ಮತಗಟ್ಟೆಗಳ ಮೂಲಭೂತ ವ್ಯವಸ್ಥೆಗಳನ್ನು ಪರಿಶೀಲಿಸಿ: ಡಾ: ಹೆಚ್ ಎನ್ ಗೋಪಾಲಕೃಷ್ಣ

ಮತಗಟ್ಟೆಗಳ ಮೂಲಭೂತ ವ್ಯವಸ್ಥೆಗಳನ್ನು ಪರಿಶೀಲಿಸಿ: ಡಾ: ಹೆಚ್ ಎನ್ ಗೋಪಾಲಕೃಷ್ಣ

ಮತಗಟ್ಟೆಗಳ ಮೂಲಭೂತ ವ್ಯವಸ್ಥೆಗಳನ್ನು ಪರಿಶೀಲಿಸಿ: ಡಾ: ಹೆಚ್ ಎನ್ ಗೋಪಾಲಕೃಷ್ಣ

ಮಂಡ್ಯ,ಫೆ,28:-ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ಕ್ಕೆ ಸಂಬಂಧಿಸಿದಂತೆ ಚುನಾವಣಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿರುವ ಮತಗಟ್ಟೆಗಳಿಗೆ ಭೇಟಿ ನೀಡಿ ಮೂಲಭೂತ ವ್ಯವಸ್ಥೆಗಳನ್ನು ಪರಿಶೀಲಿಸುವಂತೆ ಮಂಡ್ಯ ಜಿಲ್ಲಾಧಿಕಾರಿ ಡಾ: ಹೆಚ್.ಎನ್ ಗೋಪಾಲಕೃಷ್ಣ ಅವರು ತಿಳಿಸಿದರು.

ಅವರು ಇಂದು ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ಬಹಳಷ್ಟು ಮತಗಟ್ಟೆಗಳು ಶಾಲೆ ಹಾಗೂ ಅಂಗನವಾಡಿಗಳಲ್ಲಿ ಇದೆ. ಮತಗಟ್ಟೆಗಳಲ್ಲಿ ಮತದಾನದ ಕೆಲಸಕ್ಕಾಗಿ ಟೇಬಲ್, ಚೇರ್, ವಿದ್ಯುತ್ ದೀಪಗಳು, ಶೌಚಾಲಯದ ವ್ಯವಸ್ಥೆ, ನೀರಿನ ವ್ಯವಸ್ಥೆ ಗಳನ್ನು ಪರಿಶೀಲಿಸಿ ಸಣ್ಣ ಪುಟ್ಟ ರಿಪೇರಿಗಳಿದ್ದಲ್ಲಿ ಶಿಕ್ಷಣ ಇಲಾಖೆ ಹಾಗೂ ಮಹಿಳಾ ಹಾಗೂ ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಗಮನಕ್ಕೆ ತಂದು ಸರಿಪಡಿಸಿಕೊಳ್ಳಿ. ಮತದಾನದ ದಿನದಂದು ಗ್ರಾಮ ಪಂಚಾಯಿತಿ ಕಚೇರಿಯಿಂದ ಕುಡಿಯುವ ನೀರಿನ ವ್ಯವಸ್ಥೆ ಮಾಡಿ

ಮತಗಟ್ಟೆಗಳಲ್ಲಿ ನೆರಳಿನ ವ್ಯವಸ್ಥೆ ಇಲ್ಲದಿದ್ದರೆ ಶ್ಯಾಮಿಯಾನದ ವ್ಯವಸ್ಥೆ ಮಾಡಬೇಕು. ಶಾಲೆಗಳಲ್ಲಿರುವ ಬೆಂಚ್ ಗಳನ್ನು ಸರಣಿ ಸಾಲಿನಲ್ಲಿ ಜೋಡಿಸಿದರೆ ಮತದಾರರು ಕುಳಿತುಕೊಳ್ಳಲು ಸಹಾಯವಾಗುತ್ತದೆ ಎಂದರು.

ಮತಗಟ್ಟೆ ವ್ಯಾಪ್ತಿಯಲ್ಲಿ ಬರುವ ವಿಕಲಚೇತನರಿಗೆ ರ್ಯಾಂಪ್ ವ್ಯವಸ್ಥೆ , ವೀಲ್ ಚೇರ್, ಮ್ಯಾಗ್ನಿಫೈಯಿಂಗ್ ಗ್ಲಾಸ್ ಸೇರಿದಂತೆ ಇನ್ನಿತರೆ ವ್ಯವಸ್ಥೆಯ ಬಗ್ಗೆ ವರದಿ ನೀಡುವಂತೆ ತಿಳಿಸಿದರು.

2018 ರ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಕಡಿಮೆ ಮತದಾನವಾಗಿರುವ ಮತಗಟ್ಟೆಗಳಿಗೆ ಭೇಟಿ ನೀಡಿ ಕಾರಣ ತಿಳಿದುಕೊಂಡು, ಹೆಚ್ಚು ಸ್ವೀಪ್ ಚಟುವಟಿಕೆಗಳನ್ನು ಆಯೋಜಿಸಿ ಮತದಾನದ ಪ್ರಮಾಣವನ್ನು ಹೆಚ್ಚಿಸಿ ಎಂದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ಯತೀಶ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಾಂತ ಎಲ್ ಹುಲ್ಮನಿ, ಅಪರ ಜಿಲ್ಲಾಧಿಕಾರಿ ಡಾ: ಹೆಚ್.ಎಲ್ ನಾಗರಾಜು, ಜಿ.ಪಂ.ಉಪ ಕಾರ್ಯದರ್ಶಿ ಸಂಜೀವಪ್ಪ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Spread the love

Related post

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…
ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…

Leave a Reply

Your email address will not be published. Required fields are marked *