ಮೈಸೂರು ಪಡುವಾರಹಳ್ಳಿ ವಾಲ್ಮೀಕಿ ರಸ್ತೆಯಲ್ಲಿರುವ ಲೀಲಾ ಚನ್ನಯ್ಯ ಕಲ್ಯಾಣ ಮಂಟಪದಲ್ಲಿ ನಡೆದ ಭಾರತೀಯ ಜನತಾ ಪಾರ್ಟಿ ಚಾಮರಾಜ ವಿಧಾನ ಸಭಾ ಕ್ಷೇತ್ರದ ಮಹಿಳಾ ಮೋರ್ಚಾ ಮಹಾಶಕ್ತಿ ಕೇಂದ್ರದ ಸಮಿತಿ ಹಾಗೂ ಬೂತ್ ಸಮಿತಿ ಅಧ್ಯಕ್ಷರ ನೇಮಕಾತಿ ಸಭೆ, ಚಾಮರಾಜ ಕ್ಷೇತ್ರದ ಶಾಸಕರಾದ
- TV10 Kannada Exclusive
- March 9, 2023
- No Comment
- 124
ಮೈಸೂರು ಪಡುವಾರಹಳ್ಳಿ ವಾಲ್ಮೀಕಿ ರಸ್ತೆಯಲ್ಲಿರುವ ಲೀಲಾ ಚನ್ನಯ್ಯ ಕಲ್ಯಾಣ ಮಂಟಪದಲ್ಲಿ ನಡೆದ ಭಾರತೀಯ ಜನತಾ ಪಾರ್ಟಿ ಚಾಮರಾಜ ವಿಧಾನ ಸಭಾ ಕ್ಷೇತ್ರದ ಮಹಿಳಾ ಮೋರ್ಚಾ ಮಹಾಶಕ್ತಿ ಕೇಂದ್ರದ ಸಮಿತಿ ಹಾಗೂ ಬೂತ್ ಸಮಿತಿ ಅಧ್ಯಕ್ಷರ ನೇಮಕಾತಿ ಸಭೆ, ಚಾಮರಾಜ ಕ್ಷೇತ್ರದ ಶಾಸಕರಾದ ಶ್ರೀ ಎಲ್,ನಾಗೇಂದ್ರ ರವರು ಭಾಗವಹಿಸಿ ಮುಂದಿನ ಚುನಾವಣೆಯ ರೂಪುರೇಷೆಗಳು ಹಾಗೂ ಮಹಾಶಕ್ತಿ ಕೇಂದ್ರ ಮತ್ತು ಬೂತ್ ಸಮಿತಿ ಅಧ್ಯಕ್ಷರ ಜವಾಬ್ದಾರಿಗಳು ಕೆಲಸ ನಿರ್ವಹಿಸಬೇಕಾದ ಕರ್ತವ್ಯಗಳ ಕುರಿತಂತೆ ಚರ್ಚಿಸಿದರು, ಕೇಂದ್ರ ಸರ್ಕಾರದ ಯೋಜನೆಗಳು, ರಾಜ್ಯ ಸರ್ಕಾರದ ಯೋಜನೆಗಳು, ಅಭಿವೃದ್ದಿ ಕಾರ್ಯಗಳ ಕುರಿತಂತೆ ಸಾರ್ವಜನಿಕರಿಗೆ ತಿಳುವಳಿಕೆ ಮೂಡಿಸಬೇಕು, ಮುಂದಿನ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಗೆಲುವಿಗೆ ಶ್ರಮಿಸುವಂತೆ ಸೂಚನೆ ನೀಡಿದರು. ಈ ಸಮಾವೇಶದ ಅಧ್ಯಕ್ಷತೆಯನ್ನು ಚಾಮರಾಜ ಕ್ಷೇತ್ರದ ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ರೀಮತಿ ತನುಜಾ ಮಹೇಶ್ ವಹಿಸಿದ್ದರು.
ಈ ಸಮಾವೇಶದಲ್ಲಿ ಮೈಸೂರು ಮಹಾನಗರ ಪಾಲಿಕೆ ಮೇಯರ್ ಶ್ರೀ ಶಿವಕುಮಾರ್, ಮೈಸೂರು ನಗರ ಭಾಜಪ ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ರೀಮತಿ ಹೇಮ ನಂದೀಶ್, ನಗರ ಉಪಾಧ್ಯಕ್ಷರು ಹಾಗೂ ಮಹಿಳಾ ಮೋರ್ಚಾ ಉಸ್ತುವಾರಿ ಗೋಪಾಲರಾಜೆ ಅರಸ್, ಮಹಾನಗರ ಪಾಲಿಕೆ ಸದಸ್ಯರುಗಳಾದ ಶ್ರೀಮತಿ ವೇದಾವತಿ, ಪ್ರಮೀಳಾ ಭರತ್, ನಗರ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ, ನಾಗರತ್ನಗೌಡ, ಚಾಮರಾಜ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಲಲನಾ ಧನರಾಜ್ ಹಾಗೂ ಚಾಮರಾಜ ಬಿ.ಎಲ್.ಎ-1 ದಿನೇಶ್ ಗೌಡ, ಪ್ರಧಾನ ಕಾರ್ಯದರ್ಶಿಗಳಾದ ಪುನೀತ್, ರಮೇಶ್ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.