ಮೂಕಸ್ಪಂದನಾ ಜಾಗೃತಿ ಅಭಿಯಾನ…ಪ್ರಾಣಿ ಪಕ್ಷಿಗಳ ರಕ್ಷಣೆಗೆ ಮುಂದಾದ ಸಂಸ್ಥೆಗಳು…

ಮೂಕಸ್ಪಂದನಾ ಜಾಗೃತಿ ಅಭಿಯಾನ…ಪ್ರಾಣಿ ಪಕ್ಷಿಗಳ ರಕ್ಷಣೆಗೆ ಮುಂದಾದ ಸಂಸ್ಥೆಗಳು…

ಮೈಸೂರು,ಮಾ6,Tv10 ಕನ್ನಡ
ಬೇಸಿಗೆ ಶುರುವಾದ ಬೆನ್ನಹಿಂದೆಯೇ ಮೂಕಪ್ರಾಣಿಗಳ ನೆರವಿಗೆ ಕೆಎಂಪಿಕೆ ಟ್ರಸ್ಟ್ ಹಾಗೂ ಜೀವಧಾರಾ ರಕ್ತನಿಧಿ ಕೇಂದ್ರ ಧಾವಿಸಿದೆ.ಮೂಕ ಪ್ರಾಣಿಗಳ ರಕ್ಷಣೆಗಾಗಿ ಜಾಗೃತಿ ಅಭಿಯಾನ ಕೈಗೊಂಡಿದೆ.ಪ್ರಾಣಿ ಪಕ್ಷಿಗಳಿಗೆ ಕುಡಿಯುವ ನೀರು ಒದಗಿಸುವ ಅಭಿಯಾನ ಇದಾಗಿದೆ.ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಮುಂಭಾಗ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ.ನೀರಿನ ತೊಟ್ಟಿಗಳಲ್ಲಿ ನೀರು ತುಂಬಿಸುವ ಹಾಗೂ ಸಾರ್ವಜನಿಕರಿಗೆ ನೀರಿನ ತೊಟ್ಟಿಗಳನ್ನ ಮತ್ತು ಆಹಾರದ ಬಟ್ಟಲುಗಳನ್ನ ವಿತರಿಸುವ ಮೂಲಕ ಮೇಯರ್ ಶಿವಕುಮಾರ್ ಚಾಲನೆ ನೀಡಿದ್ದಾರೆ.ಇದೇ ವೇಳೆ ಮಾತನಾಡಿ.ಕಾಲ
ಬದಲಾವಣೆ ಜಗದ ನಿಯಮ ಅದಕ್ಕೆ ಹೊಂದಿಕೊಂಡು‌‌ ಜೀವಿಸುವುದು ಪ್ರತಿಯೊಬ್ಬರ ಕರ್ತವ್ಯ, ಮನುಷ್ಯ ಪ್ರತಿಯೊಂದಕ್ಕೂ ಪರಿಸರದ ಮೇಲೆ ಅವಲಂಬಿತನಾಗುತ್ತಾನೆ ಆದರೆ ಪ್ರಾಣಿಪಕ್ಷಿಗಳ ಪರಿಸರ ಉಳಿಸುವ ಸೇವಾಮನೋಭಾವ ಬೆಳಸಿಕೊಳ್ಳಬೇಕು, ಹೆಚ್ಚು ಸಸಿಗಳನ್ನು ನೆಡಲು ಮುಂದಾದರೆ ಪ್ರಾಣಿಪಕ್ಷಿಗಳ ರಕ್ಷಣೆಯಾಗುತ್ತದೆ, ಭವಿಷ್ಯದ ಪರಿಸರ ಸಂರಕ್ಷಣೆಯ ಪರಿಕಲ್ಪನೆಯ ನಿಟ್ಟಿನಲ್ಲಿ ಮೈಸೂರು ಅರಸರು ಮೃಗಾಲಯ ಕುಕ್ಕರಹಳ್ಳಿ ಕೆರೆ ಕಾರಂಜಿ ಕೆರೆ ಮಾದರಿ ಬಡಾವಣೆಗಳ ಉದ್ಯಾನವನಗಳನ್ನು ನಿರ್ಮಿಸಿದ್ದಾರೆ ಅದನ್ನು ಉಳಿಸಿಕೊಂಡು ಹೋಗುವುದು ಮೈಸೂರಿಗರ ಕರ್ತವ್ಯ ಎಂದು ಕರೆ ನೀಡಿದರು.

ಅಭಿಯಾನದಲ್ಲಿ ಭಾಗವಹಿಸಿದ ಮೂಡ ಮಾಜಿ ಅಧ್ಯಕ್ಷ ಹೆಚ್.ವಿ ರಾಜೀವ್ ರವರು ಮಾತನಾಡಿ ಸಮಾರು ವರ್ಷಗಳ ಹಿಂದೆ ಮೈಸೂರಿನ ಮನೆಗಳ ಮುಂದೆ ಹಸುಕರು ಮೂಕ‌ ಪ್ರಾಣಿ ಪಕ್ಷಿಗಳು ನೀರು ಕುಡಿಯಲು ಕಲ್ಲಿನ ನೀರಿನ ತೊಟ್ಟಿಯನ್ನು ನಿರ್ಮಿಸಲಾಗುತ್ತಿತ್ತು, ಪಶು ಪಕ್ಷಿಗಳು ಆನಂದದಿಂದ ನೀರು ಕುಡಿದು ತಣಿವಾರಿಸಿಕೊಳ್ಳುತ್ತಿದ್ದವು , ಆದರೆ ಈ ದಿನಗಳಲ್ಲಿ ಅವೆಲ್ಲವೂ ಕಣ್ಮರೆಯಾಗಿರುವುದು ವಿಷಾದನೀಯ,
ನಿಸರ್ಗದಲ್ಲಿ ಪಶು ಪಕ್ಷಿ ಜಲಚರಗಳ ಹಿರಿತನದಲ್ಲಿ ಮಾನವ ಇತ್ತೀಚಿನ ಸಂಕುಲ ತನ್ನ ಕ್ಷೇಮಕ್ಕಾಗಿ ಬಡಾವಣೆಗಳನ್ನು ನಿರ್ಮಿಸಿ ಕೊಂಡು ಕೆರೆ ಕಟ್ಟೆ ಗಳನ್ನು ಮುಚ್ಚಿ ವೃಕ್ಷಗಳನ್ನು ಕಡಿದು ಅಮಾಯಕ್ಕೆ ಮೂಕ ಜೀವಿಗಳಿಗೆ ನೀರು ನೆರಳಿಲ್ಲದಂತೆ ಮಾಡಿರುವುದು ದುರಂತ. ಈ ನಿಟ್ಟಿನಲ್ಲಿ ಮಾನವೀಯತೆ ದೃಷ್ಟಿಕೋನದಿಂದ ನಾಗರೀಕರು ಈ ಬೇಸಿಗೆಯ ಧಗೆಯನ್ನು ನೀಗಿಸಲು ಮೂಕಪ್ರಾಣಿಗಳಿಗೆ ನೀರು ಆಹಾರವನ್ನು ನೀಡಿ ಸಕಲ ಜೀವರಾಶಿಗಳನ್ನು ಕಾಪಾಡಲು ಮುಂದಾಗಬೇಕೆಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಕೇಂದ್ರ ಪ್ರಾಣಿಗಳ ಕಲ್ಯಾಣ ಮಂಡಳಿಯ ರಾಜ್ಯ ಚೇರ್ಮನ್ ಮಿತ್ತಲ್, ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಡಿ ಟಿ ಪ್ರಕಾಶ್, ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾದ ಹೇಮ ನಂದೀಶ್,ಆಯುರ್ ಪೋರ್ಟ್ ವೆಲ್ ನೈಸ್ ವ್ಯವಸ್ಥಾಪಕ ನಿರ್ದೇಶಕ ಭರತ್ ರಾಜ್,ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಕಡಕೋಳ ಜಗದೀಶ್, ಕೆ ಎಂ ಪಿ ಕೆ ಟ್ರಸ್ಟ್ ಅಧ್ಯಕ್ಷರಾದ ವಿಕ್ರಮ ಅಯ್ಯಂಗಾರ್, ಪರಿಸರ ಸ್ನೇಹಿ ತಂಡದ ಅಧ್ಯಕ್ಷ ಲೋಹಿತ್,
ಸವಿತಾ ಘಾಟ್ಕೆ , ಅಜಯ್ ಶಾಸ್ತ್ರಿ, ರವಿಶಂಕರ್, ಜಿ ರಾಘವೇಂದ್ರ, ರಾಕೇಶ್, ಸುಚೇಂದ್ರ ,ಚಕ್ರಪಾಣಿ, ಎಸ್ ಎನ್ ರಾಜೇಶ್, ಮೋಹನ್ ಕುಮಾರ್ ಗೌಡ, ರವಿಚಂದ್ರ, ರಂಗನಾಥ್, ಟಿ ಎಸ್ ಅರುಣ್, ರಾಜಗೋಪಾಲ್, ನವೀನ್, ಸುರೇಶ್ ಗೋಲ್ಡ್, ಮೈ ಲಾ ವಿಜಯ್ ಕುಮಾರ್, ಆನಂದ್, ಲಿಂಗರಾಜು, ಜೀವನ್, ವಾಸುದೇವಮೂರ್ತಿ,ಹಾಗೂ ಇನ್ನಿತರರು ಭಾಗಿಯಾಗಿದ್ದರು…

Spread the love

Related post

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…
ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…

Leave a Reply

Your email address will not be published. Required fields are marked *