ಕೆಆರ್ ಪೇಟೆಯಲ್ಲಿ 28.50 ಕೋಟಿ ವೆಚ್ಚದ ತಾಯಿ ಮಕ್ಕಳ ಆಸ್ಪತ್ರೆಗೆ ಶಂಕುಸ್ಥಾಪನೆ

ಕೆಆರ್ ಪೇಟೆಯಲ್ಲಿ 28.50 ಕೋಟಿ ವೆಚ್ಚದ ತಾಯಿ ಮಕ್ಕಳ ಆಸ್ಪತ್ರೆಗೆ ಶಂಕುಸ್ಥಾಪನೆ

ಮಂಡ್ಯ: ಕೆಆರ್ ಪೇಟೆಯಲ್ಲಿ 28.50 ಕೋಟಿ ವೆಚ್ಚದಲ್ಲಿ 50 ಹಾಸಿಗೆಗಳ ತಾಯಿ-ಮಕ್ಕಳ ಆಸ್ಪತ್ರೆ ನಿರ್ಮಾಣಕ್ಕೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಶಂಕುಸ್ಥಾಪನೆ ನೆರವೇರಿಸಿದರು.

ಕೃಷ್ಣರಾಜಪೇಟೆ ತಾಲೂಕಿನ ಜನರ ಬಹುದಿನದ ಬೇಡಿಕೆ ತಾಯಿ ಮಕ್ಕಳ ಆಸ್ಪತ್ರೆ ನಿರ್ಮಾಣಕ್ಕೆ ಇಂದು ಗುದ್ದಲಿ ಪೂಜೆ ನೆರವೇರಿಸಲಾಗಿದೆ.

ಕೆಆರ್ ಪೇಟೆ ಕ್ಷೇತ್ರದ ಜನರ ಬಹು ಬೇಡಿಕೆಯಂತೆ 28.50 ಕೋಟಿ ವೆಚ್ಚದಲ್ಲಿ 50 ಹಾಸಿಗೆಗಳ ತಾಯಿ ಮಕ್ಕಳ ಆಸ್ಪತ್ರೆ ನಿರ್ಮಾಣಕ್ಕೆ ಇಂದು ಗುದ್ದಲಿ ಪೂಜೆ ನೆರವೇರಿಸಲಾಗಿದೆ. ತ್ವರಿತಗತಿಯಲ್ಲಿ ಆಸ್ಪತ್ರೆ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಿ, ತಾಯಿ ಮಕ್ಕಳ ಚಿಕಿತ್ಸೆಗೆ ಮುಕ್ತಗೊಳಿಸಲಾಗುತ್ತದೆ ಎಂದು ಸಚಿವ ಡಾ. ನಾರಾಯಣಗೌಡ ಅವರು ತಿಳಿಸಿದ್ದಾರೆ.

ಕೆಆರ್ ಪೇಟೆಯಲ್ಲಿ ತಾಯಿ ಮಕ್ಕಳ ಆಸ್ಪತ್ರೆ ಅಗತ್ಯವಿತ್ತು. ಕೆಆರ್ ಪೇಟೆ ತಾಲೂಕು ಆಸ್ಪತ್ರೆಯಲ್ಲಿ ಪ್ರತಿವರ್ಷ ಸುಮಾರು 500 ಕ್ಕೂ ಹೆಚ್ಚು ಹೆರಿಗೆಗಳಾಗುತ್ತಿದ್ದರಿಂದ ಹಲವು ಸಲ ಮಂಡ್ಯ, ಮೈಸೂರು, ಹಾಸನಕ್ಕೆ ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತಿತ್ತು. ಇದರಿಂದ ಸಾರ್ವಜನಿಕರಿಗೆ ಸಮಸ್ಯೆ ಆಗುತ್ತಿರುವುದನ್ನು ಮನಗಂಡಿದ್ದ ಸಚಿವ ಡಾ.ನಾರಾಯಣಗೌಡ ಅವರು, ಉಪ ಚುನಾವಣೆ ಸಂದರ್ಭದಲ್ಲಿ ತಾಯಿ ಮಕ್ಕಳ ಆಸ್ಪತ್ರೆ ನಿರ್ಮಿಸುವುದಾಗಿ ಭರವಸೆ ನೀಡಿದ್ದರು. ಅದರಂತೆ, ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ತಾಯಿ ಮಕ್ಕಳ ಆಸ್ಪತ್ರೆಗೆ ಒಪ್ಪಿಗೆ ಪಡೆದಿದ್ದರು. ಆಸ್ಪತ್ರೆಗೆ 28.50 ಕೋಟಿ ಅನುದಾನ ಪಡೆದಿದ್ದರು.

Spread the love

Related post

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…
ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…

Leave a Reply

Your email address will not be published. Required fields are marked *