ನಾಲೆಯಲ್ಲಿ ಮೃತದೇಹದ ತುಂಡುಗಳು ಪತ್ತೆ…ದುಷ್ಕರ್ಮಿಗಳ ಪತ್ತೆಗಾಗಿ ಖಾಕಿ ಪಡೆ ಅಲರ್ಟ್…

ನಾಲೆಯಲ್ಲಿ ಮೃತದೇಹದ ತುಂಡುಗಳು ಪತ್ತೆ…ದುಷ್ಕರ್ಮಿಗಳ ಪತ್ತೆಗಾಗಿ ಖಾಕಿ ಪಡೆ ಅಲರ್ಟ್…

  • Crime
  • February 24, 2023
  • No Comment
  • 146

ನಾಲೆಯಲ್ಲಿ ಮೃತದೇಹದ ತುಂಡುಗಳು ಪತ್ತೆ…ದುಷ್ಕರ್ಮಿಗಳ ಪತ್ತೆಗಾಗಿ ಖಾಕಿ ಪಡೆ ಅಲರ್ಟ್…

ಮಂಡ್ಯ,ಫೆ24,Tv10 ಕನ್ನಡ
ಮಂಡ್ಯದಲ್ಲಿ ವ್ಯಕ್ತಿಯೊಬ್ಬನ
ಕೊಲೆಗೈದು ಮೃತದೇಹ ಕತ್ತರಿಸಿ ನಾಲೆಗೆ ಎಸೆದ ಪ್ರಕರಣ ಬೆಳಕಿಗೆ ಬಂದಿದೆ.ಅಪರಿಚಿತ ವ್ಯಕ್ತಿಯ ಭೀಕರ ಹತ್ಯೆಗೆ ಸಕ್ಕರೆ ನಾಡು ಬೆಚ್ಚಿಬಿದ್ದಿದೆ.
ತುಂಡು ತುಂಡಾದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ.
ಮಂಡ್ಯ ತಾಲೂಕಿನ ಹೊಡಾಘಟ್ಟ,ಶಿವಾರ, ಡಣಾಯಕನಪುರ ಹಾಗೂ ಮದ್ದೂರು ತಾಲೂಕಿನ ಗೂಳೂರಿನಲ್ಲಿ ತುಂಡುತುಂಡಾದ ಮೃತದೇಹ ಪತ್ತೆಯಾಗಿದೆ.
ದುಷ್ಕರ್ಮಿಗಳು ಕೊಲೆಗೈದು ನಾಲೆಗೆ ಎಸೆದಿರುವ ಶಂಕೆ ವ್ಯಕ್ತವಾಗಿದೆ.ಸುಮಾರು
30 ರಿಂದ 40 ವರ್ಷದ ವ್ಯಕ್ತಿಯ ಮೃತದೇಹದ ಭಾಗಗಳು ಕಂಡುಬಂದಿದರ.
ಹೊಡಾಘಟ್ಟ ಬಳಿ ತೊಡೆ ಮತ್ತು ಸೊಂಟದ ಭಾಗ, ಶಿವಾರದ ಸಮೀಪ ಒಂದು ಕಾಲು ಪತ್ತೆಯಾಗಿದೆ.
ಡಣಾಯಕನಪುರ ಬಳಿ ಎರಡು ಕೈ, ಒಂದು ಕಾಲು, ಗೂಳೂರು ಬಳಿ ತಲೆಯ ಭಾಗ ಪತ್ತೆಯಾಗಿದೆ.
ಎಡಗೈ ಮೇಲೆ ಕಾವ್ಯ, ರಘು, ಬಲಗೈಯಲ್ಲಿ ವನಜಾ ಎಂದು ಹಚ್ಚೆ ಬರೆಯಲಾಗಿದೆ.
ಮೃತದೇಹದ ಭಾಗಗಳನ್ನ ಪೊಲೀಸರು ಸಂಗ್ರಹಿಸಿ ಮಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ.
ಸ್ಥಳಕ್ಕೆ ಮಂಡ್ಯ ಎಸ್ಪಿ ಎನ್.ಯತೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಕರಣದ ತನಿಖೆಗೆ ಪ್ರತ್ಯೇಕ ತಂಡ ರಚನೆಗೆ ಎಸ್ಪಿ ಮುಂದಾಗಿದ್ದಾರೆ.
ಮೊದಲು ಮೃತದೇಹದ ಗುರುತು ಪತ್ತೆಗೆ ಮುಂದಾಗಿದ್ದು
ಎಲ್ಲಾ ಪೊಲೀಸ್ ಠಾಣೆಗಳಿಂದ ನಾಪತ್ತೆ ಪ್ರಕರಣಗಳ ಮಾಹಿತಿ ಸಂಗ್ರಹಿಸುತ್ತಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *