ಯುವಕ ಅನುಮಾನಾಸ್ಪದ ಸಾವು…ಅಂತ್ಯಕ್ರಿಯೆ ವೇಳೆ ದೇಹದ ಮೇಲೆ ಗಾಯಗಳು ಪತ್ತೆ…

ಯುವಕ ಅನುಮಾನಾಸ್ಪದ ಸಾವು…ಅಂತ್ಯಕ್ರಿಯೆ ವೇಳೆ ದೇಹದ ಮೇಲೆ ಗಾಯಗಳು ಪತ್ತೆ…

ಹುಣಸೂರು,ಮಾ14,Tv10 ಕನ್ನಡ
ಸಂಭಂಧಿಕರ ಹುಟ್ಟುಹಬ್ಬ ಕಾರ್ಯಕ್ರಮ ಮುಗಿಸಿ ಮನೆಗೆ ಬಂದು ಮಲಗಿದ ಯುವಕ ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಹುಣಸೂರು ತಾಲೂಕಿನ ಕಟ್ಟೆಮಳಲವಾಡಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.ವಿನಯ್ (22) ಮೃತ ದುರ್ದೈವಿ.ಅಂತ್ಯಕ್ರಿಯೆಗೆ ಸಿದ್ದಪಡಿಸುತ್ತಿದ್ದ ವೇಳೆ ವಿನಯ್ ದೇಹದ ಮೇಲೆ ಗಾಯದ ಗುರುತುಗಳು ಪತ್ತೆಯಾಗಿದೆ.ಪೋಷಕರು ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದು ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.

ಎರಡು ದಿನಗಳ ಹಿಂದೆ ಚಿಲಕುಂದ ಗ್ರಾಮದಲ್ಲಿ ಸಂಭಂಧಿಕರ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ವಿನಯ್ ಭಾಗವಹಿಸಿದ್ದ.ತನ್ನ ತಾಯಿ ಬಳಿ ಒಂದು ಸಾವಿರ ಪಡೆದು ತೆರಳಿದ್ದ ವಿನಯ್ ಸ್ನೇಹಿತರ ಜೊತೆ ಪಾರ್ಟಿ ಮಾಡಿದ್ದ.ರಾತ್ರಿ ಮನೆಗೆ ಹಿಂದಿರುಗಿದ ವಿನಯ್ ಬೆಳಿಗ್ಗೆ ಶವವಾಗಿದ್ದ.ಕತ್ತಿನಲ್ಲಿ ಸೀರೆ ಸುತ್ತಿಕೊಂಡಿದ್ದ ಸ್ಥತಿಯಲ್ಲಿ ವಿನಯ್ ಶವ ಪತ್ತೆಯಾಗಿತ್ತು.ಸಹಜ ಸಾವೆಂದು ತಿಳಿದ ಪೋಷಕರು ಅಂತ್ಯಕ್ರಿಯೆಗೆ ಸಿದ್ದತೆ ಮಾಡಿಕಡಿದ್ದರು.ಮೃತದೇಹಕ್ಕೆ ಸಂಪ್ರದಾಯವಾಗಿ ಸ್ನಾನ ಮಾಡಿಸುವ ವೇಳೆ ಬೆನ್ನಿನಲ್ಲಿ ಗಾಯದ ಗುರುತು ಪತ್ತೆಯಾಗಿದೆ.ಬಲಗಾಲಿನಲ್ಲಿ ಕಚ್ಚಿದ ಹಲ್ಲಿನ ಗುರುತು ಕಂಡು ಬಂದಿದೆ.ಕೂಡಲೇ ಎಚ್ಚೆತ್ತ ಪೋಷಕರು ಅನುಮಾನ ವ್ಯಕ್ತಪಡಿಸಿ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *