ಹಾಡುಹಗಲ್ಲೇ ಯುವಕನ ಭೀಕರ ಕೊಲೆ…ಆರೋಪಿ ಅಂದರ್…

ಹಾಡುಹಗಲ್ಲೇ ಯುವಕನ ಭೀಕರ ಕೊಲೆ…ಆರೋಪಿ ಅಂದರ್…

ನಂಜನಗೂಡು,ಮಾ5,Tv10 ಕನ್ನಡ
ಹಾಡುಹಗಲೇ ಯುವಕನನ್ನ
ಮಚ್ಚಿನಿಂದ ಕೊಚ್ಚಿ ಭೀಕರವಾಗಿ ಕೊಂದ ಘಟನೆ ನಂಜನಗೂಡು ತಾಲೂಕಿನ ಹೆಡಿಯಾಲ ಗ್ರಾಮದಲ್ಲಿ ನಡೆದಿದೆ.ಕೊಲೆ ಮಾಡಿದ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ.
ಗ್ರಾಮದ ಗ್ರಾಮ ಪಂಚಾಯಿತಿ ಮುಂಭಾಗದಲ್ಲಿ ಘಟನೆ ನಡೆದಿದೆ.
ಮಹೇಶ್ (27) ಕೊಲೆಯಾದ ಯುವಕ.
ಗಿರೀಶ್ ಕೊಲೆ ಮಾಡಿದ ಆರೋಪಿ.ಮಹೇಶ್ ಆಟೋದಲ್ಲಿ ಕುಳಿತ್ತಿದ್ದಾಗ ಗಿರೀಶ್ ದಾಳಿ ಮಾಡಿ ಮಚ್ಚಿನಿಂದ ಹಲ್ಲೆ ನಡೆಸಿ ತಲೆಗೆ ಬಲವಾಗಿ ಹೊಡೆದು ಗಿರೀಶ್ ಪರಾರಿಯಾಗಿದ್ದಾನೆ.
ತೀವ್ರ ರಕ್ತಸ್ರಾವದಿಂದ ನರಳಾಡುತ್ತಿದ್ದ ಮಹೇಶ್‌ನನ್ನ ಕೂಡಲೇ ಮೈಸೂರಿನ ಆಸ್ಪತ್ರೆ ದಾಖಲಿಸಲಾಗಿತ್ತು.
ಚಿಕಿತ್ಸೆ ಫಲಕಾರಿಯಾಗಿದೆ ಮಹೇಶ್ ಮೃತಪಟ್ಟಿದ್ದಾನೆ.
ಮಹೇಶ್ ಹೋಟೆಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ.
ಅದೇ ಗ್ರಾಮದಲ್ಲಿ ಆರೋಪಿ ಗಿರೀಶ್ ಕೂಡ ಕಟಿಂಗ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.
ತಕ್ಷಣ ಮಾಹಿತಿ ತಿಳಿದ ಹುಲ್ಲಹಳ್ಳಿ ಪೊಲೀಸರು ಹಾಗೂ ಡಿವೈಎಸ್ಪಿ ಗೋವಿಂದರಾಜು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಆರೋಪಿ ಗಿರೀಶ್ ನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಇನ್ನೂ ಕೊಲೆ ನಿಖರವಾದ ಕಾರಣ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್, ವೃತ ನಿರೀಕ್ಷಕ ಚಂದ್ರಶೇಖರ್, ಹುಲ್ಲಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ರಮೇಶ್ ಕರಕಿ ಕಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಸಂಬಂಧ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…
ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…

Leave a Reply

Your email address will not be published. Required fields are marked *