
ಹುಟ್ಟೂರಲ್ಲಿ ನನ್ನ ಕೊನೆ ಚುನಾವಣೆ ಆಗಬೇಕೆಂಬ ಆಸೆ…ವರುಣಾ ಕ್ಷೇತ್ರದಿಂದ ಸ್ಪರ್ಧೆ ಕುರಿತು ಸಿದ್ದರಾಮಯ್ಯ ಸ್ಪಷ್ಟನೆ…
- MysorePolitics
- March 28, 2023
- No Comment
- 131
ಮೈಸೂರು,ಮಾ28,Tv10 ಕನ್ನಡ
ವರುಣಾ ಕ್ಷೇತ್ರದಲ್ಲಿ ಸ್ಪರ್ಧೆ ವಿಚಾರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ವರುಣಾ ಕ್ಷೇತ್ರದಿಂದ ಗೆದ್ದಾಗಲೇ ನಾನು ಸಿಎಂ ಆಗಿದ್ದು.ಯಾವುದೇ ಒಂದು ಕ್ಷೇತ್ರ ಲಕ್ಕಿ, ಅನ್‌ಲಕ್ಕಿ ಅಂತ ಅಲ್ಲ.
ನನಗೆ ಅದರ ಮೇಲೆ ನಂಬಿಕೆಯೂ ಇಲ್ಲ.
ವರುಣಾ ಕ್ಷೇತ್ರವೇ ನನ್ನ ಹುಟ್ಟೂರು.ವರುಣಾ ಹೋಬಳಿ ಕಾರಣಕ್ಕೆ ವರುಣಾ ಕ್ಷೇತ್ರ ಅಂತ ಕರೆದಿದ್ದಾರೆ.ನನ್ನ ಕೊನೆ ಚುನಾವಣೆ ಹುಟ್ಟೂರುನಲ್ಲಿ ಆಗಬೇಕೆಂಬ ಆಸೆ.
ವರುಣಾ ಜೊತೆಗೆ ಕೋಲಾರ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ.
ಕೋಲಾರ ಕ್ಷೇತ್ರದ ಜನರಿಂದ ಹೆಚ್ಚು ಒತ್ತಡ ಬರುತ್ತಿದೆ.ಈ ಬಾರಿ ಎರಡು ಕ್ಷೇತ್ರದಲ್ಲಿ ಸ್ಪರ್ಧೆ ಬಗ್ಗೆ ಸಿದ್ದರಾಮಯ್ಯ ಸ್ಪಷ್ಟ ಪಡಿಸಿದರು.ವರುಣಾ ಕ್ಷೇತ್ರದಿಂದ
ಯತೀಂದ್ರನೇ ನಾನು ಸ್ಪರ್ಧೆ ಮಾಡಲ್ಲ ಅಂದಿದ್ದಾರೆ.
ಅದರ ಬಗ್ಗೆ ಹೆಚ್ಚಿನ ಚರ್ಚೆ ಬೇಡ ಎಂದು ವಿವಾದಕ್ಕೆ ಅಂತ್ಯ ಹಾಡಿದರು…