ಬುದ್ದಿ ಮಾಂದ್ಯ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ…ಕಂಬಕ್ಕೆ ಕಟ್ಟಿ ಮಾರಣಾಂತಿಕ ಹಲ್ಲೆ…
- CrimeMysore
- March 29, 2023
- No Comment
- 58
ಬುದ್ದಿ ಮಾಂದ್ಯ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ…ಕಂಬಕ್ಕೆ ಕಟ್ಟಿ ಮಾರಣಾಂತಿಕ ಹಲ್ಲೆ…
ಹುಣಸೂರು,ಮಾ29,Tv10 ಕನ್ನಡ
ಬುದ್ದಿ ಮಾಂದ್ಯ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನ ಕಂಬಕ್ಕೆ ಕಟ್ಟಿ ಥಳಿಸಿದ ಘಟನೆ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಉಯಿಗೌಡನಹಳ್ಳಿಯಲ್ಲಿ ನಡೆದಿದೆ.
ಮಹದೇವ (57) ಅತ್ಯಾಚಾರಕ್ಕೆ ಯತ್ನಿಸಿ ಗ್ರಾಮಸ್ಥರಿಂದ ಹಲ್ಲೆಗೊಳಗಾದ ಆರೋಪಿ. ಬುದ್ದಿಮಾಂದ್ಯ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ವೇಳೆ ಬಾಲಕಿ ಕೂಗಾಡಿದ್ದಾಳೆ.ಶಬ್ಧ ಕೇಳಿ ಗ್ರಾಮಸ್ಥರು ಸ್ಥಳಕ್ಕೆ ಬಂದಿದ್ದಾರೆ. ನಂತರ ಆರೋಪಿಯನ್ನು ಕಂಬಕ್ಕೆ ಕಟ್ಟಿ ಗ್ರಾಮಸ್ಥರು ಥಳಿಸಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಹುಣಸೂರು ಗ್ರಾಮಾಂತರ ಠಾಣಾ ಪೊಲೀಸರು ಆರೋಪಿ ಮಹದೇವನನ್ನು ವಶಕ್ಕೆ ಪಡೆದಿದ್ದಾರೆ.ತೀವ್ರ ಹಲ್ಲೆಗೆ ಒಳಗಾಗಿದ್ದ ಮಹದೇವ ಅಸ್ವಸ್ಥನಾಗಿದ್ದ ಕಾರಣ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ. ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…