ಮಾರ್ಚ್ 10 ರಂದು ಜಿಲ್ಲೆಯಲ್ಲಿ ಜಿಲ್ಲಾ ಯುವ ಉತ್ಸವ :ಡಾ.ಹೆಚ್.ಎನ್.ಗೋಪಾಲಕೃಷ್ಣ

ನೆಹರು ಯುವ ಕೇಂದ್ರ ವತಿಯಿಂದ ಜಿಲ್ಲಾ ಯುವ ಉತ್ಸವ ಕಾರ್ಯಕ್ರಮವನ್ನು ಮಾರ್ಚ್ 10 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಕರ್ನಾಟಕ ಸಂಘದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಹೆಚ್.ಎನ್.ಗೋಪಾಲಕೃಷ್ಣ ರವರು ತಿಳಿಸಿದರು.

ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಭಾಷಣ ಸ್ಪರ್ಧೆ, ಯುವ ಬರಹಗಾರರ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ, ಛಾಯಾಗ್ರಹಣ ಸ್ಪರ್ಧೆ ಹಾಗೂ ಗುಂಪು ಸ್ಪರ್ಧೆಯಾಗಿ ಸಾಂಸ್ಕೃತಿಕ ಜಾನಪದ ನೃತ್ಯ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ ಈ ಸ್ಪರ್ಧೆಯಲ್ಲಿ ಎಲ್ಲಾ ಶಾಲಾ- ಕಾಲೇಜಿನ ವಿದ್ಯಾರ್ಥಿಗಳಿಗೆ ಮುಕ್ತ ಅವಕಾಶವನ್ನು ಕಲ್ಪಿಸಲಾಗಿದೆ. ವಿಧ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.

ನೆಹರು ಯುವಕೇಂದ್ರವು ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಸರ್ಕಾರದ ನಿರ್ದೇಶನದಂತೆ ಜಿಲ್ಲೆಯಲ್ಲಿ ಜಿಲ್ಲಾಮಟ್ಟದ ಭಾರತ ಸರ್ಕಾರದ ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯದ ವತಿಯಿಂದ ಭಾರತ ಸ್ವಾತಂತ್ರ‍್ಯ 75ನೇ ಅಮೃತ ಮಹೋತ್ಸವದ ಅಂಗವಾಗಿ ಈ ಕಾರ್ಯಕ್ರಮವನ್ನು ಯುವ ಜನರಿಗಾಗಿ ಆಯೋಜನೆ ಮಾಡಿದೆ ಎಂದು ತಿಳಿಸಿದರು.

ಈ ಸಭೆಯಲ್ಲಿ ಜಿಲ್ಲಾ ಯುವ ಅಧಿಕಾರಿ ಕೆ ರಾಜೇಶ್ ಕಾರಂತ್, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಎನ್.ಆರ್ ವೇಣುಗೋಪಾಲ್, ನವೋದಯ ಶಾಲೆಯ ಪ್ರಾಂಶುಪಾಲ ಉಮಾಪತಿ ರೆಡ್ಡಿ, ಎನ್.ಎಸ್.ಎಸ್ ನ ನೋಡಲ್ ಅಧಿಕಾರಿಗಳಾದ ಕೆಂಪಮ್ಮ, ಪ್ರೊ. ಭಾಗ್ಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧೀಕ್ಷಕರಾದ ನಾಗಭೂಷಣ, ಕೇಂದ್ರೀಯ ವಿದ್ಯಾಲಯದ ರಾಘವೇಂದ್ರ, ಜಿಲ್ಲೆ ಏಡ್ಸ್ ನಿಯಂತ್ರಣಾಧಿಕಾರಿಯಾದ ಡಾ. ಆಶಾಲತಾ, ಸ್ಕೌಟ್ಸ್ ಅಂಡ್ ಗೈಡ್ಸ್ ನ ಅಧಿಕಾರಿಗಳಾದ ವರಪ್ರಸಾದ್ ಹಾಗೂ ಭಾರತ ಸೇವಾ ದಳದ ಮುಖ್ಯಸ್ಥರಾದ ಉಶಾರಾಣಿ ಹಾಗೂ ಇನ್ನಿತರರಿದ್ದರು.

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *