- March 18, 2023
ಸಮಸ್ಯೆ ಬಗೆಹರಿಸುವುದಕ್ಕೆ ಜಿಲ್ಲಾಡಳಿತ ಪ್ರಾಮಾಣಿಕ ಪ್ರಯತ್ನ ಮಾಡುತ್ತದೆ: ಜಿಲ್ಲಾಧಿಕಾರಿ ಡಾ.ಹೆಚ್ ಎನ್ ಗೋಪಾಲಕೃಷ್ಣ


ರೈತರಿಗೆ ಹತ್ತಿರವಿರುವ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಆರೋಗ್ಯ ಇಲಾಖೆ, ಪಶು ಸಂಗೋಪನೆ ಇಲಾಖೆಗಳಿಂದ ಸಿಗುವ ಸೌಲಭ್ಯಗಳ ಮಾಹಿತಿ ನೀಡಿ ಇಲಾಖೆಗಳು ಗ್ರಾಮಗಳಲ್ಲಿನ ಸಮಸ್ಯೆ ಬಗೆಹರಿಸುವುದಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಹೆಚ್ ಎನ್ ಗೋಪಾಲಕೃಷ್ಣ ಅವರು ತಿಳಿಸಿದರು.

ಅವರು ಇಂದು ಅಲಕರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮುದ್ದುಂಗೆರೆ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಮುಂದಿನ ಎರಡು ತಿಂಗಳು ಜಿಲ್ಲಾಡಳಿತಕ್ಕೆ ಚುನಾವಣೆ ಕೆಲಸವಿರುತ್ತದೆ. ಇದರ ಜೊತೆಗೆ ಸಾರ್ವಜನಿಕರ ಸಮಸ್ಯೆಯನ್ನು ಕಂದಾಯ ಇಲಾಖೆಯು ಪರಿಹರಿಸಲು ಪ್ರಯತ್ನಿಸುತ್ತದೆ ಎಂದರು.

ಪಿಕಪ್ ನಾಲೆಯ ರಸ್ತೆಗಳು ಹಾಗೂ ಸ್ಥಳೀಯ ಸಮಸ್ಯೆಗಳಿಗೆ ಸಂಬಂಧಿಸಿದಂತೆ ವಿವಿಧ ಇಲಾಖೆಯ ಅಧಿಕಾರಿಯೊಂದಿಗೆ ಸಂಪರ್ಕ ಸಾಧಿಸಿ ಸಾರ್ವಜನಿಕರು ಸಮಸ್ಯೆ ಬಗೆಹರಿಸಿಕೊಳ್ಳಿ ಎಂದರು.
ಆರೋಗ್ಯ ಇಲಾಖೆ ವತಿಯಿಂದ ಪ್ರತಿ ಕುಟುಂಬಕ್ಕೆ ಆಯುಷ್ಯನ್ ಅರೋಗ್ಯ ಕಾರ್ಡ್ ಮಾಡಿಕೊಡಲಾಗುವುದು. ಇದು ಸಂಪೂರ್ಣ ಉಚಿತವಾಗಿದ್ದು, ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಿ ಎಂದರು.
ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರುವುದನ್ನು ಖಚಿತಪಡಿಸಿಕೊಂಡು ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕು. ಮತದಾರರ ಪಟ್ಟಿಗೆ ಹೆಸರು ಸೇಪರ್ಡೆಗೆ ಹಾಗೂ ಬದಲಾವಣೆಗೆ ತಿಂಗಳ ಅಂತ್ಯದವರೆಗೂ ಕಲಾವಾಕಾಶವಿದೆ ಎಂದರು.
ಅಪರ ಜಿಲ್ಲಾಧಿಕಾರಿ ಡಾ. ಹೆಚ್ ಎಲ್ ನಾಗರಾಜ ಅವರು ಮಾತನಾಡಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮವು ವಿಶೇಷವಾಗಿ ಕಂದಾಯ ಇಲಾಖೆ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರ ಸಮಸ್ಯೆಯನ್ನು ಸ್ಥಳದಲ್ಲೇ ಪರಿಹರಿಸಲು ನಡೆಸಲಾಗುತ್ತಿದೆ ಎಂದರು.
ಫಲಾನುಭವಿಗಳಿಗೆ ಕಂದಾಯ ಇಲಾಖೆಯಿಂದ ಪಿಂಚಣಿ ವಿತರಣೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಗಭೀರ್ಣಿ ಸ್ತ್ರಿಯರಿಗೆ ಸೀಮಂತ ಕಾರ್ಯಕ್ರಮ, ತಾಯಿ ಕಾರ್ಡ್, ಸುಕನ್ಯ ಸಮೃದ್ಧಿ ಯೋಜನೆ ಆಯ್ಕೆ ಪತ್ರ, ವಿಶೇಷ ಚೇತನರಿಗೆ ಗುರುತಿನ ಚೀಟಿ, UDID ಕಾರ್ಡ್ ವಿತರಣೆ, ತೋಟಗಾರಿಕೆ ಇಲಾಖೆಯಿಂದ ರೈತರಿಗೆ ಟ್ರ್ಟೈ ವಿತರಣೆ, ಕೃಷಿ ಇಲಾಖೆಯಿಂದ ಮಣ್ಣಿನ ಆರೋಗ್ಯ ಕಾರ್ಡ್, ಕೀಟನಾಶಕ ಬ್ಯಾಟರಿ ಸ್ಪ್ರೇ ವಿತರಣೆ ಮಾಡಲಾಯಿತು.
ಪಿಕಪ್ ನಾಲೆ ಮಳೆ ಹಾನಿಗೊಳಗಾಗಿ ರಸ್ತೆ ದುರಸ್ತಿ ಆಗಿದೆ, ಊರಿನ ಹೊರಭಾಗದ ಜಮೀನಿಗೆ ಚರಂಡಿ ನೀರು ಹೋಗುವುದನ್ನ ತಡೆಗಟ್ಟಬೇಕು, ಸರ್ಕಾರಿ ಖರಾಬು ಜಮೀನನ್ನು ಗ್ರಾಮಕ್ಕೆ ನೀಡಬೇಕು, ಗದ್ದೆ ಬೈಲುಗಳ ರಸ್ತೆ ದುರಸ್ತಿ ನಿರ್ಮಾಣ ಸೇರಿದಂತೆ ಇನ್ನಿತರ ವಿಷಯಗಳ ಕುರಿತು ಗ್ರಾಮಸ್ಥರು ಜಿಲ್ಲಾಧಿಕಾರಿಗಳಿಗೆ ಪರಿಹಾರ ಕೋರಿ ಅರ್ಜಿ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಎಂ.ಬಾಬು, ತಹಶೀಲ್ದಾರ್ ವಿಜಯ್ ಕುಮಾರ್, ಅಲಕೆರೆ ಗ್ರಾಮ ಪಂಚಾಯತಿ ಅದ್ಯಕ್ಷೆ ರೇಣುಕಮ್ಮ, ತಾಲ್ಲೂಕು ಪಂಚಾಯತ ಇಒ ಎ.ಬಿ ವೇಣು, ಕೃಷಿ ಇಲಾಖೆ ಜಂಟಿ ನಿರ್ದೇಶಕ ಆರ್.ಆಶೋಕ್, ಕೌಶಾಲ್ಯಭಿವೃದ್ಧಿ ಇಲಾಖೆಯ ಎನ್.ಆರ್ ವೇಣುಗೋಪಾಲ ಸೇರಿದಂತೆ ಇನ್ನಿತರರು ಹಾಜರಿದ್ದರು.