ಕಬ್ಬಿಗೆ ಹೆಚ್ಚುವರಿ ಹಣ…ಸರ್ಕಾರದ ಆದೇಶ ಪಾಲಿಸದ ಸಕ್ಕರೆ ಕಾರ್ಖಾನೆ…ಡಿಸಿ ಕಚೇರಿಗೆ ಮುತ್ತಿಗೆಗೆ ನಿರ್ಧಾರ…

ಕಬ್ಬಿಗೆ ಹೆಚ್ಚುವರಿ ಹಣ…ಸರ್ಕಾರದ ಆದೇಶ ಪಾಲಿಸದ ಸಕ್ಕರೆ ಕಾರ್ಖಾನೆ…ಡಿಸಿ ಕಚೇರಿಗೆ ಮುತ್ತಿಗೆಗೆ ನಿರ್ಧಾರ…

ಮೈಸೂರು,ಫೆ26,Tv10 ಕನ್ನಡ
ಕಬ್ಬಿಗೆ ಹೆಚ್ಚುವರಿ 150 ರೂಗಳನ್ನ ಪಾವತಿಸುವಂತೆ ಸರ್ಕಾರದ ಆದೇಶ ಪಾಲಿಸದ ಸಕ್ಕರೆ ಕಾರ್ಖಾನೆ ವಿರುದ್ದ ಮತ್ತೆ ರೈತರು ಸಿಡಿದೆದ್ದಿದ್ದಾರೆ.ಇದೇ 28 ರಂದು ಹೆಚ್ಚುವರಿ ಹಣ ಪಾವತಿಗಾಗಿ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಹಾಕಲಿದ್ದಾರೆ.ಇಂದು ಮೈಸೂರಿನಲ್ಲಿ ಸುದ್ದಿಗೋಷ್ಢಿ ನಡೆಸಿದ ರೈತ ಮುಖಂಡ ಕುರುಬೂರು ಶಾಂತಕುಮಾರ್ ಎಚ್ಚರಿಕೆ ನೀಡಿದ್ದಾರೆ.ಹೆಚ್ಚುವರಿ ಹಣ ಜೊತೆಗೆ
ವಿವಿದ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಹಾಕಲಾಗುವುದೆಂದು ಎಚ್ಚರಿಕೆ ನೀಡಿದ್ದಾರೆ.
ರಾಜ್ಯ ಕಬ್ಬು ಬೆಳೆಗಾರರ ಸಂಘದ ಸತತ 39 ದಿನಗಳ ಹೋರಾಟದ ಪರಿಣಾಮ ಕಬ್ಬಿಗೆ ರೂ 150/-ಹೆಚ್ಚುವರಿ ಆದೇಶ ಮಾಡಲಾಗಿದೆ.ಆದರೆ ಬಣ್ಣಾರಿ ಸಕ್ಕರೆ ಕಾರ್ಖಾನೆ ಹೆಚ್ಚುವರಿ ಹಣ ಪಾವತಿಸದೆ ಹಿನ್ನಲೆ ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿದರು ಯಾವುದೇ ಕ್ರಮ ಜಾರಿಯಾಗಿಲ್ಲ.ಹೀಗಾಗಿ ಡಿಸಿ ಕಚೇರಿ ಮುತ್ತಿಗೆಗೆ ನಿರ್ಧಾರ ಕೈಗೊಂಡಿದ್ದಾರೆ.
ಅರಿಶಿಣ ಬೆಳೆಗೆ ಕ್ವಿಂಟಲ್ ಗೆ 17500 ಬೆಂಬಲ ಬೆಲೆ ನಿಗದಿ ಮಾಡಬೇಕು.
ಕಾವೇರಿ – ಕಬಿನಿ ಅಚ್ಚುಕಟ್ಟು ನಾಲೆಗಳ ವ್ಯಾಪ್ತಿಯಲ್ಲಿ ಬೆಳೆದು ನಿಂತಿರುವ ಕಬ್ಬು ಬಾಳೆ ಇನ್ನಿತರ ಬೆಳೆಗಳ ರಕ್ಷಣೆಗಾಗಿ ಬೇಸಿಗೆಯಲ್ಲಿ ದನ ಕರುಗಳ ಕುಡಿಯುವ ನೀರಿಗಾಗಿ ಕೆರೆ ಕಟ್ಟೆಗಳನ್ನು ತುಂಬಿಸಲು, ಕೂಡಲೇ ನಾಲೆಗಳಿಗೆ ನೀರು ಹರಿಸಬೇಕು.ಕೃಷಿ ಪಂಪ್ ಸೆಟ್ ಗಳಿಗೆ ಬೆಳಿಗ್ಗೆ 6 ರಿಂದ ಸಂಜೆ 6 ರವರಗೆ ಹಗಲು ವೇಳೆ ಸಮರ್ಪಕ ವಿದ್ಯುತ್ ನೀಡಬೇಕು. ಕಾಡುಪ್ರಾಣಿಗಳ ದಾಳಿಯಿಂದ ರೈತರು ಭಯ ಬೀತರಾಗಿರುವ ಕಾರಣ ಹಗಲು ವೇಳೆ ವಿದ್ಯುತ್ ನೀಡಬೇಕು ಸೇರಿದಂತೆ ಹಲವು ಬೇಡಿಕೆಗಳನ್ನ ಈಡೇರಿಸುವಂತೆ ಒತ್ತಾಯಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ , ಹತ್ತಳ್ಳಿ ದೇವರಾಜ್, ಬರಡನಪುರ ನಾಗರಾಜ್, ಲಕ್ಷ್ಮಿಪುರ ವೆಂಕಟೇಶ್,ಕಾಟೂರು ಮಹದೇವಸ್ವಾಮಿ ಉಪಸ್ಥಿತರಿದ್ದರು…

Spread the love

Related post

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…
ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ…

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಎಚ್.ವಿ. ರಾಘವೇಂದ್ರ ಅವರ…
ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್… ಮೈಸೂರು,ಜೂ30,Tv10 ಕನ್ನಡ ಪ್ರೀತಿಸಿ ಮದುವೆಯಾದ ವಿವಾಹಿತೆಯನ್ನ ಮೂವರು ವ್ಯಕ್ತಿಗಳು ಕಿಡ್ನಾಪ್ ಮಾಡಿ ರಾಮನಗರದ ಮನೆಯೊಂದರಲ್ಲಿ ಅಕ್ರಮವಾಗಿ ಬಂಧನದಲ್ಲಿಟ್ಟ ಘಟನೆ…

Leave a Reply

Your email address will not be published. Required fields are marked *