ಕೊ.ಆಪರೇಟಿವ್ ಬ್ಯಾಂಕ್ ಮ್ನಾನೇಜರ್ ಆತ್ಮಹತ್ಯೆ…ಐವರ ವಿರುದ್ದ ದೂರು ದಾಖಲು…

ಕೊ.ಆಪರೇಟಿವ್ ಬ್ಯಾಂಕ್ ಮ್ನಾನೇಜರ್ ಆತ್ಮಹತ್ಯೆ…ಐವರ ವಿರುದ್ದ ದೂರು ದಾಖಲು…

  • Crime
  • March 12, 2023
  • No Comment
  • 201

ಕೊ.ಆಪರೇಟಿವ್ ಬ್ಯಾಂಕ್ ಮ್ನಾನೇಜರ್ ಆತ್ಮಹತ್ಯೆ…ಐವರ ವಿರುದ್ದ ದೂರು ದಾಖಲು…

ಉಡುಪಿ,ಮಾ12,Tv10,ಕನ್ನಡ
ಉಡುಪಿ ಮಹಾಲಕ್ಷ್ಮಿ ಕೋ ಆಪರೇಟಿವ್ ಸೊಸೈಟಿಯ ಮ್ಯಾನೇಜರ್ ಸುಬ್ಬಣ್ಣ (50) ಎಂಬವರು ಲಾಡ್ಜ್ ಒಂದರಲ್ಲಿ ಡೆತ್ ನೋಟ್ ಬರೆದು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಂಕಿನ ಅಧ್ಯಕ್ಷ, ದ.ಕ. ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶ್ವಾಲ್ ಸುವರ್ಣ ಸೇರಿದಂತೆ ಐವರ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪರಿಶಿಷ್ಟ ಜಾತಿಗೆ ಸೇರಿದ ಸುಬ್ಬಣ್ಣ ಮಾ.8ರಂದು ರಾತ್ರಿ ವೇಳೆ ಮಲ್ಪೆಯ ರಾಜ್ ಮಹಲ್ ಲಾಡ್ಜ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೃತದೇಹದ ಬಳಿ ಡೆತ್ ನೋಟ್ ದೊರಕಿದ್ದು, ಸಾವಿಗೆ ಬ್ಯಾಂಕಿನ ಆಡಳಿತ ಮಂಡಳಿಯ ಒತ್ತಡ ಮೇಲಾಧಿಕಾರಿಯ ಅಸಹಕಾರ ಮತ್ತು ಸಾಲಗಾರನ ಮೋಸದ ನಡವಳಿಕೆ ಕಾರಣ ಎಂದು ದೂರಲಾಗಿದೆ.
ಬ್ಯಾಂಕಿನ ಅಧ್ಯಕ್ಷ ಯಶಪಾಲ್ ಸುವರ್ಣ, ಆಡಳಿತ ನಿರ್ದೇಶಕ ಜಗದೀಶ್ ಮೊಗವೀರ, ಮಾಜಿ ಆಡಳಿತ ನಿರ್ದೇಶಕ ಜೆ.ಕೆ ಸೀನ ಗಂಗೊಳ್ಳಿ, ಮ್ಯಾನೇಜರ್ ಸಾರಿಕಾ, ಸಾಲಗಾರ ರಿಯಾಝ್ ಎಂಬವರು ನೀಡಿದ ಮಾನಸಿಕ ಒತ್ತಡ ಹಾಗೂ ಬ್ಯಾಂಕಿನ ಆಡಳಿತ ಮಂಡಳಿ ಸಾಲ ವಸೂಲಾತಿಯನ್ನು ಮಾಡಿ ಕೊಡದಿದ್ದರೆ ನಿನ್ನ ಮನೆಯನ್ನಾದರೂ ಮಾರಿ ಬ್ಯಾಂಕಿನ ಸಾಲ ತೀರಿಸಬೇಕು. ಇಲ್ಲದಿದ್ದರೆ ನಿನ್ನ ಜೀವ ತೆಗೆಯುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಮೃತರ ಸಹೋದರ ಸುರೇಶ್ ಕೆ ದೂರಿನಲ್ಲಿ ತಿಳಿಸಿದ್ದಾರೆ.
ಈ ಸಾವಿನ ಬಗ್ಗೆ ಸಂಶಯ ಇದ್ದು, ಆದುದರಿಂದ ಆಡಳಿತ ಮಂಡಳಿ ಮತ್ತು ಸಾಲಗಾರನ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸಬೇಕು ಎಂದು ದೂರಿನಲ್ಲಿ ಒತ್ತಾಯಿಸಲಾಗಿದೆ. ಅದರಂತೆ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *