇಶಕ ಮಂಜುನಾಥ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಶ್ರೀಹರ್ಷ, ಕೃಷಿ ಇಲಾಖೆಯ ವಿಷಯ ತಜ್ಞೆ ಸುಚಿತ್ರ ಕೆ.ಪಿ ಸೇರಿದಂತೆ ಇನ್ನಿತರರು ಹಾಜರಿದ್ದರು.

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *