
ಪುರಾಣ ಪ್ರಸಿದ್ಧ ವ್ಯಕ್ತಿಗಳ ತತ್ವಗಳು ಸ್ವಸ್ಥ ಸಮಾಜ ಕಟ್ಟುವುದಕ್ಕೆ ಅನುಕೂಲ: ಜಿಲ್ಲಾಧಿಕಾರಿ ಡಾ.ಹೆಚ್ ಎನ್ ಗೋಪಾಲಕೃಷ್ಣ
- TV10 Kannada Exclusive
- March 25, 2023
- No Comment
- 110
ಮಂಡ್ಯ,ಮಾ,25-ಪುರಾಣ ಪ್ರಸಿದ್ಧರನ್ನು ಸ್ಮರಿಸಿಕೊಂಡು, ಅವರ ಆಚಾರ, ವಿಚಾರ, ತತ್ವಗಳನ್ನು ಅಳವಡಿಸಿಕೊಂಡರೆ ನಾವು ಉತ್ತಮವಾದ ಸ್ವಸ್ಥ ಸಮಾಜವನ್ನು ಕಟ್ಟುವುದಕ್ಕೆ ಅನುಕೂಲವಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಹೆಚ್.ಎನ್ ಗೋಪಾಲಕೃಷ್ಣ ಅವರು ತಿಳಿಸಿದರು.
ಅವರು ಇಂದು ಕೆ .ವಿ ಶಂಕರಗೌಡ ಶತಮಾನೋತ್ಸವ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮಂಡ್ಯ ಜಿಲ್ಲಾ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಸಮಿತಿಯ ಸಂಯುಕ್ತಾಶ್ರಯದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.
ಸಮಾಜದಲ್ಲಿನ ಮಹಾಪುರುಷರು ಶಾಂತಿಯನ್ನು ಪಾಲಿಸಿ, ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳುವ ಬಗ್ಗೆ ಸಮಾಜದಲ್ಲಿ ಬೋಧನೆ ಮಾಡಿ ಉತ್ತಮ ಸಮಾಜ ಕಟ್ಟುವಲ್ಲಿ ದಿಟ್ಟ ಹೆಜ್ಜೆ ಇಟ್ಟರೂ ಎಂದರು.
ಇತ್ತೀಚಿನ ದಿನಗಳಲ್ಲಿ ಆಧುನಿಕತೆ ಹೆಸರಿನಲ್ಲಿ ಪುರಾಣ, ಪರಂಪರೆಯನ್ನು ಮರೆಯಬಾರದು. ನಾಡಿನ ಪರಂಪರೆ ಮರೆತರೆ ನಾಡಿನ ಸಂಸ್ಕೃತಿ ಉಳಿಯುವುದಿಲ್ಲ ಎಂದು ಹೇಳಿದರು.
ಅಪರ ಜಿಲ್ಲಾಧಿಕಾರಿ ಡಾ.ಹೆಚ್. ಎಲ್ ನಾಗಾರಾಜು ಅವರು ಮಾತನಾಡಿ ರೇಣುಕಾಚಾರ್ಯರು ಸಾವಿರಾರು ವರ್ಷಗಳ ಹಿಂದೆ ವೀರಶೈವ ಧರ್ಮ ಸ್ಥಾಪನೆ ಮಾಡಿ ಸಮಾಜದಲ್ಲಿ ಮನುಷ್ಯ-ಮನುಷ್ಯರ ನಡುವೆ ತಾರತಮ್ಯ ಹೊಗಲಾಡಿಸಿ ಮಾನವ ಧರ್ಮವನ್ನು ಎತ್ತಿಹಿಡಿದರು ಎಂದರು.
ಕಾರ್ಯಕ್ರಮದಲ್ಲಿ ಶ್ರೀದುರ್ದಂಡೇಶ್ವರ ಮಹಂತ ಶಿವಯೋಗಿ ಮಠದ ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮಿಗಳು, ಬಿ.ಜಿ ಪುರ ಹೊರಮಠದ ಚಂದ್ರಶೇಖರ ಸ್ವಾಮಿ, ಬಾಳೆಹೊನ್ನೂರು ಶಾಖಾಮಠದ ಶ್ರೀ ಗಂಗಾಧರ ಶಿವಾಚಾರ್ಯ ಸ್ವಾಮಿಗಳು, ಕದಂಬ ಜಂಗಮ ಮಠದ ರೇಣುಕಶಿವಾಚಾರ್ಯ ಸ್ವಾಮಿ, ಜಿಲ್ಲಾ, ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಾಂತ ಎಲ್ ಹುಲ್ಮನಿ, ಕನ್ನಡ ಮತ್ತು ಸಂಸ್ಕೃತಿಯ ಸಹಾಯಕ ನಿರ್ದೇಶಕ ಎನ್.ಉದಯಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತಿಯಿದ್ದರು.