ಪ್ರತಿಯೊಬ್ಬರಿಗೂ ಮತದಾನದ ಅರಿವು ಮುಖ್ಯ…ಜಿಲ್ಲಾಧಿಕಾರಿ ಡಾ. ಕೆ. ವಿ. ರಾಜೇಂದ್ರ…

ಪ್ರತಿಯೊಬ್ಬರಿಗೂ ಮತದಾನದ ಅರಿವು ಮುಖ್ಯ…ಜಿಲ್ಲಾಧಿಕಾರಿ ಡಾ. ಕೆ. ವಿ. ರಾಜೇಂದ್ರ…

  • Mysore
  • March 20, 2023
  • No Comment
  • 191

ಪ್ರತಿಯೊಬ್ಬರಿಗೂ ಮತದಾನದ ಅರಿವು ಮುಖ್ಯ…ಜಿಲ್ಲಾಧಿಕಾರಿ ಡಾ. ಕೆ. ವಿ. ರಾಜೇಂದ್ರ…

ಮೈಸೂರು,ಮಾರ್ಚ್ 20 ,Tv10 ಕನ್ನಡ
ಮತದಾನ ಮಾಡುವುದು ಪ್ರತಿಯೊಬ್ಬರ ಕರ್ತವ್ಯ. ಪ್ರತಿಯೊಂದು ಮತ ಒಂದು ದೇಶದ ಬೆಳೆವಣಿಗೆಗೆ ಉಪಯುಕ್ತವಾಗಿರುತ್ತದೆ.ಪ್ರತಿಯೊಬ್ಬರಲ್ಲಿಯೂ ಮತದಾನದ ಅರಿವು ಮೂಡಿಸುವುದು ಮುಖ್ಯ ಎಂದು ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಅವರು ತಿಳಿಸಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಮಹಾನಗರ ಪಾಲಿಕೆ ವತಿಯಿಂದ ಆಯೋಜಿಸಿದ್ದ ಚುನಾವಣೆಯ ಬಗ್ಗೆ ಅರಿವು ಮೂಡಿಸುವ ಕ್ಯಾಂಡಲ್ ಲೈಟ್ ಮಾರ್ಚ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಚುನಾವಣಾ ಸಂದರ್ಭದಲ್ಲಿ ಯಾರು ಕೂಡ ಹಣದ ಆಮಿಷಕ್ಕೆ ಸಿಲುಕಿ ನಿಮ್ಮ ಮತಗಳನ್ನು ನೀಡಬಾರದು. ಸಾರ್ವಜನಿಕರಲ್ಲಿ ಮತದಾನದ ಅರಿವನ್ನು ಮೂಡಿಸಿ ಉತ್ತಮ ಮತದಾನ ಪ್ರಕ್ರಿಯೆ ನಡೆಸಲು ಜಿಲ್ಲಾಡಳಿತದ ಜೊತೆ ಗೂಡಿ ಸಹಕರಿಸಿ ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಯ ಸಿಬ್ಬಂದಿ ವರ್ಗದವರು ಕ್ಯಾಂಡಲ್ ಹಚ್ಚುವುದರ ಮೂಲಕ ಮತದಾನ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಪ್ರತಿಯೊಬ್ಬರು ಮತದಾನದಲ್ಲಿ ಸಕ್ರಿಯವಾಗಿ ಪಾಲ್ಗೊಳುತ್ತೇವೆ ಎಂದು ತಿಳಿಸಿದರು .

ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತರಾದ ರಮೇಶ್ ಬಿ ಬಾನೋತ್ , ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಣಾಧಿಕಾರಿಗಳಾದ ಗಾಯತ್ರಿ ಹಾಗೂ ಮಹಾನಗರ ಪಾಲಿಕೆಯ ಆಯುಕ್ತರಾದ ಲಕ್ಷ್ಮಿಕಾಂತ್ ರೆಡ್ಡಿ , ಸ್ವೀಪ್ ಸಮಿತಿಯ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿ ವರ್ಗದವರು ಪಾಲ್ಗೊಂಡಿದ್ದರು…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *